Narendra Modi: ಬೆಂಗಳೂರಿಗರನ್ನು ಹಾಡಿಹೊಗಳಿದ ಮೋದಿ; ಟ್ರಾಫಿಕ್ ಜಾಮ್ ಆಗಿದ್ದು ನನ್ನಿಂದ, ಕ್ಷಮೆ ಇರಲಿ

ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಗೆ ಮುಕ್ತಿ ನೀಡಲು, ಬೆಂಗಳೂರಿನ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಸದಾ ಬದ್ಧವಾಗಿದೆ. ನಿಮ್ಮ ಸೇವೆಗೆ ನಾವು ಸದಾ ಸಿದ್ಧರಿದ್ದೇವೆ ಎಂದು ಮೋದಿ ಹೇಳಿದ್ದಾರೆ

ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ

  • Share this:
ಬೆಂಗಳೂರು (ಜೂ 20): ಕೊಮ್ಮಘಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ರು. ಸಬ್ ಅರ್ಬನ್  ರೈಲ್ವೆ (Suburban Railway) ಯೋಜನೆಯ ಅಂಚೆ ಚೀಟಿ ಬಿಡುಗಡೆ ಮಾಡಿದರು. ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳ (National Highway) ಯೋಜನೆಗಳ ಪ್ರದರ್ಶನವನ್ನು ವೀಕ್ಷಿಸಿ, ಬೆಂಗಳೂರಿನ ಸರ್. ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಯಲಹಂಕ- ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ಜೋಡಿ ರೈಲು ಮಾರ್ಗ ಹಾಗೂ 100% ವಿದ್ಯುದೀಕರಣಗೊಂಡ ಕೊಂಕಣ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದೇ ವೇಳೆ ಕನ್ನಡದಲ್ಲೇ (Kannada) ಭಾಷಣ ಆರಂಭಿಸಿದ ಮೋದಿ ಬೆಂಗಳೂರಿಗರನ್ನು (Bengaluru) ಹಾಡಿ ಹೊಗಳಿದ್ದಾರೆ.

ಬೆಂಗಳೂರನ್ನು ಹಾಡಿ ಹೊಗಳಿದ ಮೋದಿ

ಬೆಂಗಳೂರಿನ ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ 40 ವರ್ಷಗಳಿಂದ ಚರ್ಚೆಯಲ್ಲೇ ಕಾಲ ಕಳೆಯಲಾಯಿತು. ಆದರೆ ನಾವು ಆ ರೀತಿ ಅಲ್ಲ, 40 ತಿಂಗಳಲ್ಲಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ್ದೇವೆ. ಕೆಲವೇ ತಿಂಗಳಲ್ಲಿ ನಗರ ರೈಲು ಯೋಜನೆ ಪೂರ್ಣಗೊಳಿಸಲು ಪಣ ತೊಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗರದ ಕೊಮ್ಮಘಟ್ಟದಲ್ಲಿ 33 ಸಾವಿರ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು, ಇಲ್ಲಿನ ಯುವ ಶಕ್ತಿ, ಉದ್ಯಮಶೀಲತೆಯನ್ನು ಹಾಡಿ ಹೊಗಳಿದ್ದಾರೆ.

ಅಭಿವೃದ್ಧಿಗೆ ಡಬಲ್​ ಇಂಜಿನ್​ ಸರ್ಕಾರ ಬದ್ಧ

ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಗೆ ಮುಕ್ತಿ ನೀಡಲು, ಬೆಂಗಳೂರಿನ ಅಭಿವೃದ್ಧಿಗೆ ಡಬಲ್ ಇಂಜಿನ್ ಸರ್ಕಾರ ಸದಾ ಬದ್ಧವಾಗಿದೆ. ನಿಮ್ಮ ಸೇವೆಗೆ ನಾವು ಸದಾ ಸಿದ್ಧರಿದ್ದೇವೆ ಎಂದು ಮೋದಿ ಹೇಳಿದ್ದಾರೆ ಬೆಂಗಳೂರು ಕನಸುಗಳ ನಗರ. ಅಭಿವೃದ್ಧಿಯೇ ಬೆಂಗಳೂರು ಯುವ ಜನತೆ ಕನಸಾಗಿದೆ. ಸರ್ಕಾರದ ನೆರವು ಸಿಕ್ಕರೆ ಬೆಂಗಳೂರಿನ ಯುವಕರು ಏನನ್ನು ಬೇಕಾದರೂ ಸಾಧಿಸುತ್ತಾರೆ. ಇಲ್ಲಿ ಅಂತಹ ಉದ್ಯಮಶೀಲತೆಯ ಶಕ್ತಿ ಇದೆ.

ಆತ್ಮನಿರ್ಭರ್ ಭಾರತ್ ಶಕ್ತಿಗೆ ಪ್ರೇರಣೆ

ಬೆಂಗಳೂರು ನಗರ ಆತ್ಮನಿರ್ಭರ್ ಭಾರತ್ ಶಕ್ತಿಗೆ ಪ್ರೇರಣೆ ನೀಡಿದೆ. ಇಂತಹ ನಗರಕ್ಕೆ 40 ವರ್ಷಗಳ ಹಿಂದೆಯೇ ಸಬ್ ಅರ್ಬನ್ ರೈಲು ಸೇರಿದಂತೆ, ಪ್ರಯಾಣ ಸಮಯವನ್ನು ಕಡಿಮೆಗೊಳಿಸುವ, ಟ್ರಾಫಿಕ್ ಜಾಮ್ ನಿಂದ ಮುಕ್ತಿ ನೀಡುವ ಇತರ ಯೋಜನೆಗಳು ಲಭ್ಯವಾಗಿದ್ದಿದ್ದರೆ ಕಥೆಯೇ ಬೇರೆ ಇರುತ್ತಿತ್ತು. ನನ್ನ ನಂಬಿ ನೀವು ಜವಾಬ್ದಾರಿ ಕೊಟ್ಟಿದ್ದೀರಿ, ಪ್ರತಿ ಕ್ಷಣವನ್ನೂ ನಿಮ್ಮ ಸೇವೆಗೆ ಮೀಸಲಿಟ್ಟಿದ್ದೇನೆ. ನಾನು ಸಮಯ ವ್ಯರ್ಥ ಮಾಡಲು ಹೋಗೊದಿಲ್ಲ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Narendra Modi: ನಮೋಗೆ ರೇಷ್ಮೆ ನೂಲು, ಬನಾರಸ್ ಮುತ್ತುಗಳಿಂದ ಮಾಡಿದ ಮೈಸೂರು ಪೇಟ; ಸ್ವರ್ಣ ಲೇಪಿತ ಅಕ್ಷರದ ಫೋಟೋ ಗಿಫ್ಟ್

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೊಹ್ಲೋಟ್, ಕೇಂದ್ರ ಮಂತ್ರಿಗಳಾದ ಪ್ರಹ್ಲಾದ್ ಜೋಶಿ, ಸಂಸದರಾದ ಪಿ.ಸಿ. ಮೋಹನ್, ಡಿ.ವಿ. ಸದಾನಂದಗೌಡ, ಎಲ್.ಎಸ್. ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್ ಸೇರಿದಂತೆ ಅಧಿಕಾರಿಗಳು, ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿದರು. ಐಐಎಸ್ಸಿಯಲ್ಲಿನ ಮೊದಲ ಕಾರ್ಯಕ್ರಮ ಮುಗಿಸಿ ಅಲ್ಲಿಂದ ನೇರವಾಗಿ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಗೆ ಆಗಮಿಸಿದ ಪಿಎಂ ಮೋದಿ, ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣಗೊಳಿಸಿದರು.

ಇದನ್ನೂ ಓದಿ: PM Modi: ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಸೂಚಿಸಿದ ಪೊಲೀಸರು

ನಂತರ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು. ಬಳಿಕ ಉನ್ನತೀಕರಿಸಿದ ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದರು. ಅಲ್ಲಿಂದ ನೇರವಾಗಿ ಕೊಮ್ಮಟ್ಟಕ್ಕೆ ತೆರಳಿ ಸಬ್ ಅರ್ಬನ್ ರೈಲ್ವೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಜಾರಿಗೆ ಚಾಲನೆ ನೀಡಿದರು.
Published by:Pavana HS
First published: