ಬೆಳಗಾವಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ (Assembly Election 2023) ಕಾವು ಆರಂಭವಾಗುತ್ತಿದ್ದು, ಕೇಂದ್ರ ಬಿಜೆಪಿ ನಾಯಕರು (BJP Leaders) ಭೇಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಅತಿಹೆಚ್ಚು ವಿಧಾನಸಭೆ ಕ್ಷೇತ್ರ ಹೊಂದಿರೋ ಬೆಳಗಾವಿಯ (Belagavi) ಮೇಲೆ ಬಿಜೆಪಿಯ ನಾಯಕರ ಕಣ್ಣು ಬಿದ್ದಿದೆ. ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲ್ಲು ಪ್ಲಾನ್ ಮಾಡಿರೋ ಬಿಜೆಪಿ ನಾಯಕರು, ಫೆ. 27ರಂದು ಮೋದಿ ಆಗಮನದಿಂದ ಮತ್ತಷ್ಟು ಶಕ್ತಿ ಬರಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿ ನಿಗದಿಯಾಗಿದ್ದು, ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ನಡೆಸಲು ಬಿಜೆಪಿ ಪ್ಲಾನ್ (BJP Plan) ಮಾಡಿದೆ. ಇದಕ್ಕಾಗಿ ಸಿದ್ದತೆಗಳು ಆರಂಭವಾಗಿದ್ದು, ಮತ್ತೊಮ್ಮೆ ಜಿಲ್ಲೆಯಲ್ಲಿ ಮೋದಿ ಅಲೆ ಸೃಷ್ಠಿಸಿ ಗೆಲುವು ಸಾಧಿಸುವುದು ಬಿಜೆಪಿ ಶಾಸಕರ ಚುನಾವಣೆ ರಣತಂತ್ರ ಆಗಿದೆ.
ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹುಟ್ಟಹಬ್ಬದ ದಿನವೇ ಪ್ರಧಾನಿ ಮೋದಿ ಭೇಟಿ ನೀಡಿ ಶುಭಾಶಯ ತಿಳಿಸಲಿದ್ದಾರೆ.
ಲಕ್ಷಾಂತರ ಜನರನ್ನು ಉದ್ದೇಶಿಸಿ ಮೋದಿ ಮಾತು
ಈ ಮೂಲಕ ಪಕ್ಷದಲ್ಲಿ ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶ ರವಾನೆ ಮಾಡಲಿದ್ದಾರೆ. ಶಿವಮೊಗ್ಗ ಕಾರ್ಯಕ್ರಮದ ಬಳಿಕ ನೇರವಾಗಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ಲಕ್ಷಾಂತರ ಜನರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದು, ಇದರ ಜೊತೆಗೆ ಅಭಿವೃದ್ಧಿ ಕೆಲಸಗಳ ಉದ್ಘಾಟನೆ ಮಾಡಲಿದ್ದಾರೆ.
ದೊಡ್ಡ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲ್ಲು ಮೋದಿ ಅವರ ಜನಪ್ರಿಯತೆಯನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ನಾಲ್ಕು ಕಡೆಗಳ ಸಮಾವೇಶ ನಡೆಸುವ ಸಾಧ್ಯತೆ ಇದೆ. ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ಬಳಿಕ ಸಮಾವೇಶ ಸ್ಥಳ ನಿಗದಿಯಾಗಲಿದೆ.
ಫೆ.27 ಪ್ರಧಾನಿ ನರೇಂದ್ರ ಮೋದಿ ಭೇಟಿ ಫಿಕ್ಸ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿ ಸಮಾವೇಶ ಸಿದ್ಧತೆ ಕುರಿತು ಚರ್ಚೆ ನಡೆಸಿದರು.
2 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಪ್ಲಾನ್
ಪ್ರಧಾನಿ ನರೇಂದ್ರ ಮೋದಿ ಬೆಳಗಾವಿ ರೈಲು ನಿಲ್ದಾಣ ಉದ್ಘಾಟನೆ, ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣವನ್ನು ಬೆಳಗಾವಿಯಿಂದಲೇ ಬಿಡುಗಡೆ ಮಾಡಲಿದ್ದಾರೆ. ಜಿಲ್ಲೆಯ 18 ಕ್ಷೇತ್ರಗಳಿಂದ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಪ್ಲಾನ್ ಮಾಡಲಾಗಿದೆ.
ಫೆ.27ರಂದು ಮಧ್ಯಾಹ್ನ 2 ಗಂಟೆಗೆ ಆಗಮಿಸಿ 3.30ರ ವರೆಗೆ ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇರುತ್ತಾರೆ. ಬೆಳಗಾವಿಯ ಸರ್ಕ್ಯೂಟ್ ಹೌಸದ್ನಲ್ಲಿ ಸಭೆ ನಡೆಸಲಾಯ್ತು.
ಇದನ್ನೂ ಓದಿ: Pramod Muthalik: ಒಂದು ಹಿಂದೂ ಹುಡುಗಿಗೆ ಪ್ರತಿಯಾಗಿ 10 ಮುಸ್ಲಿಂ ಯುವತಿಯರನ್ನ ಬಲೆಗೆ ಬೀಳಿಸಿಕೊಳ್ಳಿ; ಪ್ರಮೋದ್ ಮುತಾಲಿಕ್
ಇಂದು ಬಿಜೆಪಿ ಯುವ ಮಹಿಳಾ ಸಮಾವೇಶ
ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಲು ಬಿಜೆಪಿ ಸನ್ನದ್ಧವಾಗಿದೆ. ಮಂಡ್ಯದ ನಾಗಮಂಗಲದಲ್ಲಿ ಇಂದು ಬಿಜೆಪಿಯ ಬೃಹತ್ ಯುವ ಮಹಿಳಾ ಸಮಾವೇಶ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದ್ದು, 25 ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸುವ ಸಾಧ್ಯತೆಯಿದೆ.
ಬಿಜೆಪಿ ಹಳೇ ಮೈಸೂರು ಭಾಗವನ್ನ ಟಾರ್ಗೆಟ್ ಮಾಡಿದ್ದು, ಮಂಡ್ಯಗೆ ಭರ್ಜರಿ ಅನುದಾನ ನೀಡಿದೆ. ಮಂಡ್ಯ ಜಿಲ್ಲೆಗೆ ಜಲಜೀವನ್ ಮಿಷನ್ ಯೋಜನೆ ಹೆಸರಲ್ಲಿ ₹800 ಕೋಟಿ ನೀಡಿ ಯೋಜನೆಗೆ ಒಪ್ಪಿಗೆ ನೀಡಿದೆ.
ಸಮಾವೇಶದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ಸಚಿವ ನಾರಾಯಣಗೌಡ ಭಾಗಿಯಾಗಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ