Fuel Price June 17 : ಪೆಟ್ರೋಲ್ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದ್ದು, ವಾಹನ ಸವಾರರ ಜೇಬು ಸುಡುತ್ತಿದೆ. ಕರ್ನಾಟಕ ಸೇರಿದಂತೆ ರಾಜಸ್ಥಾನ, ಮಹಾರಾಷ್ಟ್ರ, ಹೈದರಾಬಾದ್ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ಗೆ 100 ರೂ. ದಾಟಿದೆ. ಈ ಮೂಲಕ ಭಾರತದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ದಾಖಲೆ ಬರೆದಿದೆ. ಇಷ್ಟಾದರೂ ಇನ್ನೂ ಸಹ ಬೆಲೆಯೇರಿಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇತ್ತ ಡೀಸೆಲ್ ಬೆಲೆ ಕೂಡ 100 ದಾಟಿರುವುದರಿಂದ ವಾಹನ ಸವಾರರು ಕಂಗಾಲಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು 1 ಲೀಟರ್ ಪೆಟ್ರೋಲ್ ಬೆಲೆ 99.89 ರೂ. ಇದ್ದು, ಶತಕ ಬಾರಿಸುವತ್ತ ಸಮೀಪಿಸುತ್ತಿದೆ.
ಕರ್ನಾಟಕದ ಉತ್ತರ ಕನ್ನಡದ ಶಿರಸಿ, ಬೀದರ್, ಕೊಪ್ಪಳ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಬೆಂಗಳೂರು ಸೇರಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲೂ ಪೆಟ್ರೋಲ್ ಬೆಲೆ 100 ರೂ.ನತ್ತ ದಾಪುಗಾಲಿಡುತ್ತಿದೆ. ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 96.66 ರೂ. ಇದೆ. ಕೊಲ್ಕತ್ತಾದಲ್ಲಿ 96.58 ರೂ., ಮುಂಬೈನಲ್ಲಿ 102.82 ರೂ., ಚೆನ್ನೈನಲ್ಲಿ 97.91 ರೂ., ನೋಯ್ಡಾದಲ್ಲಿ 93.96 ರೂ., ಬೆಂಗಳೂರಿನಲ್ಲಿ 99.89 ರೂ., ಭುವನೇಶ್ವರದಲ್ಲಿ 96.89 ರೂ., ಚಂಡೀಗಢದಲ್ಲಿ 92.96 ರೂ., ಹೈದರಾಬಾದ್ನಲ್ಲಿ 100.46 ರೂ., ಜೈಪುರದಲ್ಲಿ 103.42 ರೂ., ಲಕ್ನೋದಲ್ಲಿ 93.87 ರೂ., ಪಾಟ್ನಾದಲ್ಲಿ 99.29 ರೂ., ತಿರುವನಂತಪುರದಲ್ಲಿ 98.64 ರೂ. ಇದೆ.
ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಭಾರೀ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 100.80 ರೂ. ದಾಟಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ಗೆ 87.41 ರೂ. ಇದೆ. ಚೆನ್ನೈನಲ್ಲಿ 92.04 ರೂ, ಮುಂಬೈನಲ್ಲಿ 94.84 ರೂ, ಬೆಂಗಳೂರಿನಲ್ಲಿ 92.66 ರೂ, ಹೈದರಾಬಾದ್ನಲ್ಲಿ 95.28 ರೂ. ಇದೆ.
ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ದೇಶದಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಿದ ರಾಜ್ಯಗಳ ಪೈಕಿ ಕರ್ನಾಟಕ 7ನೇ ರಾಜ್ಯವಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.
ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ