ಬೆಂಗಳೂರು(ಆಗಸ್ಟ್. 09): ಉತ್ತರ ಕರ್ನಾಟಕದ ಕೆಲವು ಕಡೆ ಭಾರಿ ಮಳೆಯಿಂದ ಮಲಪ್ರಭಾ ನದಿ ತಟದಲ್ಲಿ ನೆರೆಯ ಭೀತಿ ಸೃಷ್ಟಿಯಾಗಿದೆ. ನದಿ ತಟದಲ್ಲಿ ಬರುವ ರಾಮದುರ್ಗಾ, ಬಾದಾಮಿ ಹಾಗೂ ಹುನುಗಂದ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆ ಇಲ್ಲದಿದ್ದರೂ ನೆರೆಯ ಭೀತಿ ಎದರಾಗಿದೆ. ಈ ಹಿನ್ನೆಲೆಯಲ್ಲಿ ಬಾದಾಮಿ ಕ್ಷೇತ್ರದ ಶಾಸಕರು ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ.
ಈ ಬಗ್ಗೆ ಟ್ವೀಟರ್ನಲ್ಲಿ ತಿಳಿಸಿರುವ ಸಿದ್ದರಾಮಯ್ಯ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸಿ ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಅವರಿಗೆ ಸೂಚಿಸಿದ್ದೇನೆ. ಜನರು ಹೆದರುವ ಅಗತ್ಯವಿಲ್ಲ ಎಂದಿದ್ದಾರೆ.
ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಾಗಲಕೋಟೆ ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರರಿಗೆ ಸೂಚಿಸಿದ್ದೇನೆ. ಇದೇ ವೇಳೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿದೆ.
— Siddaramaiah (@siddaramaiah) August 9, 2020
ಕೊರೋನಾ ಸೊಂಕಿಗೆ ಒಳಗಾಗಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ನವೀಲು ತೀರ್ಥ ಜಲಾಶಯದಿಂದ 300 ಕ್ಯೂಸೆಕ್ ನೀರು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಮಲ ಪ್ರಭಾ ನದಿಯಲ್ಲಿ ಪ್ರವಾಹ ಭೀತಿ ಊಂಟಾಗಿದೆ. ಬಾಗಲಕೋಟೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತವಾಗಿದೆ.
ಇದನ್ನೂ ಓದಿ : ಮಲಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ ಭೀತಿ ; ಘಟಪ್ರಭಾ ನದಿ ಪಾತ್ರದಲ್ಲಿ ಮುಂದುವರೆದ ಆತಂಕ..!
ದೇಗುಲದ ಸುತ್ತಲೂ ನೀರು ಆವರಿಸಿರುವುದರಿಂದ ಭಕ್ತರು ಪರದಾಡುವಂತಾಗಿದೆ. ನಾರಾಯಣಪುರ ಡ್ಯಾಂಗೆ ನೀರು ಬಿಟ್ಟ ಪರಿಣಾಮ ವಿಜಯಪುರ ಜಿಲ್ಲೆಯ ಹಲವು ಗ್ರಾಮಗಳ ಜಮೀನಿಗೆ ನೀರು ನುಗ್ಗಿದೆ. ಅಪಾರ ಪ್ರಮಾಣದ ತೊಗರಿ, ಸಜ್ಜೆ, ಕಬ್ಬು ಬೆಳೆ ನಾಶವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ