ವಾರಣಾಸಿಯಿಂದ ಮೋದಿ ಮತ್ತೆ ಕಣಕ್ಕೆ: ಇಂದು ನಾಮಪತ್ರ ಸಲ್ಲಿಕೆ

ಪ್ರಧಾನಿ ಮೋದಿಯವರ ಸ್ಪರ್ಧೆ ಕಾರಣಕ್ಕೆ ಉತ್ತರ ಭಾರತದಲ್ಲಿ ಲೋಕ ಚುನಾವಣಾ ಅಬ್ಬರ ಜೋರಾಗುತ್ತಿದೆ. ದೇಶದ ಪುರಾತನ ನಗರ ಎಂದೇ ಹೆಸರು ವಾಸಿಯಾಗಿರುವ ವಾರಣಾಸಿಯಿಂದಲೇ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ.

Ganesh Nachikethu | news18
Updated:April 26, 2019, 9:32 AM IST
ವಾರಣಾಸಿಯಿಂದ ಮೋದಿ ಮತ್ತೆ ಕಣಕ್ಕೆ: ಇಂದು ನಾಮಪತ್ರ ಸಲ್ಲಿಕೆ
ವಾರಣಾಸಿಯಲ್ಲಿ ಮೋದಿ
Ganesh Nachikethu | news18
Updated: April 26, 2019, 9:32 AM IST
ನವದೆಹಲಿ(ಏ.25): ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡನೇ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನಾಮಪತ್ರ ಸಲ್ಲಿಕೆಗೆ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಜೆಡಿಯು ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್, ಶಿವಸೇನಾ ನಾಯಕ ಉದ್ಧವ್‌ ಠಾಕ್ರೆ ಸಾಥ್​​ ನೀಡಲಿದ್ಧಾರೆ.

ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಕೆಗೂ ಮುನ್ನ ನಿನ್ನೆ ವಾರಣಾಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದ್ದರು. ಪಂಡಿತ್‌ ಮದನ್‌ ಮೋಹನ್‌ ಮಾಳವೀಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರ‍್ಯಾಲಿ ಶುರು ಮಾಡಲಾಗಿತ್ತು. ಅಲ್ಲಿಂದ ಶುರುವಾದ ರೋಡ್​​ ಶೋ ರ‍್ಯಾಲಿ ದಶಾಶ್ವಮೇದ್‌ ಘಾಟ್‌ ತಲಿಪಿ ಮುಕ್ತಾಯವಾಗಿತ್ತು.

ರೋಡ್​​ ಶೋ ಮುಗಿಸಿದ್ದ ಪ್ರಧಾನಿ ಮೋದಿ ಅವರು ದಶಾಶ್ವಮೇದ್‌ನಲ್ಲಿ ಗಂಗಾ ಪೂಜೆ ನೆರವೇರಿಸಿದರು. ಅದಾದ ಬಳಿಕ ಸ್ಥಳೀಯ ಮುಖಂಡರ ಜತೆಗೆ ಮೋದಿಯವರು ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದರು. ಅಲ್ಲದೇ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕರ್ತರಿಗೆ ಮತ್ತೊಮ್ಮೆ ಬಿಜೆಪಿಯನ್ನು ಅತ್ಯಧಿಕ ಸಂಖ್ಯೆಯಲ್ಲಿ ಗೆಲ್ಲಿಸುವಂತೆ ಕರೆ ನೀಡಿದ್ದರು.

ಇದನ್ನೂ ಓದಿ: ಕುಂದಗೋಳ- ಚಿಂಚೋಳಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳು ಅಂತಿಮ; ಕಾಂಗ್ರೆಸ್​​ ಕಸರತ್ತು

ಇಂದು ಕೂಡ ನಾಮಪತ್ರ ಸಲ್ಲಿಕೆಗೆ ಮುನ್ನ ಬೂತ್‌ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಸುಮಾರು 11 ಗಂಟೆ ವೇಳೆಗೆ ನಗರದ ಕಾಲ ಭೈರವ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ವಾಹನ ಸವಾರರಿಗೆ ಆಘಾತ ಸುದ್ದಿ: ಸದ್ಯದಲ್ಲೇ ಪೆಟ್ರೋಲ್​​-ಡೀಸೆಲ್​​ ಬೆಲೆಯಲ್ಲಿ ಭಾರೀ ಏರಿಕೆಪ್ರಧಾನಿ ಮೋದಿಯವರ ಸ್ಪರ್ಧೆ ಕಾರಣಕ್ಕೆ ಉತ್ತರ ಭಾರತದಲ್ಲಿ ಲೋಕ ಚುನಾವಣಾ ಅಬ್ಬರ ಜೋರಾಗುತ್ತಿದೆ. ದೇಶದ ಪುರಾತನ ನಗರ ಎಂದೇ ಹೆಸರು ವಾಸಿಯಾಗಿರುವ ವಾರಣಾಸಿಯಿಂದಲೇ ಪ್ರಧಾನಿ ಮೋದಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಾಗಿದ್ದಾರೆ. ಇಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೆ ಎನ್​​ಡಿಎ ಮೈತ್ರಿಕೂಟದ ನಾಯಕರು ಸಾಕ್ಷಿಯಾಗಲಿದ್ಧಾರೆ.
-----------
First published:April 26, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ