• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ‘ನಾಯಿ ಕಾದಿತ್ತು, ಅನ್ನ ಹಳಸಿತ್ತು’ ಗಾದೆ ತರ ಬಿಜೆಪಿಯವರು ಒಬ್ಬೊಬ್ಬ ಶಾಸಕರನ್ನು 15-20 ಕೋಟಿ ನೀಡಿ ಖರೀದಿಸಿದ್ರು: ಸಿದ್ದರಾಮಯ್ಯ

Siddaramaiah: ‘ನಾಯಿ ಕಾದಿತ್ತು, ಅನ್ನ ಹಳಸಿತ್ತು’ ಗಾದೆ ತರ ಬಿಜೆಪಿಯವರು ಒಬ್ಬೊಬ್ಬ ಶಾಸಕರನ್ನು 15-20 ಕೋಟಿ ನೀಡಿ ಖರೀದಿಸಿದ್ರು: ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

ನಾವು ಸರ್ಕಾರ ರಚನೆ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ, ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಕುಮಾರಸ್ವಾಮಿ ಸರ್ಕಾರ 1 ವರ್ಷ 2 ತಿಂಗಳಿಗೆ ಬಿದ್ದುಹೋಯಿತು. ಇದಕ್ಕೆ ಕಾರಣ ಕುಮಾರಸ್ವಾಮಿ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಉಳಿದುಕೊಂಡು ಶಾಸಕರು, ಸಚಿವರ ಭೇಟಿಗೆ ಅವಕಾಶ ನೀಡದಿರುವುದು ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮುಂದೆ ಓದಿ ...
  • Share this:

ಬೆಂಗಳೂರು: ಬಿಜೆಪಿ ಪಕ್ಷ (BJP) ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿದ್ದಲ್ಲ, 113 ಸ್ಥಾನಗಳಲ್ಲಿ ಗೆದ್ದರೆ ಮಾತ್ರ ಆ ಸರ್ಕಾರಕ್ಕೆ ಜನಾಶೀರ್ವಾದ ಇದೆ ಎಂದರ್ಥ ಎಂದು (Opposition Leader) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದು 104, ಜೆಡಿಎಸ್‌ 37 ಮತ್ತು ಕಾಂಗ್ರೆಸ್‌ 80 ಸ್ಥಾನಗಳಲ್ಲಿ ಗೆದ್ದಿತ್ತು. ಕಾಂಗ್ರೆಸ್‌ ಪಕ್ಷ 38.18% ಮತ, ಬಿಜೆಪಿ 36.42% ಮತಗಳನ್ನು ಪಡೆದಿತ್ತು. ಬಿಜೆಪಿ ನಮಗಿಂತ ಕಡಿಮೆ ಪ್ರಮಾಣದ ಮತಗಳನ್ನು ಪಡೆದಿದ್ದರೂ ಹೆಚ್ಚು ಸ್ಥಾನಗಳಲ್ಲಿ ಗೆದ್ದಿತ್ತು. ಇದೇ ಪ್ರಜಾಪ್ರಭುತ್ವದ ವೈಶಿಷ್ಟ್ಯ ಎಂದು ಅವರು ಹೇಳಿದರು.


ಅಲ್ಲದೇ, ಸರ್ಕಾರ ರಚನೆಗೆ ಯಡಿಯೂರಪ್ಪ ಅವರನ್ನು ಆಹ್ವಾನಿಸಿದ ರಾಜ್ಯಪಾಲರು, ಬಹುಮತ ಸಾಬೀತು ಮಾಡುವಂತೆ ತಿಳಿಸಿದ್ದರು. ಆದರೆ ಬಹುಮತ ಸಾಬೀತು ಮಾಡಲು ಸಾಧ್ಯವಾಗದ್ದರಿಂದ ಅವರ ಸರ್ಕಾರ ಬಿದ್ದು ಹೋಯಿತು. ನಂತರ ನಾವು ಸರ್ಕಾರ ರಚನೆ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ, ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಕುಮಾರಸ್ವಾಮಿ ಸರ್ಕಾರ 1 ವರ್ಷ 2 ತಿಂಗಳಿಗೆ ಬಿದ್ದುಹೋಯಿತು. ಇದಕ್ಕೆ ಕಾರಣ ಕುಮಾರಸ್ವಾಮಿ ವೆಸ್ಟೆಂಡ್‌ ಹೋಟೆಲ್‌ನಲ್ಲಿ ಉಳಿದುಕೊಂಡು ಶಾಸಕರು, ಸಚಿವರ ಭೇಟಿಗೆ ಅವಕಾಶ ನೀಡದಿರುವುದು ಎಂದು ಸಿದ್ದರಾಮಯ್ಯ ಆರೋಪಿಸಿದರು.


‘ನಾಯಿ ಕಾದಿತ್ತು, ಅನ್ನ ಹಳಸಿತ್ತು’


‘ನಾಯಿ ಕಾದಿತ್ತು, ಅನ್ನ ಹಳಸಿತ್ತು’ ಎಂಬ ಗಾದೆ ಮಾತಿನಂತೆ ಈ ಸಂದರ್ಭವನ್ನು ಕಾಯುತ್ತಿದ್ದ ಬಿಜೆಪಿಯವರು ಒಬ್ಬೊಬ್ಬ ಶಾಸಕರಿಗೆ 15 ರಿಂದ 20 ಕೋಟಿ ಹಣ ನೀಡಿ ಖರೀದಿಸಿ, ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆಪರೇಷನ್‌ ಕಮಲದ ಮೂಲಕ ಸರ್ಕಾರ ರಚನೆ ಮಾಡಿದರು. ಕೋಮುವಾದಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ನಾವು ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದ್ದೆವು. ಸಮ್ಮಿಶ್ರ ಸರ್ಕಾರವನ್ನು ಕುಮಾರಸ್ವಾಮಿ ಅವರಿಂದ ಉಳಿಸಿಕೊಳ್ಳಲಾಗಲಿಲ್ಲ. ಅಲ್ಲಮಪ್ರಭು ಅವರ ಮಾತಿನಂತೆ ಕೊಟ್ಟ ಕುದುರೆಯನ್ನು ಏರದವ ವೀರನೂ ಅಲ್ಲ, ಶೂರನೂ ಅಲ್ಲ, ಹೀಗೆ ಕುಮಾರಸ್ವಾಮಿಗೆ ಕೊಟ್ಟ ಅಧಿಕಾರವನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: Siddaramaiah: ನಾವು ಅಧಿಕಾರಕ್ಕೆ ಬಂದ್ರೆ ಹೆಣ್ಮಕ್ಕಳ ಸಾಲ ಮನ್ನಾ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ 10 ಸಾವಿರ ಕೋಟಿ! ಕೋಲಾರದಲ್ಲಿ ಸಿದ್ದರಾಮಯ್ಯ ಭರವಸೆ


ಇನ್ನು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿ ಪೂರ್ಣ 5 ವರ್ಷಗಳ ಕಾಲ ಆಡಳಿತ ನಡೆಸಿದ್ದೆ, ದೇವರಾಜ ಅರಸು ಅವರನ್ನು ಬಿಟ್ಟರೆ ಪೂರ್ಣಾವಧಿಗೆ ಆಡಳಿತ ನಡೆಸಿದ್ದು ನಾನು ಮಾತ್ರ ಎಂದಿರುವ ಸಿದ್ದರಾಮಯ್ಯ, 2013ರಲ್ಲಿ ನಾವು ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ಅದರ ಜೊತೆಗೆ 30 ಹೊಸ ಕಾರ್ಯಕ್ರಮಗಳನ್ನು ಕೂಡ ಜಾರಿ ಮಾಡಿದ್ದೆವು. ಇದು ಬಸವಾದಿ ಶರಣರ ಕರ್ಮಭೂಮಿ, ನಾವು ಕೂಡ ಬಸವಾದಿ ಶರಣರಂತೆ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಪಕ್ಷ 2018ರಲ್ಲಿ 600 ಭರವಸೆಗಳನ್ನು ನೀಡಿ ಅವುಗಳಲ್ಲಿ 50 ರಿಂದ 60 ಭರವಸೆಗಳನ್ನು ಕೂಡ ಈಡೇರಿಸಿಲ್ಲ. ಬೇರೆಯವರ ತಾಕತ್‌, ಧಮ್‌ ಪ್ರಶ್ನೆ ಮಾಡುವ ಬಸವರಾಜ ಬೊಮ್ಮಾಯಿ ಒಂದೇ ವೇದಿಕೆಯ ಮೇಲೆ ಚುನಾವಣಾ ಪ್ರಣಾಳಿಕೆ ಮತ್ತು ಅವುಗಳ ಈಡೇರಿಕೆ ಬಗ್ಗೆ ಚರ್ಚೆಗೆ ಬರಲಿ. ಸ್ಥಳವನ್ನು ಕೂಡ ಬೊಮ್ಮಾಯಿ ಅವರೇ ನಿಗದಿ ಮಾಡಲಿ ಎಂದು ಸವಾಲು ಹಾಕಿದ್ದೆ, ಅದರ ಬಗ್ಗೆ ಈ ವರೆಗೆ ಬೊಮ್ಮಾಯಿ ಮಾತನಾಡಿಲ್ಲ. ಬಿಜೆಪಿ ಬಂದಮೇಲೆ ಒಂದೇ ಒಂದು ಹೊಸ ಮನೆ ನಿರ್ಮಾಣ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿದ್ಧಾರೆ.


ಪ್ರಭು ಚೌಹಾಣ್ ವಿರುದ್ಧ ವಾಗ್ದಾಳಿ


ಬಿಜೆಪಿ ಸರ್ಕಾರದ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್‌ ವಿರುದ್ಧವೂ ಕಿಡಿಕಾರಿರುವ ಸಿದ್ದರಾಮಯ್ಯ, ಅವರಿಗೆ ಮೇಕೆ, ದನಗಳು ಎಂದರೆ ಯಾವು ಎಂಬುದೇ ಗೊತ್ತಿಲ್ಲ. ಸದನದಲ್ಲಿ ನನ್ನ ಪ್ರಶ್ನೆಗೆ ಕೂಡ ತಪ್ಪು ತಪ್ಪಾಗಿ ಲಿಖಿತ ಉತ್ತರ ನೀಡಿದ್ದರು. ಅವರ ವಿರುದ್ಧ ಸದನದ ಹಕ್ಕು ಚ್ಯುತಿ ಮಂಡಿಸಬಹುದಿತ್ತು, ಆದರೆ ನೀನು ಪೆದ್ದ ಆಗಿರುವ ಕಾರಣಕ್ಕೆ ನಿನ್ನ ವಿರುದ್ಧ ಯಾವುದೇ ನೋಟಿಸ್‌ ನೀಡುವುದಿಲ್ಲ ಎಂದಿದ್ದೆ. ಒಂದೇ ಪ್ರಶ್ನೆಗೆ ನೀಡಿರುವ ಎರಡು ಉತ್ತರದಲ್ಲಿ 15 ಲಕ್ಷ ಜಾನುವಾರುಗಳ ಸಂಖ್ಯೆಯಲ್ಲಿ ವ್ಯತ್ಯಾಸ ಇತ್ತು, ಇಷ್ಟು ಜಾನುವಾರುಗಳನ್ನು ನೀನೇ ತಿಂದ್ಯೇನಪ್ಪಾ ಎಂದು ಕೇಳಿದ್ದೆ. ಚರ್ಮಗಂಟು ರೋಗ ಬಂದಿದೆ, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿದ್ದೀರ ಎಂದು ಪ್ರಶ್ನೆ ಕೇಳಿದ್ದಕ್ಕೆ ಜನವರಿ 15ರೊಳಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸುತ್ತೇವೆ ಎಂದು ಹೇಳಿದ್ದರು, ಆದರೆ ಇನ್ನೂ 10 ರಿಂದ 15 ಲಕ್ಷ ಜಾನುವಾರಿಗಳಿಗೆ ಲಸಿಕೆ ಹಾಕಿಲ್ಲ. ಇಂಥಾ ಹಸಿ ಸುಳ್ಳು ಹೇಳೋರು ನಿಮ್ಮ ಶಾಸಕರಾಗಬೇಕ? ಎಂದು ಪ್ರಶ್ನಿಸಿದರು.


ಇದನ್ನೂ ಓದಿ: Siddaramaiah: ಮೋದಿ ಕರ್ನಾಟಕಕ್ಕೆ 100 ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ! ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ


ಇನ್ನು, 2013ರಲ್ಲಿ ನಾವು ಜನರಿಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿ, ಅದರ ಜೊತೆಗೆ 30 ಹೊಸ ಕಾರ್ಯಕ್ರಮಗಳನ್ನು ಕೂಡ ಜಾರಿ ಮಾಡಿದ್ದೆವು. ಇದು ಬಸವಾದಿ ಶರಣರ ಕರ್ಮಭೂಮಿ, ನಾವು ಕೂಡ ಬಸವಾದಿ ಶರಣರಂತೆ ನುಡಿದಂತೆ ನಡೆದಿದ್ದೇವೆ. ಬಿಜೆಪಿ ಪಕ್ಷ 2018ರಲ್ಲಿ 600 ಭರವಸೆಗಳನ್ನು ನೀಡಿ ಅವುಗಳಲ್ಲಿ 50 ರಿಂದ 60 ಭರವಸೆಗಳನ್ನು ಕೂಡ ಈಡೇರಿಸಿಲ್ಲ. ಬೇರೆಯವರ ತಾಕತ್‌, ಧಮ್‌ ಪ್ರಶ್ನೆ ಮಾಡುವ ಬಸವರಾಜ ಬೊಮ್ಮಾಯಿ ಒಂದೇ ವೇದಿಕೆಯ ಮೇಲೆ ಚುನಾವಣಾ ಪ್ರಣಾಳಿಕೆ ಮತ್ತು ಅವುಗಳ ಈಡೇರಿಕೆ ಬಗ್ಗೆ ಚರ್ಚೆಗೆ ಬರಲಿ. ಸ್ಥಳವನ್ನು ಕೂಡ ಬೊಮ್ಮಾಯಿ ಅವರೇ ನಿಗದಿ ಮಾಡಲಿ ಎಂದು ಸವಾಲು ಹಾಕಿದ್ದೆ, ಅದರ ಬಗ್ಗೆ ಈ ವರೆಗೆ ಬೊಮ್ಮಾಯಿ ಮಾತನಾಡಿಲ್ಲ. ಬಿಜೆಪಿ ಬಂದಮೇಲೆ ಒಂದೇ ಒಂದು ಹೊಸ ಮನೆ ನಿರ್ಮಾಣ ಮಾಡಿಕೊಟ್ಟಿಲ್ಲ ಎಂದು ಹೇಳಿದ್ದಾರೆ.


ನಾನು ಮುಖ್ಯಮಂತ್ರಿಯಾಗಿರುವಾಗ 22 ಲಕ್ಷದ 27 ಸಾವಿರ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿದ್ದ 50,000 ವರೆಗಿನ ಒಟ್ಟು 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ಬೊಮ್ಮಾಯಿ, ಯಡಿಯೂರಪ್ಪ, ಮೋದಿ ಯಾರಾದರೂ ರೈತರ ಸಾಲ ಮನ್ನಾ ಮಾಡಿದ್ದಾರ? ಈ ಬಿಜೆಪಿ ಸರ್ಕಾರ ಬರೀ ಲೂಟಿ ಮಾಡುತ್ತಿದೆ. ನಾವು ಬಾಲ್ಯದಲ್ಲಿ ಓದಿದ್ದ ಕಥೆ ಅಲಿಬಾಬಾ ಮತ್ತು 40 ಮಂದಿ ಕಳ್ಳರ ತಂಡಕ್ಕೆ ಈ ಸರ್ಕಾರವನ್ನು ಹೋಲಿಸಬಹುದು. 40% ಕಮಿಷನ್‌ ನೀಡಲಾಗದೆ 3 ಜನ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡರು. ಇಂದು ವಿಧಾನಸೌಧದ ಗೋಡೆಗಳು ಲಂಚ, ಲಂಚ, ಲಂಚ ಎಂದು ಪಿಸುಗುಟ್ಟಲು ಆರಂಭ ಮಾಡಿದೆ. ಈಗ ಅತ್ಯಂತ ಕೆಟ್ಟ, ಭ್ರಷ್ಟ ಸರ್ಕಾರ ರಾಜ್ಯದಲ್ಲಿದೆ. ಇದನ್ನು ನೀವು ಇಷ್ಟು ಕಾಲ ಸಹಿಸಿಕೊಂಡಿದ್ದೀರಿ. ಮುಂದೆ ಮೇ ತಿಂಗಳಿನಲ್ಲಿ ಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಬೇರು ಸಹಿತ ಕಿತ್ತು, ಕಾಂಗ್ರೆಸ್‌ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸುವ ಕೆಲಸ ಮಾಡಬೇಕು ಎಂದು ತಮ್ಮಲ್ಲಿ ಕೈಮುಗಿದು ಮನವಿ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಕೇಳಿಕೊಂಡಿದ್ದಾರೆ.

Published by:Avinash K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು