Rain Update| ಕರ್ನಾಟಕದಲ್ಲಿ ಜುಲೈ 16ರ ವರೆಗೆ ಆರೆಂಜ್ ಅಲರ್ಟ್​; ದೇಶದ ನಾನಾ ಭಾಗಗಳಲ್ಲೂ ನಡೆಯಲಿದೆ ವರುಣನ ಆರ್ಭಟ

ಜೂನ್​ನಲ್ಲಿ ವಾಡಿಕೆ ಮಳೆ ಕೊರತೆ ಅನುಭವಿಸಿದ್ದ ಕೇರಳದಲ್ಲಿ ಮುಂದಿನ ನಾಲ್ಕು ದಿನ ಭಾರೀ ಪ್ರಮಾಣದ ಮಳೆಯಾಗಲಿದ್ದು, ಇಡುಕ್ಕಿ, ಕಣ್ಣೂರು, ಕಸರಾಗೋಡ್​​ ಆರೆಂಜ್​ ಆಲರ್ಟ್​, ಮತ್ತು ಉಳಿದ ಜಿಲ್ಲೆಗಳಲ್ಲಿ ಹಳದಿ ಆಲರ್ಟ್​ ಘೋಷಿಸಲಾಗಿದೆ.

ಮಳೆಯ ಪ್ರಾತಿನಿಧಿಕ ಚಿತ್ರ

ಮಳೆಯ ಪ್ರಾತಿನಿಧಿಕ ಚಿತ್ರ

  • Share this:
    Karnataka Weather Update (ಜುಲೈ 13); ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮಾನ್ಸೂನ್​ನಿಂದಾಗಿ ಉತ್ತಮ ಮಳೆಯಾಗುತ್ತಿದೆ. ಅಲ್ಲದೆ, ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. "ಸೋಮವಾರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಜುಲೈ 16ರವರೆಗೂ ಮಳೆ ಮುಂದುವರೆಯಲಿದ್ದು, ಅಧಿಕ ಮಳೆಯಾಗಲಿದೆ" ಎಂದು ಹವಾಮಾನ ಇಲಾಖೆ ಬೆಂಗಳೂರು ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

    ದೇಶದೆಲ್ಲೆಡೆ ನೈರುತ್ಯ ಮುಂಗಾರು ಅಬ್ಬರ ಜೋರಾಗಿದ್ದು, ದಕ್ಷಿಣ ಭಾರತ ಸೇರಿದಂತೆ ಉತ್ತರ ಭಾರದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಿದೆ. ಭಾನುವಾರ- ಸೋಮವಾರ ಸುರಿದ ಭಾರಿ ಮಳೆಗೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ್​, ಗುಜರಾತ್​, ಹಿಮಾಚಲ ಪ್ರದೇಶದ ಜನ ಜೀವನ ಅಸ್ತ ವ್ಯಸ್ತವಾಗಿದೆ. ಈ ನಡುವೆ ಸುಡುವ ಬಿಸಿಲಿನಿಂದ ತತ್ತರಿಸಿರುವ ದೆಹಲಿ ಜನರು ಮಳೆಗಾಗಿ ಎದುರು ನೋಡುತ್ತಿದ್ದಾರೆ. ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಈಗಾಗಲೇ ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್​ ಆಲರ್ಟ್​ ಘೋಷಿಸಲಾಗಿದೆ. ಬಲವಾದ ಗಾಳಿ ಬೀಸುವ ಹಿನ್ನಲೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಈ ಗಾಳಿ ಗುಜರಾತ್ ​ವರೆಗೂ ಸಾಗಲಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

    ಕರ್ನಾಟಕ

    ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕಳೆದೊಂದು ವಾರದಿಂದ ಕೊಂಚ ವಿರಾಮ ನೀಡಿದ್ದ ಮಳೆ ಕಳೆದ ಮೂರು ದಿನಗಳಿಂದ ಬಿರುಸು ಕೊಂಡಿದೆ. ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿ ಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ.

    ಇದನ್ನೂ ಓದಿ; Corona 3rd Wave: ರಾಜ್ಯಕ್ಕೆ 3ನೇ ಕೊರೋನಾ ಅಲೆ ಭೀತಿ; ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆಗೆ ಸೂಚಿಸಿದ ಗೃಹ ಸಚಿವ

    ಕೇರಳ:

    ಜೂನ್​ನಲ್ಲಿ ವಾಡಿಕೆ ಮಳೆ ಕೊರತೆ ಅನುಭವಿಸಿದ್ದ ಕೇರಳದಲ್ಲಿ ಮುಂದಿನ ನಾಲ್ಕು ದಿನ ಭಾರೀ ಪ್ರಮಾಣದ ಮಳೆಯಾಗಲಿದ್ದು, ಇಡುಕ್ಕಿ, ಕಣ್ಣೂರು, ಕಸರಾಗೋಡ್​​ ಆರೆಂಜ್​ ಆಲರ್ಟ್​, ಮತ್ತು ಉಳಿದ ಜಿಲ್ಲೆಗಳಲ್ಲಿ ಹಳದಿ ಆಲರ್ಟ್​ ಘೋಷಿಸಲಾಗಿದೆ. ಮಳೆ ಹಿನ್ನಲೆ ಜನರು ಎಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ. ಕೇರಳದಲ್ಲಿ ಕಳೆದ 39 ವರ್ಷಗಳಲ್ಲಿಯೇ ಅತಿ ಕಡಿಮೆ ಯಾಗಿದೆ. ರಾಜ್ಯದಲ್ಲಿ ಕೇವಲ 408.44 ಮಿಮೀ ಮಳೆಯಾಗಿದೆ. ಇದು ಶೇ 36ರಷ್ಟು ಕಡಿಮೆ ಮಳೆ. ಜೂನ್​ನಲ್ಲಿ ಸಾಮಾನ್ಯವಾಗಿ 643 ಮಿ.ಮೀ ವಾಡಿಕೆ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇದನ್ನೂ ಓದಿ: Astrology: ಈ ಉದ್ಯೋಗದಲ್ಲಿರುವ ವೃಶ್ಚಿಕರಾಶಿಯರಿಗೆ ಇಂದು ಅದೃಷ್ಟ; ಇಲ್ಲಿದೆ 12 ರಾಶಿಗಳ ದಿನ ಭವಿಷ್ಯ

    ತಮಿಳುನಾಡು , ಆಂಧ್ರತಮಿಳುನಾಡಿನ ಕೊಯಿಮತ್ತೂರು, ಥೆನಿ, ನೀಲಿಗಿರಿಯ ಪಶ್ವಿಮ ಘಟ್ಟದಲ್ಲಿ ಕೂಡ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿಯ ಮಧ್ಯ ಪಶ್ಚಿಮ ಮತ್ತು ವಾಯುವ್ಯದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಲಿದೆ. ಈ ಹಿನ್ನಲೆ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲೂ ಕೂಡ ಮಳೆಯಾಗಲಿದೆ. ಆಂಧ್ರ ಪ್ರದೇಶದ ರಾಯಲ ಸೀಮಾದಲ್ಲಿ ಕೂಡ ಸಾಧಾರಣಾ ಮಳೆಯಾದರೆ, ಪೂರ್ವ ಗೋದಾವರಿ, ವಿಶಾಖ ಪಟ್ಟಣಂನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಗುಜರಾತ್​, ಮಹಾರಾಷ್ಟ್ರದಲ್ಲೂ ಮಳೆ

    ಗುಜರಾತ್​ನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಕೂಡ ಇದೆ, ಅದರಲ್ಲೂ ಮುಖ್ಯವಾಗಿ ಪಶ್ಚಿಮ ಗುಜರಾತ್​ಮ ರಾಜ್​ಕೋಟ್​, ಅಮ್ರೇಲಿ, ಅಹಮದಬಾದ್​, ಭಾವನಗರ್​ ಸೂರತ್​, ಕೆಶೋಡ್​ನಲ್ಲಿ ಮುಂದಿನ 24 ರಿಂದ 48 ಗಂಟೆ ಸಾಧಾರಣಾ ಮಳೆಯಾಗುವ ನಿರೀಕ್ಷೆ ಇದೆ.
    ಮಹಾರಾಷ್ಟ್ರದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಮುಂದುನ ಮೂರನಾಲ್ಕು ದಿನ ಇದೇ ರೀತಿ ವರುಣ ಆರ್ಭಟಿಸಲಿದ್ದಾನೆ. ಥಾಣೆ, ಪಲ್ಗಾರ್​​, ದಕ್ಷಿಣ ಕೊಂಕಣದಲ್ಲಿ ಮಳೆಯಾಗುವ ನಿರೀಕ್ಷೆ ಹೆಚ್ಚಿದೆ.
    Published by:MAshok Kumar
    First published: