HOME » NEWS » State » OPPOSITION PARTY LEADERS OPPOSING TO NAMING BANGALORE YALAHANKA FLYOVER AS VD SAVARKAR MAK

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು ನಾಮಕರಣ; ಸರ್ಕಾರದ ತೀರ್ಮಾನಕ್ಕೆ ವಿರೋಧ ಪಕ್ಷದ ನಾಯಕರು ಕಿಡಿ

ನಾಳೆ ಸಾವರ್ಕರ್ ಅವರ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಉದ್ಘಾಟಿಸಲಿರುವ ಯಲಹಂಕದ ನೂತನ ಮೇತ್ಸೇತುವೆಗೆ ವಿ.ಡಿ. ಸಾವರ್ಕರ್ ಅವರ ಹೆಸರನ್ನು ನಾಮಕರಣ ಮಾಡಲು ಮುಂದಾಗಿದ್ದಾರೆ.

news18-kannada
Updated:May 27, 2020, 3:01 PM IST
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್‌ ಹೆಸರು ನಾಮಕರಣ; ಸರ್ಕಾರದ ತೀರ್ಮಾನಕ್ಕೆ ವಿರೋಧ ಪಕ್ಷದ ನಾಯಕರು ಕಿಡಿ
ಮಾಜಿ ಸಿಎಂಗಳಾದ ಎಚ್.ಡಿ. ಕುಮಾರಸ್ವಾಮಿ-ಸಿದ್ದರಾಮಯ್ಯ.
  • Share this:
ಬೆಂಗಳೂರು (ಮೇ 27); ಯಲಹಂಕ ಮೇಲ್ಸೇತುವೆಗೆ ವಿ.ಡಿ. ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ಯ್ರ ಹೋರಾಟಗಾರರಿಗೆ ಮಾಡುವ ಅವಮಾನ ಎಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನಾಳೆ ಸಾವರ್ಕರ್ ಅವರ ಜನ್ಮ ದಿನಾಚರಣೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಉದ್ಘಾಟಿಸಲಿರುವ ಯಲಹಂಕದ ನೂತನ ಮೇತ್ಸೇತುವೆಗೆ ವಿ.ಡಿ. ಸಾವರ್ಕರ್ ಅವರ ಹೆಸರನ್ನು ನಾಮಕರಣ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಬಿಬಿಎಂಪಿ ಇಂದ ಈಗಾಗಲೇ ಅನುಮೋದನೆಯನ್ನೂ ಪಡೆಯಲಾಗಿದೆ.
ಆದರೆ, ಸರ್ಕಾರದ ಈ ನಿರ್ಧಾರವನ್ನು ಇಂದು ಟ್ವೀಟ್ ಮೂಲಕ ಟೀಕಿಸಿರುವ ಸಿದ್ದರಾಮಯ್ಯ, “ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ ಸೂತ್ರಧಾರರೇ ಹೊರತು, ಚುನಾಯಿತ ಸರ್ಕಾರ ಅಲ್ಲ ಎನ್ನುವುದಕ್ಕೆ ಯಲಹಂಕ ಮೇಲ್ಸೆತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ ಪುರಾವೆ. ನೀವು ವಿರೋಧ ಪಕ್ಷಗಳ ಸಹಕಾರ ಬಯಸುತ್ತಿರುವುದು ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ?ಯಲಹಂಕ ಮೇಲ್ಸೆತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ರಾಜ್ಯ ಸರ್ಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ಯಲಹಂಕ ಮೇಲ್ಸೇತುವೆಗೆ ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡಬೇಕು” ಎಂದು ಆಗ್ರಹಿಸಿದ್ದಾರೆ.ಇನ್ನೂ ಇದೇ ವಿಚಾರವಾಗಿ ಆಕ್ರೋಶ ಹೊರಹಾಕಿರುವ ಹೆಚ್.ಡಿ. ಕುಮಾರಸ್ವಾಮಿ, “ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲುಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು.ಸ್ವಾತಂತ್ರ್ಯಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹ ಪಡಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ : ಕರ್ನಾಕದಲ್ಲಿಂದು 122 ಕೋವಿಡ್​​-19 ಕೇಸ್​; 2,400ರ ಗಡಿ ದಾಟಿದ ಸೋಂಕಿತರ ಸಂಖ್ಯೆ
Youtube Video
First published: May 27, 2020, 2:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories