HOME » NEWS » State » OXYGEN CRISIS CONGRESS LEADER RAHUL GANDHI TWEET ABOUT CHAMARAJANAGAR OXYGEN CRISIS INCIDENT LG

Oxygen Crisis: ಇದು ಸಾವೋ ಅಥವಾ ಕೊಲೆಯೋ?; ಚಾಮರಾಜನಗರ ದುರಂತಕ್ಕೆ ರಾಹುಲ್​ ಗಾಂಧಿ ವಿಷಾದ

ಟ್ವೀಟ್ ಮಾಡಿರುವ ಅವರು, ಆಡಳಿತ ವ್ಯವಸ್ಥೆ ವಿರುದ್ಧ ಕಿಡಿಕಾರಿದ್ದಾರೆ.  ಇದು ಸಾವೋ ಅಥವಾ ಕೊಲೆಯೋ ಎಂದು ರಾಹುಲ್​ ಗಾಂಧಿ ಪ್ರಶ್ನಿಸಿದ್ದಾರೆ. ಜೊತೆಗೆ ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.  ವ್ಯವಸ್ಥೆ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಮಂದಿ ನರಳಾಡಿ ಸಾಯಬೇಕು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

news18-kannada
Updated:May 3, 2021, 1:29 PM IST
Oxygen Crisis: ಇದು ಸಾವೋ ಅಥವಾ ಕೊಲೆಯೋ?; ಚಾಮರಾಜನಗರ ದುರಂತಕ್ಕೆ ರಾಹುಲ್​ ಗಾಂಧಿ ವಿಷಾದ
ರಾಹುಲ್ ಗಾಂಧಿ.
  • Share this:
ಬೆಂಗಳೂರು(ಮೇ 03): ಇಂದು ಬೆಳಗ್ಗೆ ರಾಜ್ಯಕ್ಕೆ ಯಮರಾಜನಂತೆ ಬಂದೆರಗಿದ ಸುದ್ದಿ ಎಂದರೆ ಅದು ಚಾಮರಾಜನಗರ ದುರಂತ. ಆಕ್ಸಿಜನ್ ಕೊರತೆಯಿಂದಾಗಿ ಸುಮಾರು 24 ಮಂದಿ ಚಾಮರಾಜನಗರ ಕೋವಿಡ್​ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಸುದ್ದಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ತಮ್ಮವರನ್ನು ಕಳೆದುಕೊಂಡ ದುಃಖದಲ್ಲಿ ಮೃತರ ಕುಟುಂಬಸ್ಥರು ಗೋಳಾಡುತ್ತಿದ್ದಾರೆ. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದು ಅತ್ಯಂತ ದೊಡ್ಡ ದುರಂತವಾಗಿದೆ. ಈ ದಾರುಣ ಘಟನೆಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ. 

ಟ್ವೀಟ್ ಮಾಡಿರುವ ಅವರು, ಆಡಳಿತ ವ್ಯವಸ್ಥೆ ವಿರುದ್ಧ ಕಿಡಿಕಾರಿದ್ದಾರೆ.  "ಇದು ಸಾವೋ ಅಥವಾ ಕೊಲೆಯೋ ಎಂದು ರಾಹುಲ್​ ಗಾಂಧಿ ಪ್ರಶ್ನಿಸಿದ್ದಾರೆ. ಜೊತೆಗೆ ಈ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.  ವ್ಯವಸ್ಥೆ ಎಚ್ಚೆತ್ತುಕೊಳ್ಳುವ ಮುನ್ನ ಇನ್ನೂ ಎಷ್ಟು ಮಂದಿ ನರಳಾಡಿ ಸಾಯಬೇಕು" ಎಂದು ಅವರು ಪ್ರಶ್ನೆ ಮಾಡಿದ್ದಾರೆ.



Chamarajanagar Oxygen Crisis: ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಯಡಿಯೂರಪ್ಪ; ಮಹತ್ವದ ನಿರ್ಧಾರ ಸಾಧ್ಯತೆ

ಈ ದುರಂತದ ಬಗ್ಗೆ ವಿಪಕ್ಷ ನಾಯಕರು ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ರಾಜ್ಯ ಸರ್ಕಾರವೇ ಈ ದುರಂತಕ್ಕೆ ನೇರ ಹೊಣೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಂಸದ ಧ್ರುವ ನಾರಾಯಣ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಉಸ್ತುವಾರಿ ಸಚಿವ ಎಸ್​.ಸುರೇಶ್​ ಕುಮಾರ್ ಹಾಗೂ ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಅಸಮಾಧಾನದ ಮಾತುಗಳು ಕೇಳಿ ಬರುತ್ತಿವೆ.

ಘಟನೆ ನಡೆದ ಬೆನ್ನಲ್ಲೇ ಸಿಎಂ ಬಿಎಸ್​ ಯಡಿಯೂರಪ್ಪ ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಆಯಾ ಜಿಲ್ಲಾ ಉಸ್ತುವಾರಿಗಳು ಜಿಲ್ಲೆಯಲ್ಲೇ ಠಿಕಾಣಿ ಹೂಡಲು ಸಿಎಂ ನಾಳೆ ಸಂಪುಟ ಸಭೆಯಲ್ಲಿ ಸೂಚನೆ ನೀಡುವ ಸಾಧ್ಯತೆ ಇದೆ. ಜೊತೆಗೆ ಒಂದು ತಿಂಗಳ ಮಟ್ಟಿಗೆ ಕೈಗಾರಿಕೆ ಬಳಕೆಗೆ ಆಕ್ಸಿಜನ್ ಸ್ಥಗಿತ ಮಾಡಿ ವೈದ್ಯಕೀಯ ಬಳಕೆಗೆ ಆದೇಶ ಮಾಡುವ ಸಾಧ್ಯತೆಯೂ ದಟ್ಟವಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಚಾಮರಾಜನಗರದಲ್ಲಿ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಿದ್ದರೂ ಆಕ್ಸಿಜನ್​ ಪರದಾಟ ಮಾತ್ರ ತಪ್ಪಿಲ್ಲ. ಈ ಕಡೆ ಲಿಕ್ವಿಡ್ ಆಕ್ಸಿಜನ್ ಪ್ಲಾಂಟ್, ಆ ಕಡೆ ಜಂಬೋ ಸಿಲಿಂಡರ್ ಗಳಿದ್ದರೂ ಸಹ ಏನು ಪ್ರಯೋಜನವಾಗಿಲ್ಲ ಎಂದು ಜಿಲ್ಲಾಸ್ಪತ್ರೆ ಮುಂದೆ ಸೋಂಕಿತರ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಆರೋಗ್ಯ ಸಚಿವ ಡಾ.ಸುಧಾಕರ್​, ಚಾಮರಾಜನಗರ ಜಿಲ್ಲಾಡಳಿತದ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ಕೆಂಡಾಮಂಡಲರಾಗಿದ್ದಾರೆ. ಆಂತರಿಕ ತನಿಖೆಗೆ ಸೂಚನೆ ನೀಡಿರುವ ಸಿಎಂ, ಘಟನೆ ಕುರಿತಾಗಿ ವರದಿಯನ್ನೂ ಕೇಳಿದ್ದಾರೆ. ಜೊತೆಗೆ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಯಡಿಯೂರಪ್ಪ ಕಿಡಿಕಾರಿದ್ದಾರೆ. ಚಾಮರಾಜನಗರ ಡಿಸಿ ಡಾ.ಎಂ.ಆರ್​.ರವಿಗೆ ಬಿಎಸ್​ವೈ ತರಾಟೆ ತೆಗೆದುಕೊಂಡಿದ್ದಾರೆ
Published by: Latha CG
First published: May 3, 2021, 1:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories