• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Bengaluru: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬರುವವರಿಗೆಲ್ಲಾ ಕೋವಿಡ್ ಟೆಸ್ಟ್​ ಕಡ್ಡಾಯ: ಸಿಎಂ ಬೊಮ್ಮಾಯಿ

Bengaluru: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬರುವವರಿಗೆಲ್ಲಾ ಕೋವಿಡ್ ಟೆಸ್ಟ್​ ಕಡ್ಡಾಯ: ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಬೇಕು. ಒಳಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಾತ್ರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ.

 • Share this:

  ಬೆಂಗಳೂರು, ಜೂ. 18: ರಾಜ್ಯಕ್ಕೆ ಜೂನ್ 20 ಮತ್ತು 21ರಂದು  ಎರಡು ದಿನಗಳ ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಸಾರ್ವಜನಿಕ ಸಭೆಯ (Public Function)  ವೇದಿಕೆ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.


  ಜೂನ್ 20 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಈಗಾಗಲೇ ಅವರ ಕಾರ್ಯಕ್ರಮ ಪಟ್ಟಿ ಬಂದಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕೆಂಬ ಉದ್ದೇಶದಿಂದ ನಮ್ಮೆಲ್ಲಾ ಸಚಿವ ಸಂಪುಟದ ಸಹೋದ್ಯೋಗಿಗಳು, ಹಿರಿಯ ನಾಯಕ ಸದಾನಂದ ಗೌಡರು, ಎಲ್ಲಾ ಶಾಸಕರು ಶ್ರಮವಹಿಸುತ್ತಿದ್ದಾರೆ. ಅಧಿಕಾರಿಗಳ ಕೂಡ  ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಿದ್ದಾರೆ. ಬಿಬಿಎಂಪಿ, ಬಿಡಿಎ, ಜಿಲ್ಲಾಧಿಕಾರಿಗಳು ಮತ್ತು ಭದ್ರತಾ ದೃಷ್ಟಿಯಿಂದ ಕರ್ನಾಟಕ ಪೊಲೀಸ್, ಬೆಂಗಳೂರು ಆಯುಕ್ತರು ಸೇರಿದಂತೆ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಎಸ್.ಪಿ.ಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.


  ಎಲ್ಲೆಲ್ಲಿಗೆ ಭೇಟಿ ನೀಡ್ತಾರೆ ಪ್ರಧಾನಿ ಮೋದಿ?


  ಪ್ರಧಾನ ಮಂತ್ರಿಗಳು ಬೆಳಿಗ್ಗೆ 11.55 ಕ್ಕೆ ಯಲಹಂಕ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಅವರು ಹೆಲಿಕಾಪ್ಟರ್ ಮೂಲಕ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬ್ರೈನ್ ಸೆಲ್ ಅಭಿವೃದ್ಧಿ ಕೇಂದ್ರವನ್ನು  ಕ್ರಿಸ್ ಗೋಪಾಲಕೃಷ್ಣ ಅವರು 450 ಕೋಟಿ ರೂ.ಗಳ ದೇನಿಗೆಯಲ್ಲಿ ನಿರ್ಮಿಸಿದ್ದು ಅದರ ಉದ್ಘಾಟನೆ ನಡೆಯಲಿದೆ. ನಂತರ ಮೈಂಡ್ ಟ್ರೀ ಸಂಸ್ಥೆ 850 ಹಾಸಿಗೆಗಳ ಸಂಶೋಧನಾ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.


  ಇದನ್ನೂ ಓದಿ: Mysore Palace: ನಾಳೆ ಮೈಸೂರು ಅರಮನೆಗೆ ಹೋಗ್ತಿದ್ದೀರಾ? ಜೂನ್ 21ರವರೆಗೂ ಪ್ಯಾಲೇಸ್‌ಗೆ ನೋ ಎಂಟ್ರಿ!


  ಸಬ್ ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ


  ನಂತರ 15000 ಕೋಟಿ ರೂ.ಗಳ ವೆಚ್ಚದ  ಸಬ್ ಅರ್ಬನ್ ರೈಲ್ವೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ ಯೋಜನೆಗೆ ಚಾಲನೆ ದೊರಕಲಿದೆ. ಇದರ ಜೊತೆಗೆ 6 ರೈಲ್ವೆ ಯೋಜನೆಗಳಿಗೆ ಚಾಲನೆ ದೊರಕಲಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಚಾಲನೆ ದೊರಕಲಿದೆ. ಎಸ್.ಟಿ. ಆರ್.ಆರ್. ಯೋಜನೆಗೂ ಶಂಕುಸ್ಥಾಪನೆ ನೆರವೇರಲಿದೆ. ದಾಬಸಪೇಟೆಯಿಂದ ಹೊಸಕೋಟೆ ಹಳೆ ಮದ್ರಾಸು ರಸ್ತೆಯವರೆಗೂ ಸಂಪರ್ಕಿಸುವ  ರಸ್ತೆ ಇದು. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರೊಂದಿಗೆ 2 ಬಾರಿ ಮಾತನಾಡಿದ ಮೇಲೆ ವಿಶೇಷ ವಿನಾಯ್ತಿ ನೀಡಿ ಆದೇಶ ಮಾಡಿದ್ದಾರೆ.  ವಿಶೇಷ ವಿನಾಯ್ತಿ ನೀಡಿದ ಮೇಲೆ ಈ ಯೋಜನೆಗೆ ಚಾಲನೆ ದೊರೆಯಲಿದೆ. ಇಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದರು.


  ನಂತರ ಮೋದಿ ಅವರು ಬೆಂಗಳೂರು ವಿವಿಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್’ಗೆ ಭೇಟಿ ನೀಡಿ ಮೂರ್ತಿ ಅನಾವರಣ ಹಾಗೂ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ತೆರಳಲಿದ್ದಾರೆ


  ಅಲ್ಲಿ ಎರಡು ದೊಡ್ಡ ಕಾರ್ಯಕ್ರಮ ಗಳಿವೆ. ಫಲಾನುಭವಿಗಳ ಸಮ್ಮೇಳನವಿದೆ. ಅದನ್ನು ಮುಗಿಸಿ ಸುತ್ತೂರು ಮಠ ಹಾಗೂ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ವಿವರಿಸಿದರು.


  ಈ ಎಲ್ಲಾ ಕಾರ್ಯಕ್ರಮ ಗಳ ಸಿದ್ಧತೆಗಳ ವೀಕ್ಷಣೆ ಮಾಡಿದ್ದು, ಅಚ್ಚುಕಟ್ಟಾಗಿ ಸಿದ್ದತೆ ಆಗುತ್ತಿದೆ. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತಿದೆ. ಪ್ರಧಾನಿ ಮೋದಿ ಆಗಮಿಸುವ ಸಂದರ್ಭದಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಆದ್ದರಿಂದ ಅಗತ್ಯ ವ್ಯವಸ್ಥೆ ಮಾಡಲು ತಿಳಿಸಲಾಗಿದೆ.  ಬೆಂಗಳೂರಿನ ಮಹಾಜನತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರುತ್ತೇನೆ ಎಂದರು.


  ಇದನ್ನೂ ಓದಿ: Mysuru: ಟಾಟಾ ತೆಕ್ಕೆಗೆ ಪಾರಂಪರಿಕ ಲಲಿತಮಹಲ್ ಪ್ಯಾಲೇಸ್? ಖಾಸಗಿ ಒಡೆತನಕ್ಕೆ ಪಂಚತಾರಾ ಹೋಟೆಲ್?


  ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯ


  ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣ ಪತ್ರ ತೋರಿಸಬೇಕು. ಒಳಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಾತ್ರ ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ತಿಳಿಸಿದರು.


  ವರದಿ; ಅನಿಲ್​ ಬಾಸೂರ್​

  Published by:Pavana HS
  First published: