HOME » NEWS » State » PETROL PRICE TODAY PETROL RATE AND DIESEL PRICE UNCHANGED ON JUNE 23 IN INDIA FUEL PRICE TODAY IN BENGALURU SCT

Petrol Price Today: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಗೆ ಬ್ರೇಕ್; ಇಂದು ನಿಮ್ಮೂರಿನಲ್ಲಿ Fuel Price ಎಷ್ಟು?

Petrol Price Today in Bangalore | ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆಗೆ ಬ್ರೇಕ್ ಬಿದ್ದಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

news18-kannada
Updated:June 23, 2021, 8:40 AM IST
Petrol Price Today: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಗೆ ಬ್ರೇಕ್; ಇಂದು ನಿಮ್ಮೂರಿನಲ್ಲಿ Fuel Price ಎಷ್ಟು?
ಸಾಂದರ್ಭಿಕ ಚಿತ್ರ
  • Share this:
Fuel Price Today: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಏರಿಕೆಯಿಂದ ಈಗಾಗಲೇ ವಾಹನ ಸವಾರರು ಕಂಗೆಟ್ಟಿದ್ದಾರೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಮಹಾರಾಷ್ಟ್ರ, ಹೈದರಾಬಾದ್ನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ಗೆ 101 ರೂ. ದಾಟಿದೆ. ಈ ಮೂಲಕ ಭಾರತದ ಇತಿಹಾಸದಲ್ಲೇ ಪೆಟ್ರೋಲ್ ಬೆಲೆ ದಾಖಲೆ ಬರೆದಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೇರಿಕೆಗೆ ಬ್ರೇಕ್ ಬಿದ್ದಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಎಂಬ ಬಗ್ಗೆ ಇಲ್ಲಿದೆ ಮಾಹಿತಿ...

ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ, ತುಮಕೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಉಳಿದ ಜಿಲ್ಲೆಗಳಲ್ಲೂ ಸದ್ಯದಲ್ಲೇ ಪೆಟ್ರೋಲ್ ಬೆಲೆ ಶತಕ ಬಾರಿಸಲಿದೆ. ಆದರೆ, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಳಿತವಾಗಿಲ್ಲ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಪೆಟ್ರೋಲ್ ಬೆಲೆ 1 ಲೀಟರ್ಗೆ 108.43 ರೂ. ಆಗುವ ಮೂಲಕ ಇಡೀ ದೇಶದಲ್ಲೇ ದುಬಾರಿ ನಗರ ಎನಿಸಿಕೊಂಡಿದೆ. ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 97.50 ರೂ. ಇದೆ. ಕೊಲ್ಕತ್ತಾದಲ್ಲಿ 97.38 ರೂ., ಮುಂಬೈನಲ್ಲಿ 103.63 ರೂ., ಚೆನ್ನೈನಲ್ಲಿ 98.65 ರೂ., ನೋಯ್ಡಾದಲ್ಲಿ 94.92 ರೂ., ಬೆಂಗಳೂರಿನಲ್ಲಿ 100.76 ರೂ., ಭುವನೇಶ್ವರದಲ್ಲಿ 98.27 ರೂ., ಚಂಡೀಗಢದಲ್ಲಿ 93.77 ರೂ., ಹೈದರಾಬಾದ್ನಲ್ಲಿ 101.33 ರೂ., ಜೈಪುರದಲ್ಲಿ 104.14 ರೂ., ಲಕ್ನೋದಲ್ಲಿ 94.70 ರೂ., ಪಾಟ್ನಾದಲ್ಲಿ 99.86 ರೂ., ತಿರುವನಂತಪುರದಲ್ಲಿ 99.62 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರಿನಲ್ಲಿ ಮತ್ತೆ ದುಬಾರಿಯಾಯ್ತು ಬಂಗಾರ; ಒಂದೇ ದಿನದಲ್ಲಿ ಚಿನ್ನದ ಬೆಲೆ 200 ರೂ. ಏರಿಕೆ

ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಭಾರೀ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಇಂದು ಡೀಸೆಲ್ ಬೆಲೆ 101.40 ರೂ. ಆಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ಗೆ 88.23 ರೂ. ಇದೆ. ಚೆನ್ನೈನಲ್ಲಿ 92.83 ರೂ, ಮುಂಬೈನಲ್ಲಿ 95.72 ರೂ, ಬೆಂಗಳೂರಿನಲ್ಲಿ 93.54 ರೂ, ಹೈದರಾಬಾದ್ನಲ್ಲಿ 96.17 ರೂ. ಇದೆ.

ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: Morning Digest: ಬಿಗ್ ಬಾಸ್ ಮತ್ತೆ ಶುರು, ಚಿನ್ನ ದುಬಾರಿ, ಕರ್ನಾಟಕದಲ್ಲೂ ಡೆಲ್ಟಾ ಪ್ಲಸ್ ವೈರಸ್ ಪತ್ತೆ!; ಇಂದಿನ ಪ್ರಮುಖ ಸುದ್ದಿಗಳಿವುಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.

ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.
Youtube Video

ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ. ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.
Published by: Sushma Chakre
First published: June 23, 2021, 8:40 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories