ಪೇಜಾವರ ಶ್ರೀಗಳ ಆರೋಗ್ಯ ಸ್ಥಿರ; ವೆಂಟಿಲೇಟರ್​ನಲ್ಲೇ ಚಿಕಿತ್ಸೆ ಮುಂದುವರಿಕೆ

ದೆಹಲಿ ಏಮ್ಸ್​ ಆಸ್ಪತ್ರೆ ವೈದ್ಯರೊಂದಿಗೆ ಕೆಎಂಸಿ ಆಸ್ಪತ್ರೆ ವೈದ್ಯರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಅಲ್ಲಿನ ವೈದ್ಯರ ಸಲಹೆ ಮತ್ತು ಮಾರ್ಗದರ್ಶನಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪೇಜಾವರ ಸ್ವಾಮೀಜಿ

ಪೇಜಾವರ ಸ್ವಾಮೀಜಿ

  • Share this:
ಉಡುಪಿ(ಡಿ.25): ಕಳೆದ ಕೆಲ ದಿನಗಳಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪೇಜಾವರ ಶ್ರೀಗಳಿಗೆ ವೆಂಟಿಲೇಟರ್​​ನಲ್ಲೇ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಶ್ರೀಗಳನ್ನು ವೆಂಟಿಲೇಟರ್​​​​ನಲ್ಲಿ ಇರಿಸಿರುವುದರಿಂದ ರಾಜಕೀಯ ನಾಯಕರು, ವಿಐಪಿಗಳು ಹಾಗೂ ಭಕ್ತರು ಶ್ರೀಗಳನ್ನು ಭೇಟಿ ಮಾಡಲು ಸಾದ್ಯವಿಲ್ಲ. ಹೀಗಾಗಿ ಯಾರೂ ಸಹ ಆಸ್ಪತ್ರೆಗೆ ಬರಬೇಡಿ ಎಂದು ವೈದ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಮಾಜಿ ಪ್ರಧಾನಿ ವಾಜಪೇಯಿ 95ನೇ ಹುಟ್ಟುಹಬ್ಬ: ಅದ್ಭುತ ವಾಗ್ಮಿ ಅಟಲ್​ ಬಿಹಾರಿ ನೆನೆದ ಗಣ್ಯರು

ದೆಹಲಿ ಏಮ್ಸ್​ ಆಸ್ಪತ್ರೆ ವೈದ್ಯರೊಂದಿಗೆ ಕೆಎಂಸಿ ಆಸ್ಪತ್ರೆ ವೈದ್ಯರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಅಲ್ಲಿನ ವೈದ್ಯರ ಸಲಹೆ ಮತ್ತು ಮಾರ್ಗದರ್ಶನಗಳನ್ನು ಕೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ ಸಿಎಂ ಬಿ.ಎಸ್​.ಯಡಿಯೂರಪ್ಪ ಕೃಷ್ಣಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಕೃಷ್ಣಮಠ ಭೇಟಿ ಬಳಿಕ‌ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಕೆಎಂಸಿ ಆಸ್ಪತ್ರೆಗೆ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸತತ ಸೋಲಿನಿಂದ ಕಂಗೆಟ್ಟ ಜೆಡಿಎಸ್​; ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಕುಟುಂಬ ರಾಜಕಾರಣಕ್ಕೆ ಎಚ್​ಡಿಕೆ ಬ್ರೇಕ್?
Published by:Latha CG
First published: