• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ನ್ಯಾಷನಲ್ ಲಾ ಸ್ಕೂಲ್‌ನಲ್ಲಿ ಸ್ಥಳೀಯರ ಮೀಸಲಾತಿಗೆ ವಿರೋಧ; ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

ನ್ಯಾಷನಲ್ ಲಾ ಸ್ಕೂಲ್‌ನಲ್ಲಿ ಸ್ಥಳೀಯರ ಮೀಸಲಾತಿಗೆ ವಿರೋಧ; ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

ದೆಹಲಿ ಹೈಕೋರ್ಟ್‌.

ದೆಹಲಿ ಹೈಕೋರ್ಟ್‌.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಶೇ.25 ರಷ್ಟು ಪ್ರಾತಿನಿಧ್ಯ ಕಲ್ಪಿಸಲು ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ನೀಡಲಾಗಿತ್ತು. ಆದರೆ, ಮೇ ತಿಂಗಳಲ್ಲಿ ರಾಜ್ಯಪಾಲರ ಅಂಗೀಕಾರ ಪಡೆದಿದ್ದ ಕರ್ನಾಟಕ ಡೊಮಿಸೈಲ್ ರಿಸರ್ವೇಷನ್ ಬಿಲ್ ವಿರೋಧಿಸಿ ಶುಭಮ್ ಕುಮಾರ್ ಝಾ ಎಂಬುವರರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಮುಂದೆ ಓದಿ ...
  • Share this:

ನವದೆಹಲಿ: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ನೂತನವಾಗಿ ಜಾರಿಗೆ ತಂದಿರುವ ಸ್ಥಳೀಯರಿಗೆ ಪ್ರಾತಿನಿಧ್ಯ ನೀಡುವ ರಾಜ್ಯ ಸರ್ಕಾರದ ಕರ್ನಾಟಕ ಡೊಮಿಸೈಲ್ ರಿಸರ್ವೇಷನ್ ಬಿಲ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಉಚ್ಛ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಶೇ.25 ರಷ್ಟು ಪ್ರಾತಿನಿಧ್ಯ ಕಲ್ಪಿಸಲು ಕಳೆದ ಫೆಬ್ರವರಿ ತಿಂಗಳಲ್ಲಿ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ನೀಡಲಾಗಿತ್ತು. ಆದರೆ, ಮೇ ತಿಂಗಳಲ್ಲಿ ರಾಜ್ಯಪಾಲರ ಅಂಗೀಕಾರ ಪಡೆದಿದ್ದ ಕರ್ನಾಟಕ ಡೊಮಿಸೈಲ್ ರಿಸರ್ವೇಷನ್ ಬಿಲ್ ವಿರೋಧಿಸಿ ಶುಭಮ್ ಕುಮಾರ್ ಝಾ ಎಂಬುವರರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಆದರೆ, ಶುಭಮ್ ಕುಮಾರ್ ಝಾ ಅವರು ಹೂಡಿದ್ದ ದಾವೆಯನ್ನು ಇಂದು ವಿಚಾರಣೆ ನಡೆಸಿದ ದೆಹಲಿ ಉಚ್ಛ ನ್ಯಾಯಾಲಯವು, "ಈ ಅರ್ಜಿ ವಿಚಾರಣೆ ನ್ಯಾಯಾಲಯದ ಸರಹದ್ದು ಮೀರಿದ್ದಾಗಿದೆ" ಎಂದು ತಿಳಿಸುವ ಮೂಲಕ ಅರ್ಜಿದಾರರ ಮನವಿಯನ್ನು ವಜಾಗೊಳಿಸಿದೆ.

ಕರ್ನಾಟಕ ರಾಜ್ಯ ವಿಧಾನ ಮಂಡಲದಲ್ಲಿ ಅನುಮೋದನೆಗೊಂಡಿರುವ ವಿಧೇಯಕವನ್ನು ದೆಹಲಿಯಲ್ಲಿ ಪ್ರಶ್ನಿಸುವುದರ ಔಚಿತ್ಯವನ್ನು ಪ್ರಶ್ನಿಸಿದ ನ್ಯಾಯಾಲಯವು, "ಭಾರತ ಸಂವಿಧಾನದ ಅನುಚ್ಚೇಧ 226(2)  ಅನುಗುಣವಾಗಿ ಭಾರತದ ಪ್ರಜೆ ಯಾವುದೇ ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲು ಹಕ್ಕುಳ್ಳವರಾಗಿದ್ದಾರೆ" ಎಂಬ ಅರ್ಜಿದಾರರ ವಾದವನ್ನು ಅಂಗೀಕರಿಸಲಿಲ್ಲ. ಅಲ್ಲದೆ, ಇದು ನ್ಯಾಯಾಲಯದ ಸರಹದ್ದು ಮೀರಿದೆ ಎಂದು ಅಭಿಪ್ರಾಯಪಟ್ಟು  ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ : ಪಾಕಿಸ್ತಾನದಲ್ಲಿ ರೈಲು ದುರಂತ; 29ಕ್ಕೂ ಹೆಚ್ಚು ಸಿಖ್‌ ಯಾತ್ರಾರ್ಥಿಗಳು ಧಾರುಣ ಸಾವು

ಕರ್ನಾಟಕದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಲ್ಲಿ ಸಮರ್ಥವಾಗಿ ವಾದ ಮಂಡಿಸಿದ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಹಾಗೂ ದೆಹಲಿಯಲ್ಲಿರುವ ರಾಜ್ಯದ ಕಾನೂನು ತಂಡಕ್ಕೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಅಭಿನಂದಿಸಿದ್ದಾರೆ.

Published by:MAshok Kumar
First published: