ಶಿವಮೊಗ್ಗ: ಮಾಜಿ ಸಚಿವ ಕೆಎಸ್ ಈಶ್ವರಪ್ಪ (Former Minister KS Eshwarappa) ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕುಶಲೋಪಚಾರಿ ವಿಚಾರಿಸಿದ್ದಾರೆ. ಈ ವೇಳೆ ಪಕ್ಷ, ಸಂಘಟನೆ ಸದಾ ನಿಮ್ಮೊಂದಿಗೆ ಇದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ವಿಧಾನಸಭಾ ಚುನಾವಣೆಯ (Shivamogga Constituency) ಬಗ್ಗೆ ಚರ್ಚೆ ನಡೆಸಿದ್ದಾರೆ. ಇವತ್ತು ಬೆಳಗ್ಗೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು. ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಶೆಟ್ಟರ್ ಪಕ್ಷ ಬಿಡುವಾಗ ಅವರಿಗೆ ಪತ್ರ ಬರೆದಿದ್ದೆ. ನನ್ನ ನಿರ್ಧಾರ ನನಗೆ ವಿಶೇಷ ಅನಿಸಿಲ್ಲ ಎಂದು ಹೇಳಿದರು.
ಪ್ರಧಾನಿ ಮೋದಿ ಪ್ರಶಂಸೆ ಬಿಜೆಪಿ ಸಂಸ್ಕಾರ. ಟಿಕೆಟ್ ಸಿಗೋದಿಲ್ಲ ಅಂತ ಬೇಸರ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ
ಅಮಿತ್ ಶಾ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 3 ಗಂಟೆ ರವರೆಗೆ ಏರ್ಪೋರ್ಟ್ ಹಾಗೂ ಹೆಬ್ಬಾಳ ನಡುವಿನ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಅಮಿತ್ ಶಾ ಅವರ ಆಗಮನದ ಹಿನ್ನೆಲೆಯಲ್ಲಿ ಸುಮಾರು 2000 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
4 ಡಿ.ಸಿ.ಪಿ ಗಳು, 7 KSRP ತುಕಡಿಗಳು, ಮೂರು QRT ಟೀಂ ನಿಯೋಜನೆ ಮಾಡಲಾಗಿದೆ. ಕೆಲವು ಮಾರ್ಗಗಳ ಸಂಚಾರ ಬದಲಾವಣೆ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ