Petrol Price Today: ಬೆಂಗಳೂರಿನಲ್ಲಿ 102 ರೂ.ದಾಟಿದ ಪೆಟ್ರೋಲ್ ಬೆಲೆ; ವಿವಿಧ ನಗರಗಳಲ್ಲಿ ಎಷ್ಟಿದೆ ರೇಟ್?

Petrol and Diesel Price on June 30: ಬೆಂಗಳೂರಿನಲ್ಲಿ ಒಂದು ಲೀಟರ್​ ಪೆಟ್ರೋಲ್ ಬೆಲೆ 102.11 ರೂ., ಭುವನೇಶ್ವರದಲ್ಲಿ 99.96 ರೂ., ಹೈದರಾಬಾದ್ನಲ್ಲಿ 102.69 ರೂ., ಇದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Fuel Price Today: ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್​-ಡೀಸೆಲ್​ ರೇಟ್ ನೋಡಿ ಜನರು ಕಂಗಾಲಾಗಿದ್ದಾರೆ. ದಿನನಿತ್ಯ ಏರಿಕೆಯಾಗುತ್ತಲೇ ಇರುವ ಪೆಟ್ರೋಲ್​​ ಬೆಲೆ ಜನರ ಜೇಬು ಸುಡುತ್ತಿದೆ. ಜನ ತಮ್ಮ ವಾಹನಗಳನ್ನು ರಸ್ತೆಗಿಳಿಸಲು ಯೋಚಿಸುವ ಸ್ಥಿತಿ ಬಂದಿದೆ. ಸದ್ಯಕ್ಕಂತೂ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಜೂನ್ ತಿಂಗಳೊಂದರಲ್ಲೇ ಪೆಟ್ರೋಲ್ ಬೆಲೆ ಬರೋಬ್ಬರಿ 15 ಬಾರಿ ಏರಿಕೆಯಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕ ಮಾತ್ರವಲ್ಲದೆ ರಾಜಸ್ಥಾನ, ಹೈದರಾಬಾದ್ನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 102 ರೂ. ದಾಟಿದೆ. ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ಮುಂಬೈ, ಜೈಪುರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 105 ರೂ. ಆಗುವ ಮೂಲಕ ಹೊಸ ದಾಖಲೆ ಬರೆದಿದೆ. ಬೆಂಗಳೂರಿನಲ್ಲೂ 1 ಲೀಟರ್ ಪೆಟ್ರೋಲ್ 102 ರೂ. ಆಗಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯೆಷ್ಟು? ಇಲ್ಲಿದೆ ಮಾಹಿತಿ...

    ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಒರಿಸ್ಸಾ, ಕೇರಳ, ಆಂಧ್ರಪ್ರದೇಶ, ಲಡಾಖ್, ಬಿಹಾರ, ಜಮ್ಮು ಕಾಶ್ಮೀರದಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿಲ್ಲ.

    ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 98.81 ರೂ. ಇದೆ. ಕೊಲ್ಕತ್ತಾದಲ್ಲಿ 98.64 ರೂ., ಮುಂಬೈನಲ್ಲಿ 104.90 ರೂ., ಚೆನ್ನೈನಲ್ಲಿ 99.82 ರೂ., ನೋಯ್ಡಾದಲ್ಲಿ 96.05 ರೂ., ಬೆಂಗಳೂರಿನಲ್ಲಿ 102.11 ರೂ., ಭುವನೇಶ್ವರದಲ್ಲಿ 99.96 ರೂ., ಹೈದರಾಬಾದ್ನಲ್ಲಿ 102.69 ರೂ., ಜೈಪುರದಲ್ಲಿ 105.74 ರೂ., ಲಕ್ನೋದಲ್ಲಿ 95.84 ರೂ., ಪಾಟ್ನಾದಲ್ಲಿ 100.81 ರೂ., ತಿರುವನಂತಪುರದಲ್ಲಿ 101.04 ರೂ. ಚಂಡೀಗಢದಲ್ಲಿ 95.03 ರೂ. ಆಗಿದೆ.

    ಇದನ್ನೂ ಓದಿ:Gold Price Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಇಂತಿದೆ..!

    ಭಾರತದ ಕೆಲವು ನಗರಗಳಲ್ಲಿ ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಈಗಾಗಲೇ ಡೀಸೆಲ್ ಬೆಲೆ ಶತಕ ಬಾರಿಸಿದೆ. ಬೆಂಗಳೂರು, ಮುಂಬೈ, ಹೈದರಾಬಾದ್, ಜೈಪುರ, ಭುವನೇಶ್ವರ, ಚೆನ್ನೈ ಸೇರಿ ವಿವಿಧ ನಗರಗಳಲ್ಲಿ ಇಂದಿನ ಡೀಸೆಲ್ ಬೆಲೆ ಹೀಗಿದೆ. ನವದೆಹಲಿಯಲ್ಲಿ ಇಂದು 1 ಲೀಟರ್ ಡೀಸೆಲ್ ಬೆಲೆ 89.18 ರೂ. ಇದೆ. ಚೆನ್ನೈನಲ್ಲಿ 93.81 ರೂ, ಮುಂಬೈನಲ್ಲಿ 96.72 ರೂ, ಬೆಂಗಳೂರಿನಲ್ಲಿ 94.54 ರೂ, ಹೈದರಾಬಾದ್ನಲ್ಲಿ 97.20 ರೂ. ಇದೆ.

    ಭಾರತದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿದಿನ ಏರಿಳಿತಗಳು ಉಂಟಾಗುತ್ತಲೇ ಇರುತ್ತವೆ. ಕಳೆದ 1 ವರ್ಷದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿದೆ. ಮಹಾರಾಷ್ಟ್ರದ ಮುಂಬೈ, ರಾಜಸ್ಥಾನದ ಜೈಪುರ, ಮಧ್ಯಪ್ರದೇಶ, ತೆಲಂಗಾಣ, ಕರ್ನಾಟಕ, ಆಂಧ್ರಪ್ರದೇಶದಲ್ಲೂ ಪೆಟ್ರೋಲ್ ದರ ಶತಕ ಬಾರಿಸಿದೆ. ಈ ಸಂಖ್ಯೆ ಹೆಚ್ಚುತ್ತಲೇ ಇದೆ.

    ಇದನ್ನೂ ಓದಿ:ಇಂದು ಕೇಂದ್ರದ ಕೌನ್ಸಿಲ್ಸ್ ಆಫ್ ಮಿನಿಸ್ಟರ್ಸ್ ಸಭೆ; ರಾಜ್ಯದ ಹಾಲಿ ಸಚಿವರಿಗಿಲ್ಲ ಭಯ, ಹೊಸಬರ ಪೈಕಿ ಯಾರಿಗೆ ಲಕ್?

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ.ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ. ಲಾಕ್ಡೌನ್ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ತರವಾಗಿದೆ. ದೇಶದ ಆರ್ಥಿಕ ಚಟುವಟಿಕೆಗೆ ಪಾರ್ಶ್ವವಾಯು ಬಡಿದಿದೆ. ಆದರೂ ಪೆಟ್ರೋಲ್ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಸಹಜವಾಗಿ ನಿತ್ಯ ಬಳಕೆಯ ಬೇರೆಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತದೆ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.

    ಭಾರತದಲ್ಲಿ ಕೊರೋನಾ ವೈರಸ್ ಅಬ್ಬರದಿಂದ ಕಳೆದೊಂದು ವರ್ಷದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಭಾರತದ ಆರ್ಥಿಕತೆಯ ಮೇಲೂ ಪರಿಣಾಮ ಬೀರಿದೆ. ಆದಾಯವನ್ನು ಸರಿದೂಗಿಸಲು ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗುತ್ತಿದೆ. ಹಾಗೇ, ಇಂಧನದ ಆಮದಿನ ಪ್ರಮಾಣವೂ ಇಳಿಕೆಯಾಗಿದೆ. ಪೆಟ್ರೋಲ್- ಡೀಸೆಲ್ ಬೆಲೆಯ ಹೆಚ್ಚಳ ಎಲ್ಲದರ ಮೇಲೂ ಪರಿಣಾಮ ಬೀರಿದೆ. ಈಗಾಗಲೇ ಕಾರು, ಬೈಕ್ ಸೇರಿದಂತೆ ಬಹುತೇಕ ಎಲ್ಲ ವಾಹನಗಳ ಬೆಲೆಯೂ ಹೆಚ್ಚಳವಾಗಿದೆ.
    Published by:Latha CG
    First published: