ಅನರ್ಹ ಶಾಸಕರನ್ನು ಚುನಾವಣೆಯಲ್ಲಿ ಜನರೇ ಸೋಲಿಸುತ್ತಾರೆ: ಸಿದ್ದರಾಮಯ್ಯ

ಅನರ್ಹಗೊಂಡ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಆದರೆ, ಈ ಪಕ್ಷಾಂತರಿಗಳಿಗೆ ಜನರೇ ಪಾಠ ಕಲಿಸಲಿದ್ದಾರೆ. ಚುನಾವಣೆಯಲ್ಲಿ ಇವರು ನಿಂತರೂ ಇವರನ್ನು ಜನರು ಸೋಲಿಸಲಿದ್ದಾರೆ. ಮಹಾರಾಷ್ಟ್ರ ಮತ್ತು ಗುಜರಾತ್​​ನಲ್ಲೂ ಕೂಡ ಇದೇ ಆಗಿದ್ದು. ಅಲ್ಲಿ ಪಕ್ಷಾಂತರ ಮಾಡಿದವರೆಲ್ಲರೂ ಸೋತಿದ್ಧಾರೆ. ಕರ್ನಾಟಕದಲ್ಲೂ ಇದೇ ಆಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

news18
Updated:November 13, 2019, 12:17 PM IST
ಅನರ್ಹ ಶಾಸಕರನ್ನು ಚುನಾವಣೆಯಲ್ಲಿ ಜನರೇ ಸೋಲಿಸುತ್ತಾರೆ: ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯ
  • News18
  • Last Updated: November 13, 2019, 12:17 PM IST
  • Share this:
ಬೆಂಗಳೂರು(ನ. 13): ಶಾಸಕರ ಅನರ್ಹತೆಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಗತ ಮಾಡಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಪಾಕ್ಷಿಕವಾಗಿ ಎತ್ತಿಹಿಡಿದಿದೆ. ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ತಾನು ಸ್ವಾತಿಸುತ್ತೇನೆ ಎಂದು ಮಾಜಿ ಸಿಎಂ ಹೇಳಿದ್ಧಾರೆ.

ಸರ್ವೋಚ್ಚ ನ್ಯಾಯಾಲಯದ ಆದೇಶ ಹೊರಬಂದ ಬೆನ್ನಲ್ಲೇ ಬೆಳಗ್ಗೆ 11:30ಕ್ಕೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಸ್. ಸಿದ್ದರಾಮಯ್ಯ, ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಜನರೇ ಅವರನ್ನು ಸೋಲಿಸುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: SC Verdict on Disqualified MLAs: ಅನರ್ಹತೆ ಖಾಯಂ, ಚುನಾವಣೆ ಸ್ಪರ್ಧೆಗೆ ಅವಕಾಶ; ಅನರ್ಹ ಶಾಸಕರು ಹೇಳಿದ್ದೇನು?

ಅನರ್ಹಗೊಂಡ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಆದರೆ, ಈ ಪಕ್ಷಾಂತರಿಗಳಿಗೆ ಜನರೇ ಪಾಠ ಕಲಿಸಲಿದ್ದಾರೆ. ಚುನಾವಣೆಯಲ್ಲಿ ಇವರು ನಿಂತರೂ ಇವರನ್ನು ಜನರು ಸೋಲಿಸಲಿದ್ದಾರೆ. ಮಹಾರಾಷ್ಟ್ರ ಮತ್ತು ಗುಜರಾತ್​​ನಲ್ಲೂ ಕೂಡ ಇದೇ ಆಗಿದ್ದು. ಅಲ್ಲಿ ಪಕ್ಷಾಂತರ ಮಾಡಿದವರೆಲ್ಲರೂ ಸೋತಿದ್ಧಾರೆ. ಕರ್ನಾಟಕದಲ್ಲೂ ಇದೇ ಆಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

17 ಶಾಸಕರ ಅನರ್ಹತೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇವತ್ತು ತೀರ್ಪು ನೀಡಿತು. ರಾಜೀನಾಮೆ ನೀಡಿದ್ದ ಎಲ್ಲಾ 17 ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ಆದೇಶವನ್ನು ಎತ್ತಿಹಿಡಿಯಿತು. ಆದರೆ, 2023ರವರೆಗೂ ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಿದ್ದ ಸ್ಪೀಕರ್ ಆದೇಶದಲ್ಲಿ ಮಾರ್ಪಾಡು ಮಾಡಿದೆ. ಶಾಸಕರು ಅನರ್ಹಗೊಂಡರೂ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಇದರೊಂದಿಗೆ ಅನರ್ಹ ಶಾಸಕರಿಗೆ ಭಾಗಶಃ ಗೆಲುವು ಪ್ರಾಪ್ತವಾಗಿದೆ. ಉಪಚುನಾವಣೆಯಲ್ಲಿ ಸ್ಪರ್ಧಿಸಿ ಜನರ ಮನಸ್ಸನ್ನು ಗೆಲ್ಲುವ ಪ್ರಯಾಸಕರ ಸವಾಲು ಅನರ್ಹ ಶಾಸಕರ ಮುಂದಿದೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published: November 13, 2019, 12:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading