• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • PM Modi: ರಾಜಧಾನಿಗೆ ಮೋದಿ; ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ, ಹೊಸ ಮಾರ್ಗ ಹೀಗಿದೆ

PM Modi: ರಾಜಧಾನಿಗೆ ಮೋದಿ; ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ, ಹೊಸ ಮಾರ್ಗ ಹೀಗಿದೆ

ಪ್ರಧಾನಿ ಮೋದಿ

ಪ್ರಧಾನಿ ಮೋದಿ

ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.

  • Share this:

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ ಭಾನುವಾರ ಬೆಂಗಳೂರಿಗೆ (Bengaluru) ಆಗಮಿಸುತ್ತಿದ್ದು, ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 5 ರಿಂದ 8 ರವರೆಗೆ ಮೂರು ದಿನ ಕಾರ್ಯಕ್ರಮ ನಡೆಯಲಿದ್ದು, ನಾಳೆ ಪ್ರಧಾನಿಗಳು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ದೇಶ ವಿದೇಶದಿಂದ ಗಣ್ಯರ ಅಗಮಿಸುವ ನಿರೀಕ್ಷೆಗಳಿವೆ. ಇದರ ಜೊತೆ ಪ್ರಧಾನಿಗಳ ಭದ್ರತೆ ಹಿನ್ನೆಲೆ ಬೆಂಗಳೂರಿನ ಸಂಚಾರ (Bengaluru Traffic) ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ವಿಶೇಷವಾಗಿ ಬೆಂಗಳೂರು - ತುಮಕೂರು ರಸ್ತೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.


ಫೆಬ್ರವರಿ 5, 6, 7 ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಸಂಚಾರ ನಿರ್ಬಂಧ ವಿಧಿಸಲಾಗಿದೆ.


ಯಾವ ಮಾರ್ಗದಲ್ಲಿ ಸಂಚಾರ ನಿರ್ಬಂಧ?


*ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳ ನಿರ್ಬಂಧ


*ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ


*ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ


*ಹೊಸಕೋಟೆ ರಸ್ತೆಯಿಂದ ಹೆಬ್ಬಾಳವರೆಗೆ


PM Modi to arrive in Bengaluru tomorrow Here are alternative routes mrq
ಸಾಂದರ್ಭಿಕ ಚಿತ್ರ


ಮೂರು ದಿನ ಬಾರಿ ಸರಕು ಸಾಗಣೆ ವಾಹನಗಳಿಗೆ ಬದಲಿ ಮಾರ್ಗ ಹೀಗಿದೆ


*ತುಮಕೂರು ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆ ಸಂಚರಿಸಬೇಕು.


*ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆದು ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆ ಸಂಚರಿಸಬೇಕು.


*ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಸಂಪರ್ಕ ಪಡೆಯುವುದು.


*ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಕಡೆ ಸಂಚಾರ.


PM Modi to arrive in Bengaluru tomorrow Here are alternative routes mrq
ಸಾಂದರ್ಭಿಕ ಚಿತ್ರ


ನಮ್ಮ ಮೆಟ್ರೋ ಇನ್ನಷ್ಟು ವಿಸ್ತರಣೆ!


18.82 ಉದ್ದದ ಈ ಕಾರಿಡಾರ್ 16 ಮೆಟ್ರೋ ನಿಲ್ದಾಣಗಳಲ್ಲಿ ಸೇವೆ ನೀಡಲಿದೆ. ಈ ಭಾಗದ ನಾಗರಿಕರು ನಮ್ಮ ಮೆಟ್ರೋ ಸೇವೆಯನ್ನು ಬಳಸಿಕೊಂಡು ತಮ್ಮ ಪ್ರಯಾಣ ಮಾಡಬಹುದಾಗಿದೆ.ಬೆಂಗಳೂರು ನಮ್ಮ ಮೆಟ್ರೋ 2023ರಲ್ಲಿ 30.09 ಕಿಲೋ ಮೀಟರ್ ವಿಸ್ತರಣೆ ಆಗುತ್ತಿದೆ. ಬೆಂಗಳೂರಿನ ಟ್ರಾಫಿಕ್ ಕಡಿಮೆ ಮಾಡುವಲ್ಲಿ ಈ ವಿಸ್ತರಣೆ ಪ್ರಮುಖ ಪಾತ್ರ ವಹಿಸಲಿದೆ.
ನಮ್ಮ ಮೆಟ್ರೋದಲ್ಲಿ ಈ ವರ್ಷ 3 ಮಾರ್ಗಗಳು ವಾಣಿಜ್ಯ ಸಂಚಾರಕ್ಕೆ ಮುಕ್ತಗೊಳ್ಳಲಿವೆ.ಅಲ್ಲದೇ ವೈಟ್​ಫೀಲ್ಡ್ ಮಾರ್ಗ ಮಾರ್ಚ್ ತಿಂಗಳಿನಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ವರದಿಯಾಗಿದೆ.


ಕೇಂದ್ರ ಬಜೆಟ್​ನಲ್ಲಿ ಬೆಂಗಳೂರಿಗೆ 450 ಕೋಟಿ


ಕೇಂದ್ರ ಬಜೆಟ್​ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ನಿಡಲಾಗಿದೆ. ಜೊತೆಗೆ ಬೆಂಗಳೂರಿಗೂ ಬಂಪರ್ ಅನುದಾನ ಒದಗಿಸಲಾಗಿದೆ ಎಂಬ ಅಂಶ ಇದೀಗ ವರದಿಯಾಗಿದೆ. ಬೆಂಗಳೂರಿನ ಉಪನಗರ ರೈಲು ಯೋಜನೆಗೆ ಕೇಂದ್ರ ಬಜೆಟ್​ನಲ್ಲಿ ಬರೋಬ್ಬರಿ ₹ 450 ಕೋಟಿ ಅನುದಾನವನ್ನು ಮೀಸಲಿಡುವುದಾಗಿ ಅವರು ಘೋಷಿಸಿದ್ದಾರೆ.


ಇದನ್ನೂ ಓದಿ:  Mandya Politics: ಮಂಡ್ಯದಲ್ಲಿ ಗಿಫ್ಟ್​ ಪಾಲಿಟಿಕ್ಸ್​; ಗೆದ್ದ, ಸೋತ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಸ್ಮಾರ್ಟ್​ ಟಿವಿ


ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ 2023 ರಲ್ಲಿ, ಬೆಂಗಳೂರಿನಲ್ಲಿ ಮಹತ್ವದ ಹಂಚಿಕೆಯನ್ನು ಪಡೆದಿರುವ ಯೋಜನೆಯು ಬಹು ನಿರೀಕ್ಷಿತ ಬೆಂಗಳೂರು ಉಪನಗರ ರೈಲ್ವೆ ಯೋಜನೆ (BSRP) ಆಗಿದೆ.

Published by:Mahmadrafik K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು