ಬೆಂಗಳೂರು (ಜುಲೈ 01); ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ನಾಳೆ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದು, ಕಾರ್ಯಕರ್ತರು ದೂರದ ಊರಿನಿಂದ ಬೆಂಗಳೂರಿಗೆ ಆಗಮಿಸುವ ಅಗತ್ಯವಿಲ್ಲ. ಬದಲಾಗಿ ಜೂಮ್ ಆಪ್ ಮೂಲಕ ನಿಮ್ಮ ಊರಿಂದಲೇ ಕಾರ್ಯಕ್ರಮವನ್ನು ವೀಕ್ಷಿಸಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ.
ನಾಳಿನ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಭರ್ಜರಿ ಸಿದ್ದತೆ ನಡೆದಿದೆ . ಬೆಳಗ್ಗೆ 10.30 ರಿಂದ 1 ಗಂಟೆಯ ಅವಧಿಯಲ್ಲಿ ನಡೆಯಲಿರುವ ಎರಡೂವರೆ ಗಂಟೆಗಳ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸೇವಾದಳದಿಂದ ಗೌರವ ರಕ್ಷೆ ಕಾರ್ಯಕ್ರಮದ ಬಳಿಕ ವಂದೇ ಮಾತರಂ, ಸ್ವಾಗತ ಭಾಷಣಗಳನ್ನೂ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಇನ್ನೂ ಈ ಕಾರ್ಯಕ್ರಮಕ್ಕೆ ಕಳೆದ ಎರಡು ತಿಂಗಳಿನಿಂದ ಅನುಮತಿ ನೀಡದ ರಾಜ್ಯ ಸರ್ಕಾರ ಇಂದು ಅನುಮತಿ ನೀಡಿದೆ.
ಈ ಕುರಿತು ಮಾತನಾಡಿರುವ ಡಿ.ಕೆ. ಶಿವಕುಮಾರ್, "ನಾಳಿನ ಕಾರ್ಯಕ್ರಮಕ್ಕೆ ಕೊನೆಗೂ ಸರ್ಕಾರ ಅವಕಾಶ ಕೊಟ್ಟಿದೆ. ಆದರೆ, ಕೆಲವು ಕಡೆ ಪೊಲೀಸರಿಂದ ತೊಂದರೆಯಾಗಿದೆ. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚೆ ನಡೆಸಿದ್ದೇನೆ. ಸಿಎಂ ಅವರು ಕಾರ್ಯಕ್ರಮಕ್ಕೆ ಅವಕಾಶ ಕೊಟ್ಟಿದ್ದಾರೆ.
ಇದನ್ನೂ ಓದಿ : ಕೆಪಿಸಿಸಿ ಅಧ್ಯಕ್ಷರಾಗಿ ನಾಳೆ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; 7,800 ಗ್ರಾಮ ಪಂಚಾಯ್ತಿಗಳಲ್ಲಿ ಸಮಾರಂಭ ನೇರಪ್ರಸಾರ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ