Coronavirus | ಕೊರೋನಾ ನಿಯಂತ್ರಣಕ್ಕೆ ಪ್ರಧಾನಿ ಮೋದಿಯಿಂದ ಮೂರು ಪ್ರಮುಖ ಸಲಹೆ; ಸಿಎಂ ಬಿಎಸ್ ಯಡಿಯೂರಪ್ಪ

ಬೀದರ್, ಕಲಬುರ್ಗಿ, ಬೆಂಗಳೂರು ಜಿಲ್ಲೆಗಳಿಗೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಸಲಹೆ ಕೊಟ್ಟಿದ್ದಾರೆ. ಮೂರ‌ನೇ ಹಂತದ ಪಟ್ಟಣಗಳಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಮೈಕ್ರೋ ಕಂಟೈನ್ಮೆಂಟ್ ವಲಯಗಳ ಹೆಚ್ಚಳಕ್ಕೆ ಸೂಚಿಸಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿಎಸ್​ ಯಡಿಯೂರಪ್ಪ

ಸಿಎಂ ಬಿಎಸ್​ ಯಡಿಯೂರಪ್ಪ

  • Share this:
    ಬೆಂಗಳೂರು: ಕೊರೋನಾ Test, track, treatment ಬಗ್ಗೆ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಗಮನಕ್ಕೆ ತಂದಿದ್ದಾರೆ. ರಾಜ್ಯದ ಪರಿಸ್ಥಿತಿಯ ಬಗ್ಗೆಯೂ ಪ್ರಧಾನಿ ಗಮನಕ್ಕೆ ತರಲಾಗಿದೆ. ಬೆಂಗಳೂರಲ್ಲಿ ಮೂರು ಕೋವಿಡ್ ಕೇರ್ ಸೆಂಟರ್, ರಾಜ್ಯದಲ್ಲಿ Rtpcr ಮಾಡುತ್ತಿರುವುದಕ್ಕೆ ಕೇಂದ್ರ ಸರ್ಕಾರ ಶ್ಲಾಘಿಸಿದೆ ಹಾಗೂ ಟೆಸ್ಟಿಂಗ್ ಕೇಂದ್ರಗಳನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಸೂಚಿಸಿದೆ. ಲಸಿಕೆ‌ ವ್ಯರ್ಥವಾಗದಂತೆ ಎಚ್ಚರವಹಿಸಲು ಸೂಚನೆ ನೀಡಿದೆ. ಮೈಕ್ರೋ ಕಂಟೋನ್ಮೆಂಟ್ ಜೋನ್ ಕಡೆ ಗಮನ ಹರಿಸಿ ಎಂದಿದ್ದಾರೆ.  ಅಪಾರ್ಟ್​ಮೆಂಟ್ ಸೇರಿ ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ಲಸಿಕೆ ಹಾಕಿಸಲು ಅವಕಾಶ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

    ಕೊರೋನಾ ಹೆಚ್ಚಳ ಸಂಬಂಧ ಹಾಗೂ ಕೈಗೊಳ್ಳಬಹುದಾದ ನಿರ್ಬಂಧಗಳ ಬಗ್ಗೆ ಇಂದು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕಳೆದ ಹತ್ತು ದಿನಗಳಲ್ಲಿ ಕೊರೋನಾ ಏರಿಕೆಯಾಗಿದೆ.  ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಿಲ್ಲೆಗಳಲ್ಲಿ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡಲಾಗುವುದು.  ಜನ ಸೇರುವ ಕಡೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಭಯ ಸೃಷ್ಟಿಸುವ ಅಗತ್ಯವಿಲ್ಲ ಎಂದು ಪಿಎಂ ಮೋದಿ ಅವರು ಹೇಳಿದ್ದಾರೆ. ಎಲ್ಲಾ ರಾಜ್ಯಗಳಿಗೂ ಲಸಿಕೆ ವಿತರಣೆ ಹೆಚ್ಚಿಸಲಾಗುವುದು ಎಂದಿದ್ದಾರೆ. ಲಸಿಕೆ ನೀಡುವ ಸಾಮರ್ಥ್ಯ ಕೇಂದ್ರ ಸರ್ಕಾರಕ್ಕೆ ಇದೆ ಅಂದಿದ್ದಾರೆ. ಮಾಸ್ಕ್ ಕಡ್ಡಾಯಗೊಳಿಸಬೇಕು ಎಂದು ಪಿಎಂ ಸೂಚನೆ ನೀಡಿದ್ದಾರೆ. ನೈಟ್ ಕರ್ಫ್ಯೂ ಬಗ್ಗೆ ಪ್ರಧಾನಿ ಯಾವುದೇ ಸೂಚನೆ ಕೊಟ್ಟಿಲ್ಲ. ಹೀಗಾಗಿ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

    ಇದನ್ನು ಓದಿ: PM Modi: ಕೋವಿಡ್​19 ಎರಡನೇ ಅಲೆ ತಡೆಯಲು ತ್ವರಿತ ನಿರ್ಣಾಯಕ ಕ್ರಮಕೈಗೊಳ್ಳಲು ಪ್ರಧಾನಿ ಸೂಚನೆ

    ಸಾರ್ವಜನಿಕ ಸಭೆ ಸಮಾರಂಭಗಳಿಗೆ ಅಡ್ಡಿ ಇಲ್ಲ. ಇನ್‌ಡೋರ್ ಕಾರ್ಯಕ್ರಮಗಳಿಗೆ ಮಾತ್ರ ನಿರ್ದಿಷ್ಟ ಸಂಖ್ಯೆಯ ಮಿತಿ ಹೇರಲಾಗಿದೆ. ಕಡಿಮೆ ಜನ ಭಾಗವಹಿಸಲು ಅನುಮತಿ ನೀಡಲಾಗಿದ್ದು, ಎಲ್ಲಾ ಕಡೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೇಂದ್ರದಿಂದ ಮೂರು ಪ್ರಮುಖವಾಗಿ ಸಲಹೆಗಳನ್ನು ನೀಡಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ ಹಾಗೂ ಇನ್ ಡೋರ್ ಕಾರ್ಯಕ್ರಮಗಳ ಬಗ್ಗೆ ಎಚ್ಚರವಿರಲಿ ಎಂಬ ಸಲಹೆ ನೀಡಲಾಗಿದೆ. ಸಿನಿಮಾ ಹಾಲ್ ಗಳಲ್ಲಿ ಈಗಿರುವ ಮಾರ್ಗಸೂಚಿಗಳನ್ನ ಅನುಸರಿಸಲಾಗುವುದು ಎಂದು ಸಿಎಂ ತಿಳಿಸಿದರು.

    ಮೂರು ಜಿಲ್ಲೆಗಳಲ್ಲಿ ಹೆಚ್ಚಿನ ನಿವಹಿಸಿ ಎಂದು ಪಿಎಂ ಮೋದಿ ಹೇಳಿದ್ದಾರೆ. ಬೆಂಗಳೂರು
    ಬೀದರ್ ಹಾಗೂ ಕಲಬುರ್ಗಿ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಶೇ.93 ರಷ್ಟು ಆರ್​ಟಿಪಿಸಿಆರ್​ ಟೆಸ್ಟಿಂಗ್‌ ಗುರಿ ಸಾಧಿಸಲಾಗಿದೆ. ಇದಕ್ಕೆ ಕೇಂದ್ರ ಗೃಹ ಸಚಿವರಿಂದ ಶ್ಲಾಘನೆ ಸಿಕ್ಕಿದೆ. ಬೀದರ್, ಕಲಬುರ್ಗಿ, ಬೆಂಗಳೂರು ಜಿಲ್ಲೆಗಳಿಗೆ ಪ್ರತ್ಯೇಕ ಕಾರ್ಯತಂತ್ರ ರೂಪಿಸಲು ಸಲಹೆ ಕೊಟ್ಟಿದ್ದಾರೆ. ಮೂರ‌ನೇ ಹಂತದ ಪಟ್ಟಣಗಳಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಮೈಕ್ರೋ ಕಂಟೈನ್ಮೆಂಟ್ ವಲಯಗಳ ಹೆಚ್ಚಳಕ್ಕೆ ಸೂಚಿಸಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
    Published by:HR Ramesh
    First published: