ಗಾನಕೋಗಿಲೆ ಎಸ್​​.ಜಾನಕಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

S Janaki Hospitalized: ಜಾನಕಿ ಅವರು ಕೆಲವು ದಿನಗಳ ಹಿಂದೆ ಮೈಸೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಮುರಿದುಕೊಂಡಿದ್ದಾರೆ ಎನ್ನಲಾಗಿದೆ.

Latha CG | news18
Updated:May 4, 2019, 1:18 PM IST
ಗಾನಕೋಗಿಲೆ ಎಸ್​​.ಜಾನಕಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಎಸ್​​.ಜಾನಕಿ
  • News18
  • Last Updated: May 4, 2019, 1:18 PM IST
  • Share this:
ಮೈಸೂರು,(ಮೇ 04): ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಂದೇ ಹೆಸರಾಗಿರುವ ಎಸ್​​.ಜಾನಕಿ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಸೊಂಟ ಮುರಿದ ಹಿನ್ನೆಲೆ ಕಳೆದ ಮೂರು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾನಕಿ ಅವರು ಕೆಲವು ದಿನಗಳ ಹಿಂದೆ ಮೈಸೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಮುರಿದುಕೊಂಡಿದ್ದಾರೆ ಎನ್ನಲಾಗಿದೆ.

ಸೊಂಟದ ಭಾಗದಲ್ಲಿ ತೀವ್ರ ನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಜಾನಕಿ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ.

ವರ್ಷದ ಹಿಂದೆ ಎಸ್​​. ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸುವ ನಿರ್ಧಾರವನ್ನು ತಿಳಿಸಿದ್ದರು. 80 ವರ್ಷದ ಜಾನಕಮ್ಮ 'ನನಗೆ ವಯಸ್ಸಾಯಿತು, ಈವರೆಗೆ ಹಲವು ಭಾಷೆಗಳಲ್ಲಿ ಹಾಡಿದ್ದೇನೆ. ನನಗೀಗ ವಿಶ್ರಾಂತಿ ಬೇಕಿದೆ. ಇನ್ನು ನಾನು ಹಾಡುವುದನ್ನು ನಿಲ್ಲಿಸುತ್ತೇನೆ' ಎಂದು ಹೇಳಿದ್ದರು. ಅದೇ ರೀತಿ ವಿಶ್ರಾಂತಿ ಜೀವನ ನಡೆಸುತ್ತಿದ್ದಾರೆ.
First published: May 4, 2019, 1:14 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading