ಬಿಜೆಪಿ ಸಂಸದೀಯ ಸಭೆಯಲ್ಲಿ ಸಿಎಂ ಬಿಎಸ್​ವೈಗೆ ಎದ್ದು ನಿಂತು ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಬಿಜೆಪಿಯ ಸಂಸದೀಯ ಸಭೆಯಲ್ಲಿ ಈ ಘಟನೆ ನಡೆದಿದ್ದು, ಕರ್ನಾಟಕದ ಸಾಧನೆ ಬಗ್ಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ

Seema.R | news18-kannada
Updated:December 11, 2019, 12:55 PM IST
ಬಿಜೆಪಿ ಸಂಸದೀಯ ಸಭೆಯಲ್ಲಿ ಸಿಎಂ ಬಿಎಸ್​ವೈಗೆ ಎದ್ದು ನಿಂತು ಗೌರವ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ - ಬಿಎಸ್​ವೈ
  • Share this:
ನವದೆಹಲಿ (ಡಿ.11): ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಸ್ಥಿರ ಬಿಜೆಪಿ ಸರ್ಕಾರ ನೀಡಿದ ಬಿಎಸ್​ ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದ್ದಾರೆ.

ಬಿಜೆಪಿಯ ಸಂಸದೀಯ ಸಭೆಯಲ್ಲಿ ಈ ಘಟನೆ ನಡೆದಿದ್ದು, ಕರ್ನಾಟಕದ ಸಾಧನೆ ಬಗ್ಗೆ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ನಾಯಕರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಲ್ಹಾದ್​ ಜೋಷಿ, ಸಭೆಯನ್ನು ಉದ್ದೇಶಿಸಿ ಭಾಷಣ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿ ಸಿಎಂ ಯಡಿಯೂರಪ್ಪ ಅವರಿಗೆ ಎದ್ದುನಿಂತು ಗೌರವ ಸಲ್ಲಿಸಿದರು.

ಇದನ್ನು ಓದಿ: 2002 ಗೋಧ್ರಾ ದಂಗೆ ಪ್ರಕರಣ: ಮೋದಿ ನೇತೃತ್ವದ ಗುಜರಾತ್​ ಸರ್ಕಾರಕ್ಕೆ ಕ್ಲೀನ್​ಚಿಟ್​

ಪಕ್ಷದ ಪರವಾಗಿ ಪ್ರಧಾನಿ ವೇದಿಕೆ ಮೇಲೆರುತ್ತಿದ್ದಂತೆ ಗೌರವ ಸಲ್ಲಿಸುವುದು ವಾಡಿಕೆ. ಆದರೆ, ಮೋದಿ ವೇದಿಕೆ ಮೇಲೆ ಹೋಗುತ್ತಿದ್ದಂತೆ ಎಲ್ಲರನ್ನು ಎದ್ದು ನಿಲ್ಲುವಂತೆ ಸೂಚಿಸಿ, ಯಡಿಯೂರಪ್ಪ ಅವರಿಗೆ ಗೌರವ ಸಲ್ಲಿಸುವಂತೆ ತಿಳಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಬಿಜೆಪಿಗೆ ಮತಚಲಾಯಿಸಿದ ಕರ್ನಾಟಕದ ಜನರಿಗೆ ಅಭಾರಿಯಾಗಿದ್ದು, ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ಪಾಲಿಗೆ ಈ ಉಪಚುನಾವಣೆ ಸಾಕಷ್ಟು ಮಹತ್ವದ ಪಾತ್ರವಹಿಸಿತ್ತು. ಅನರ್ಹ ಶಾಸಕರಿಗೆ ಟಿಕೆಟ್​ ನೀಡಿದ ಸಿಎಂ ಬಿಎಸ್​ ವೈ ಅವರನ್ನು ಗೆಲ್ಲಿಸಿಕೊಂಡು ಬರುವಲ್ಲಿ ಯಶಸ್ವಿಯಾಗುವುದರ ಜೊತೆಗೆ ಸ್ಥಿರ ಸರ್ಕಾರಕ್ಕೆ ಜನರು ಆಶೀರ್ವಾದಿಸಿದರು.
First published:December 11, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading