ಮೈಸೂರು (ಜೂ 19): ಸಾಂಸ್ಕೃತಿಕ ನಗರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮಿಸುತ್ತಿದ್ದಾರೆ. ವಿಶ್ವ ಯೋಗದಿನದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಮೈಸೂರಿಗೆ ಮೋದಿ ಅಗಮನ ಹಿನ್ನೆಲೆ ಮೈಸೂರಿನಲ್ಲಿ ಭಾರೀ ಬಿಗಿ ಭದ್ರತೆ ಮಾಡಲಾಗಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ (Maharaja College) ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾರ್ವಜನಿಕರಿಗೆ ಮೈಸೂರು ನಗರ (Mysuru) ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಸಾರ್ವಜನಿಕರಿಗೆ ಮಾರ್ಗಸೂಚಿ
* ಸಾರ್ವಜನಿಕರಿಗೆ ನಿಗಧಿಪಡಿಸಲಾಗಿರುವ ಆಸನದ ವ್ಯವಸ್ಥೆಯಲ್ಲಿ ಬಂದು ಆಸೀನರಾಗಬೇಕು. ಸಾರ್ವಜನಿಕರು ಆಗಮಿಸುವಾಗ ನಿಗದಿಪಡಿಸಿದ ಪ್ರವೇಶ ದ್ವಾರಗಳಿಂದಲೇ ಆಗಮಿಸಬೇಕು, ಬರುವ ಮುನ್ನ ಸಾರ್ವಜನಿಕರು ಪ್ರವೇಶ ದ್ವಾರದಲ್ಲಿ ಭದ್ರತಾ ಸಿಬ್ಬಂದಿಗಳ ತಪಾಸಣೆಗೆ ಸಹಕರಿಸಬೇಕ
* ಲೋಹ ಶೋಧಕ ಯಂತ್ರದ ಮೂಲಕ ತಪಾಸಣೆಗೆ ಒಳಪಟ್ಟು, ನಂತರ ಕಾರ್ಯಕ್ರಮದ ಸ್ಥಳಕ್ಕೆ ನಿಗದಿ ಪಡಿಸಿದ ಸ್ಥಳಕ್ಕೆ ತೆರಳುವುದು.
ಇದನ್ನೂ ಓದಿ: Bengaluru: ನಾಳೆ ವಾಹನ ಸವಾರರು ರಸ್ತೆಗಿಳಿಯೋ ಮುನ್ನ ಎಚ್ಚರ; ನಗರದಲ್ಲಿ ಹಲವೆಡೆ ಸಂಚಾರ ಬಂದ್
ಯಾವುದೇ ವಾರಸುದಾರರಿಲ್ಲದ ಬ್ಯಾಗುಗಳು, ಪೊಟ್ಟಣ, ಆಟಿಕೆ ಸಾಮಾನುಗಳು ಹಾಗೂ ಇತರೆ ವಸ್ತುಗಳು ಕಂಡು ಬಂದಲ್ಲಿ ಅದನ್ನು ಮುಟ್ಟದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಕಾರ್ಯಕ್ರಮ ವೀಕ್ಷಣೆಗೆ ಬರುವವರು ತಮ್ಮ ವಾಹನಗಳನ್ನು ಸಂಚಾರಿ ಪೊಲೀಸರು ನಿಗದಿಪಡಿಸಿರುವ ಸ್ಥಳದಲ್ಲೇ ನಿಲ್ಲಿಸಬೇಕು
ಸಾರ್ವಜನಿಕರು ಗಣ್ಯ ವ್ಯಕ್ತಿಗಳು ಸಾಗುವ ಮಾರ್ಗದಲ್ಲಿ ಗುಂಪು ಸೇರದೆ ಹಾಗು ಮಾರ್ಗಕ್ಕೆ ಬಂದು ಅಡ್ಡಿಯುಂಟು ಮಾಡದಂತೆ ಸಾಕಷ್ಟು ಅಂತರವನ್ನು ಕಾಯ್ದುಕೊಂಡು ದೂರದಿಂದಲೇ ವೀಕ್ಷಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಮಾರ್ಗಸೂಚಿ ಹೊರಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ