Sukri Gowda: ಮತ್ತೆ ಅಸ್ವಸ್ಥರಾದ ಪದ್ಮಶ್ರೀ ಸುಕ್ರಿಗೌಡ, ಮಂಗಳೂರು ಆಸ್ಪತ್ರೆಗೆ ದಾಖಲಾದ 'ಹಾಡುಹಕ್ಕಿ'

ಜನಪದ ಹಾಡು ಹಕ್ಕಿ, ಪದ್ಮಶ್ರೀ ಸುಕ್ರಿ ಗೌಡ ಅಲಿಯಾಸ್ ಸುಕ್ರಜ್ಜಿ ಅಸ್ವಸ್ಥಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೆ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯವಿದೆ ಅಂತ ಸಾರಿದ್ದ ಅವರೇ ಇಂದು ಹೆಚ್ಚಿನ ಚಿಕಿತ್ಸೆಗಾಗಿ ದೂರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗುವಂತೆ ಆಗಿದೆ.

ಪದ್ಮಶ್ರೀ ಪುರಸ್ಕೃತ, ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ

ಪದ್ಮಶ್ರೀ ಪುರಸ್ಕೃತ, ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ

  • Share this:
ಉತ್ತರ ಕನ್ನಡ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ (Padma Shri Award Winner), ಹಾಲಕ್ಕಿ ಸಮುದಾಯದ (Halakki Community) ಸಾಕ್ಷಿ ಪ್ರಜ್ಞೆ, ಹಿರಿಯ ಜನಪದ ಹಾಡುಗಾರ್ತಿ (Folk Singer), ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೆಮ್ಮೆಯ ಸುಕ್ರಜ್ಜಿ ಅಲಿಯಾಸ್ ಸುಕ್ರಿ ಬೊಮ್ಮ ಗೌಡ (Sukri Bomma Gowda) ಅವರು ಮತ್ತೆ ಅಸ್ವಸ್ಥರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ (Breathing Problem) ಬಳಲುತ್ತಿರುವ ಸುಕ್ರಿ ಗೌಡ ಅವರನ್ನು ಮಂಗಳೂರಿನ (Mangaluru) ಖಾಸಗಿ ಆಸ್ಪತ್ರೆಗೆ (Privet Hospital) ದಾಖಲಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ (Multi Specialty Hospital) ಅಗತ್ಯವಿದೆ ಅಂತ ಸಾರಿದ್ದ ಅವರೇ ಇಂದು ಹೆಚ್ಚಿನ ಚಿಕಿತ್ಸೆಗಾಗಿ ದೂರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗುವಂತೆ ಆಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸುಕ್ರಜ್ಜಿ

86 ವರ್ಷ ಪ್ರಾಯದ ಸುಕ್ರಿ ಬೊಮ್ಮಗೌಡ ಅವರು ಕಳೆದ 4 ತಿಂಗಳಿನಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ನಾಲ್ಕು ದಿನಗಳಿಂದ ಈಚೆಗೆ ತಲೆಸುತ್ತು ಬರುತ್ತಿದ್ದುದರಿಂದ ಅವರ ಆರೋಗ್ಯದಲ್ಲಿ ಮತ್ತಷ್ಟು ವ್ಯತ್ಯಯ ಉಂಟಾಯಿತು. ಈ ವೇಳೆ ಅವರ ಮನೆಯವರು ಅವರನ್ನು ಮಂಗಳೂರಿನ ಜ್ಯೋತಿ ಕೆಎಂಸಿ ಆಸ್ಪತ್ರೆ ಎಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಕ್ರಜ್ಜಿ ಆರೋಗ್ಯ ಸ್ಥಿರ ಎಂದ ವೈದ್ಯರು

ಸುಕ್ರಿ ಗೌಡ ಅವರ ಮನೆಯವರು ಮಂಗಳೂರಿನ ಸಾಮಾಜಿಕ ಹೋರಾಟಗಾರ ದಿನೇಶ್‌ ಹೊಳ್ಳ ಅವರನ್ನು ಸಂಪರ್ಕಿಸಿದ್ದರು. ಬಳಿಕ ವೈದ್ಯರ ಸಲಹೆಯ ಮೇರೆಗೆ ಶನಿವಾರ ಮಧ್ಯಾಹ್ನ 12.30 ಗಂಟೆಗೆ ಹುಟ್ಟೂರು ಅಂಕೋಲಾದಿಂದ ಕರೆತಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇದೀಗ ಸುಕ್ರಿ ಬೊಮ್ಮಗೌಡ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: Puneeth Rajkumar: ಕಣಿವೆ ಮಾರಮ್ಮನ ಜಾತ್ರೆಯಲ್ಲಿ 'ಅಪ್ಪು' ಫೋಟೋ! ದೇವಿ ದರ್ಶನ ಪಡೆದು 'ಪುನೀತ'ರಾದ ಭಕ್ತರು

ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದೆ ಎಂದ ವೈದ್ಯರು

ವೈದ್ಯಕೀಯ ಪರೀಕ್ಷೆಯ ವೇಳೆ ಸುಕ್ರಿ ಬೊಮ್ಮಗೌಡ ಅವರಿಗೆ ಅಲ್ಪ ಪ್ರಮಾಣದ ಹೃದಯ ಸಮಸ್ಯೆ ಇರುವುದು ಕಂಡು ಬಂದಿದ್ದು, ವೈದ್ಯರ ಸಲಹೆಯ ಮೇರೆಗೆ ಮುಂದಿನ ಚಿಕಿತ್ಸೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಯಾರು ಈ ಸುಕ್ರಿ ಬೊಮ್ಮ ಗೌಡ?

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದಾರೆ. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಟವಾಗಿವೆ  ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.

ಸುಕ್ರಿ ಬೊಮ್ಮಗೌಡ ಅವರಿಗೆ ಸುಕ್ರಜ್ಜಿ ಎಂದು ಹಾಲಕ್ಕಿ ಕೋಗಿಲೆ ಜಾನಪದ ಕೋಗಿಲೆ ಎಂದು ಕೆರಯುತ್ತಾರೆ. ಸಾಕ್ಷರತಾ ಆಂದೋಲನ, ಸಾರಾಯಿ ನಿಷೇಧ ಆಂದೋಲನ, ಉಳುವವನೇ ಹೊಲದೊಡೆಯ, ಪರಿಶಿಷ್ಟ ಜಾತಿ ಗುರುತಿಸುವಿಕೆಯಂತಹ ಚಳವಳಿಗಳಿಗಾಗಿ ಖುದ್ದು ಭಾಗವಹಿಸಿ  ಹೋರಾಡಿದ್ದಾರೆ.

ಇದನ್ನೂ ಓದಿ: Deadly Humps: ಅವೈಜ್ಞಾನಿಕ ಹಂಪ್ ನಿಂದ ಆಕ್ಸಿಡೆಂಟ್; ಸುನೇತ್ರಾ ಪಂಡಿತ್ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದ ಕೇಂದ್ರ ಸರ್ಕಾರ

ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿ ಸುಕ್ರಿ ಬೊಮ್ಮ ಗೌಡ ಅವರನ್ನು ಅರಸಿಕೊಂಡು ಬಂದಿವೆ.
Published by:Annappa Achari
First published: