Petrol Price Today: ಇಲ್ಲಿದೆ ಪೆಟ್ರೋಲ್​​-ಡೀಸೆಲ್​​ ದರ; ಒಂದು ಲೀಟರ್​​​​ಗೆ ಎಷ್ಟು ಗೊತ್ತೇ?

ಈ ಹಿಂದೆ ಸೆಪ್ಟೆಂಬರ್​​ 14ರಂದು ಸೌದಿ ಅರೇಬಿಯಾದ ಅರಾಮ್ಕೋ ತೈಲ ಕಂಪೆನಿ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಈ ಡ್ರೋನ್​​ ದಾಳಿ ಬಳಿಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿಢೀರ್​​ ಏರಿಕೆಯಾಗಿತ್ತು.

news18-kannada
Updated:December 16, 2019, 8:35 AM IST
Petrol Price Today: ಇಲ್ಲಿದೆ ಪೆಟ್ರೋಲ್​​-ಡೀಸೆಲ್​​ ದರ; ಒಂದು ಲೀಟರ್​​​​ಗೆ ಎಷ್ಟು ಗೊತ್ತೇ?
ಪೆಟ್ರೋಲ್​​ ಬಂಕ್​​​
  • Share this:
ಬೆಂಗಳೂರು(ಡಿ.15): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ದಾಖಲೆಯ ಮಟ್ಟ ತಲುಪಿದ ಬಳಿಕ ಇಳಿಕೆಯಾಗುತ್ತಲೇ ಇತ್ತು. ಬಳಿಕ ಕಳೆದ ಒಂದು ವಾರದಿಂದ ಮತ್ತೆ ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಪೆಟ್ರೋಲ್​​-ಡೀಸೆಲ್​​​ ದರದಲ್ಲಿ ದಿಢೀರ್​​ ಏರಿಕೆಯಾಗಲು ಶುರುವಾಯ್ತು. ಆದರೆ, ಕಳೆದ ಎರಡು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್​​ ಬೆಲೆ ಕೊಂಚ ಇಳಿಕೆ 5 ಪೈಸೆ ಕಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್​​ ಪೆಟ್ರೋಲ್​​ ಬೆಲೆ 74.84 ರೂ., ಡೀಸೆಲ್ ಬೆಲೆ ಲೀಟರ್​​ಗೆ 66.04 ರೂ. ಆಗಿದೆ ಎನ್ನಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್​​ ಲೀಟರ್​ ದರ 77.40 ರೂ., ಡೀಸೆಲ್​​ಗೆ 68.29 ರೂ. ಇದೆ. ಹಾಗೆಯೇ ಕೊಲ್ಕತ್ತಾದಲ್ಲಿ ಪೆಟ್ರೋಲ್​​-ಡೀಸೆಲ್​​ ಬೆಲೆ ಕ್ರಮವಾಗಿ 77.50 ರೂ. ಮತ್ತು 68.45 ರೂ. ಆಗಿದೆ. ಅಲ್ಲದೇ ಮುಂಬೈನಲ್ಲಿ ಲೀಟರ್​​ ಪೆಟ್ರೋಲ್​​ಗೆ 80.49 ರೂ. ಮತ್ತು ಡೀಸೆಲ್​​ಗೆ 69.27 ರೂ. ಇದೆ. ಚೆನ್ನೈ ಪೆಟ್ರೋಲ್​ಗೆ 77.81 ರೂ., ಡೀಸೆಲ್​ ದರವೂ 69.81 ರೂ. ಆಗಿದೆ. ಅಂತೆಯೇ ಹೈದರಾಬಾದ್​ನಲ್ಲೂ ಪೆಟ್ರೋಲ್​​​ಗೆ ಲೀಟರ್​​ ಬೆಲೆ 79.64 ರೂ., ಡೀಸೆಲ್​​ ಬೆಲೆ 72.07 ರೂ. ಇದೆ.

ಈ ಹಿಂದೆ ಸೆಪ್ಟೆಂಬರ್​​ 14ರಂದು ಸೌದಿ ಅರೇಬಿಯಾದ ಅರಾಮ್ಕೋ ತೈಲ ಕಂಪೆನಿ ಮೇಲೆ ಡ್ರೋನ್‌ ದಾಳಿ ನಡೆದಿತ್ತು. ಈ ಡ್ರೋನ್​​ ದಾಳಿ ಬಳಿಕ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿಢೀರ್​​ ಏರಿಕೆಯಾಗಿತ್ತು. ತೈಲ ಪೂರೈಕೆಯಲ್ಲಿ ವ್ಯತ್ಯಯ ಕಾಣಿಸಿಕೊಂಡ ಕಾರಣದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಮೇಲೆ ಪರಿಣಾ ಬೀರಿತ್ತು. ಇದರಿಂದಲೇ ಬೆಲೆ ಏರಿಕೆ ಕಂಡಿತ್ತು.

ಇದನ್ನೂ ಓದಿ: ಶಾಪಿಂಗ್​​ ಮಾಲ್​ಗಳಲ್ಲಿ ಮೊಬೈಲ್ ನಂಬರ್​​​​ ಶೇರ್​ ಮಾಡಬೇಡಿ; ನಗರ ಪೊಲೀಸ್​ ಆಯುಕ್ತ​​ ಭಾಸ್ಕರ್​​ ರಾವ್​​

ಈಗ ಎಲ್ಲಾ ಸಮಸ್ಯೆಯೂ ಸರಿಪಡಿಸಲಾಗಿದೆ. ಕಚ್ಚಾ ತೈಲದ ಬೆಲೆಯೂ ತುಸು ಇಳಿಕೆಯಾಗಿದೆ. ಹಾಗಾಗಿ ಪೆಟ್ರೋಲ್‌ ಬೆಲೆಯೂ ಇಳಿಯುವ ನಿರೀಕ್ಷೆ ಹೆಚ್ಚಿದೆ ಎಂದು ಇಂಡಿಯನ್‌ ಆಯಿಲ್‌ನ ಅಧ್ಯಕ್ಷ ಸಂಜೀವ್‌ ಸಿಂಗ್‌ ಹೇಳಿದ್ದರು. ಆದರೀಗ, ಮತ್ತೆ ಪೆಟ್ರೋಲ್​​-ಡೀಸೆಲ್​​ ಬೆಲೆ ಏರಿಕೆಯಾಗಲಿದೆ ಎನ್ನುತ್ತಿವೆ ಮೂಲಗಳು.
First published:December 15, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ