• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ಸಿಎಂ ಸ್ಥಾನದಿಂದ ಬಿಎಸ್‌ವೈ ಇಳಿಸಿದ್ದೇಕೆ, ಶೆಟ್ಟರ್‌ಗೆ ಟಿಕೆಟ್ ತಪ್ಪಿಸಿದ್ದೇಕೆ? ಸಿದ್ದರಾಮಯ್ಯ ಪ್ರಶ್ನೆ

Siddaramaiah: ಸಿಎಂ ಸ್ಥಾನದಿಂದ ಬಿಎಸ್‌ವೈ ಇಳಿಸಿದ್ದೇಕೆ, ಶೆಟ್ಟರ್‌ಗೆ ಟಿಕೆಟ್ ತಪ್ಪಿಸಿದ್ದೇಕೆ? ಸಿದ್ದರಾಮಯ್ಯ ಪ್ರಶ್ನೆ

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ? ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಂದೆ ಓದಿ ...
  • News18 Kannada
  • 4-MIN READ
  • Last Updated :
  • Bangalore, India
  • Share this:

ಬೆಂಗಳೂರು: ರಾಜ್ಯದ ಲಿಂಗಾಯತ ನಾಯಕರನ್ನು (Lingayat Leaders) ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ರಾಜ್ಯದ ಲಿಂಗಾಯತರು ಸರಿಯಾಗಿ ಅರ್ಥಮಾಡಿಕೊಂಡಿದ್ದಾರೆ. ನಿಮ್ಮ ಇಡೀ ಭಾಷದಲ್ಲಿ ರಾಜ್ಯದಲ್ಲಿ (BJP) ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಬಿ.ಎಸ್.ಯಡಿಯೂರಪ್ಪನವರ (BS Yediyurappa) ಹೆಸರನ್ನು ಒಮ್ಮೆಯೂ ಎತ್ತಲಿಲ್ಲ ಯಾಕೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯದಲ್ಲಿ ಮಾಡಿದ ಚುನಾವಣಾ ಭಾಷಣವನ್ನು ಖಂಡಿಸಿ ಟಾಂಗ್ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, (Siddaramaiah) ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.


ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಕಾಲದಲ್ಲಿಯೇ ಬಿ.ಎಸ್.ಯಡಿಯೂರಪ್ಪನವರನ್ನು  ಜೈಲಿಗೆ ಕಳಿಸಿದಿರಿ, ಅವರನ್ನು ಎರಡೆರಡು ಬಾರಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದಿರಿ, ಅವರ ಮಗನಿಗೆ ಕನಿಷ್ಠ ಶಾಸಕನನ್ನಾಗಿ ಮಾಡಲಿಲ್ಲ, ಸಚಿವರನ್ನಾಗಿ ಮಾಡಲಿಲ್ಲ. ಈಗ ಐಟಿ, ಇಡಿ, ಸಿಬಿಐ ಮೂಲಕ ಬಾಯಿಮುಚ್ಚಿಸಿ ಕೂರಿಸಿರುವವರು ನೀವೇ ಅಲ್ಲವೇ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಲಿಂಗಾಯತ ಸಮುದಾಯದಲ್ಲಿ ಎರಡನೇ ತಲೆಮಾರಿನ ನಾಯಕರೇ ಇರಬಾರದೆಂದು ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಂಜಯ ಪಾಟೀಲ್, ಸೊಗಡು ಶಿವಣ್ಣ ಹೀಗೆ ಸಾಲು ಸಾಲು ನಾಯಕರಿಗೆ ಈ ಬಾರಿ ಟಿಕೆಟ್ ನೀಡದೆ ಅವರ ರಾಜಕೀಯ ಜೀವನವನ್ನೇ ಮುಗಿಸುವ ಹುನ್ನಾರ ಮಾಡಿರುವವರು ನೀವೇ ಅಲ್ಲವೇ? ಎಂದು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿ: Pratap Simha: ಖರ್ಗೆಯವರೇ ಸಿದ್ದರಾಮಯ್ಯನವರ ಚಾಳಿ ನಿಮಗೆ ಅಂಟೋದು ಬೇಡ, ನಿಮಗಿದು ಶೋಭೆಯಲ್ಲ: ಪ್ರತಾಪ್ ಸಿಂಹ


ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ


ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ಲಿಂಗಾಯತರ ಪ್ರಮುಖ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಯಾವ ಕಾರಣಕ್ಕೆ ಈ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಿದಿರಿ? ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ಅವರ ಮೇಲೆ ಭ್ರಷ್ಟಾಚಾರದ ಆರೋಪಗಳಿತ್ತಾ? ಸಿಡಿ ಹಗರಣ ಇತ್ತೇ? ಅವರು ಒಳ್ಳೆಯ ಆಡಳಿತಗಾರರರಾಗಿರಲಿಲ್ಲವೇ? ಯಾಕೆ ಅವರನ್ನು ಮೂಲೆಗೆ ತಳ್ಳಿದ್ದೀರಿ? ಅವರ ಈ ಪ್ರಶ್ನೆಗಳು ರಾಜ್ಯದ ಲಿಂಗಾಯತರ ಪ್ರಶ್ನೆಯೂ ಹೌದು. ಧಮ್-ತಾಕತ್ ಇದ್ದರೆ ಇದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದ್ದಾರೆ. ಅಲ್ಲದೇ, ಬಂಜಾರ ಸಮುದಾಯ ಮತ್ತು ಕಾಂಗ್ರೆಸ್ ಸಂಬಂಧಕ್ಕೆ ಹುಳಿ ಹಿಂಡುವ ನಿಮ್ಮ ಕುತಂತ್ರ ಫಲ ನೀಡಲಾರದು. ಬಂಜಾರರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಿದ್ದು ಕಾಂಗ್ರೆಸ್ ಪಕ್ಷ. ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಭೂ ಸುಧಾರಣೆ ಕಾಯ್ದೆಗೆ ಕ್ರಾಂತಿಕಾರಿ ತಿದ್ದುಪಡಿಯನ್ನು ತಂದಿರುವುದು ರಾಜ್ಯದ ಕಾಂಗ್ರೆಸ್ ಸರ್ಕಾರ ಎನ್ನುವುದು ನಿಮಗೆ ತಿಳಿದಿಲ್ಲವೇ? ಎಂದು ಹೇಳಿದ್ದಾರೆ.


'ಮೋದಿಯವ್ರೇ, ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ!


ಇನ್ನು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕಾಲ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ, ಅಲ್ಲಿರುವ ಅದಾನಿ, ಅಂಬಾನಿಗಳು ಕಾಣಲಿಲ್ಲವೇ? ನಿಮ್ಮ ಅಕ್ಕಪಕ್ಕದಲ್ಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಭ್ರಷ್ಟ ಮುಖಗಳೂ ಕಾಣಲಿಲ್ಲವೇ ನರೇಂದ್ರ ಮೋದಿ ಅವರೇ? ಎಂದು ಕೇಳಿರುವ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ಸಚಿವರ 40% ಕಮಿಷನ್ ಕಿರುಕುಳದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ನಿಮ್ಮ ಕಾರ್ಯಾಲಯಕ್ಕೆ ಬರೆದ ಪತ್ರವೂ ನಿಮಗೆ ನೆನಪಾಗಲಿಲ್ಲವೇ? ನಿಮ್ಮದೇ ಸಚಿವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಕುಟುಂಬದ ನೆನಪೂ ನಿಮಗೆ ಆಗಲಿಲ್ಲವೇ? ಎಂದಿದ್ದಾರೆ.


ಇದನ್ನೂ ಓದಿ: Siddaramaiah: ಶೋಭಾ ಕರಂದ್ಲಾಜೆಯನ್ನು ವಿಚಾರಣೆಗೊಳಪಡಿಸಿ ಚುನಾವಣಾ ಪ್ರಚಾರದಿಂದ ನಿಷೇಧಿಸಿ: ಸಿದ್ದರಾಮಯ್ಯ ಆಕ್ರೋಶ


ಬೈಗುಳದ ಆರೋಪಕ್ಕೆ ಕೌಂಟರ್


ನರೇಂದ್ರ ಮೋದಿಯವರೇ ನಿಮ್ಮ ಇಡೀ ರಾಜಕೀಯ ಬದುಕೇ ಒಂದು ಸುಳ್ಳಿನ ಕೋಟೆ. ಅದು ಮುರಿದು ಬೀಳುವ ಕಾಲ ಬಂದಿದೆ. ಕಾಂಗ್ರೆಸ್ ನಿಮ್ಮನ್ನು 91 ಬಾರಿ ನಿಂದಿಸಿದೆ ಎನ್ನುವುದು ನಿಮ್ಮ ಇತ್ತೀಚಿನ ಸುಳ್ಳು ಎಂದಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರನ್ನು ನಿಂದಿಸುವುದೇ ನಿಮ್ಮ ಮತ್ತು ನಿಮ್ಮ ಪಕ್ಷದ ನಾಯಕರ ದಿನಚರಿ ಅಲ್ಲವೇ? ಸೋನಿಯಾ ಗಾಂಧಿಯವರನ್ನು ಜರ್ಸಿ ಕೌ, ಬಾರ್ ಡಾನ್ಸರ್, ಕಾಂಗ್ರೆಸ್ ಕಿ ವಿಧವಾ ಇನ್ನೂ ಏನೇನೋ ಅಂದವರು ನೀವೇ ಅಲ್ಲವೇ? ನಿಮ್ಮದೇ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಅವರು ನಿನ್ನೆ ತಾನೆ ಸೋನಿಯಾಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿಲ್ಲವೇ? ನಿಮ್ಮ ರಕ್ತದ ಕಣಕಣದಲ್ಲಿಯೂ ದ್ವೇಷಾಸೂಯೆಯ ವಿಷ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.




ಇನ್ನು, ಕಳೆದ ಮೂರುವರೆ ವರ್ಷಗಳಲ್ಲಿ ಒಂದುವರೆ ಲಕ್ಷ ಕೋಟಿ ರೂಪಾಯಿಗಳನ್ನು ಲೂಟಿ ಹೊಡೆದಿರುವ ರಾಜ್ಯದ ಬಿಜೆಪಿ ಸಚಿವರಿಗೆ ಖಂಡಿತ ಇದು ಅಮೃತ ಕಾಲ. ಆದರೆ ನಿಮ್ಮಂತಹ ಭ್ರಷ್ಟರ ಸರ್ಕಾರ ಪಡೆದ ರಾಜ್ಯದ ಜನತೆಗೆ ಇದು ವಿಷಕಾಲ ಎಂದಿರುವ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ಸರ್ಕಾರ 9 ಲಕ್ಷ ಮನೆಗಳನ್ನು ಕಟ್ಟಿದೆ ಎಂಬ ಹಸಿ ಹಸಿ ಸುಳ್ಳು ಹೇಳಿದ್ದೀರಲ್ಲಾ, ನಾವು ಕಟ್ಟಿರುವ ಮನೆಗಳ ಲೆಕ್ಕವನ್ನು ನಿಮಗೆ ಕೊಟ್ಟು ನಿಮ್ಮಿಂದ ಸುಳ್ಳು ಹೇಳಿಸಿದ ವಸತಿ ಸಚಿವರನ್ನು ಒಮ್ಮೆ ಜನರ ಮಧ್ಯೆ ಬಹಿರಂಗ ಚರ್ಚೆಗೆ ಕರೆತನ್ನಿ ಎಂದು ಆಗ್ರಹಿಸಿದ್ದಾರೆ.

First published: