ಕರ್ನಾಟಕದಲ್ಲೀಗ ಮೊದಲ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ; ಇಂದು ಮೋದಿ-ರಾಹುಲ್​​ ಪ್ರಚಾರ!

ರಾಜ್ಯದಲ್ಲಿ ಏಪ್ರಿಲ್ 18 ಮತ್ತು 23ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಕಣದಲ್ಲಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಘೋಷಿಸಿದೆ.

Ganesh Nachikethu | news18
Updated:April 13, 2019, 5:34 PM IST
ಕರ್ನಾಟಕದಲ್ಲೀಗ ಮೊದಲ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ; ಇಂದು ಮೋದಿ-ರಾಹುಲ್​​ ಪ್ರಚಾರ!
ರಾಹುಲ್​-ಮೋದಿ
Ganesh Nachikethu | news18
Updated: April 13, 2019, 5:34 PM IST
ಬೆಂಗಳೂರು(ಏ.13): ಕರ್ನಾಟಕದಲ್ಲೀಗ ಮೊದಲನೇ ಹಂತದ ಚುನಾವಣೆಗೆ ದಿನಗಣನೆ ಶುರುವಾಗಿದೆ. ಇದೇ ಏಪ್ರಿಲ್​​​ 18ಕ್ಕೆ ಮೊದಲ ಹಂತದ ಚುನಾವಣೆಗೆ ಮತದಾನ ಕೂಡ ನಡೆಯಲಿದೆ. ಹಾಗಾಗಿ ಈ ಚುನಾವಣೆ ಗೆಲ್ಲಲು ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಮತ್ತು ಬಿಜೆಪಿ ಭರ್ಜರಿ ತಯಾರಿ ನಡೆಸಿಕೊಂಡಿವೆ. ನಿನ್ನೆಯಷ್ಟೇ ಕೊಪ್ಪಳದ ಗಂಗಾವತಿಯಲ್ಲಿ ಪ್ರಚಾರ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಇಂದು ಮಂಗಳೂರು ಸೇರಿದಂತೆ  ಬೆಂಗಳೂರಿನಲ್ಲಿ ನಡೆಯಲಿರುವ ಚುನಾವಣಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ ಮೂರು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿಯಲ್ಲಿ ಮೋದಿ ರಣಕಹಳೆ ಮೊಳಗಿಸಲಿದ್ದಾರೆ. ಜತೆಗೆ ರಾಜಧಾನಿಯಲ್ಲಿಯೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ಕಾಂಗ್ರೆಸ್​​ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಇಂದೇ ರಾಜ್ಯಕ್ಕೆ ಆಗಮಿಸುತ್ತಿರುವುದು ವಿಶೇಷ. ರಾಹುಲ್ ರಾಜ್ಯದ 3 ಕಡೆ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ. ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಮೊದಲಿಗೆ ಕೋಲಾರದಲ್ಲಿ ಸಂಸದ ಕೆ.ಹೆಚ್. ಮುನಿಯಪ್ಪ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಬಳಿಕ ಚಿತ್ರದುರ್ಗದಲ್ಲಿ ಪ್ರಚಾರ ಮುಗಿಸಿ ಮಂಡ್ಯ ಮತ್ತು ಮೈಸೂರು ಜಿಲ್ಲೆ ಕೆಆರ್ ನಗರದಲ್ಲಿ ನಿಖಿಲ್ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎನ್ನುತ್ತಿವೆ ಮೂಲಗಳು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್​​-ಬಿಜೆಪಿ ಸರ್ಕಸ್​​; ರಾಜ್ಯದಲ್ಲಿ ಒಂದೇ ದಿನ ಮೋದಿ, ರಾಹುಲ್‌ ದಾಂಗುಡಿ

ಈ ಹಿಂದೆಯೇ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿತ್ತು. ಈಗಾಗಲೇ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಈ ಸಲವು ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋದು ನಮ್ಮ ಉದ್ದೇಶ. ಹೀಗಾಗಿ ನಾವು ನಮ್ಮ ರಾಜ್ಯದಿಂದ 22 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದು, ಮೋದಿಯವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​​ ಯಡಿಯೂರಪ್ಪನವರೇ ಖುದ್ದು ತಿಳಿಸಿದ್ದರು.

ಇದನ್ನೂ ಓದಿ: ನಿಖಿಲ್ ನಿಮ್ಮ ಮಗನಿದ್ದಂತೆ, ನೀವೇ ಆತನನ್ನು ರಾಜಕೀಯದಲ್ಲಿ ಎತ್ತಿ ಆಡಿಸಬೇಕು; ಮಂಡ್ಯದಲ್ಲಿ ಭಾವುಕರಾದ ದೇವೇಗೌಡರು

ಇತ್ತ ಕಾಂಗ್ರೆಸ್​ ಕೂಡ ರಾಜ್ಯದಲ್ಲಿ ಏಪ್ರಿಲ್ 18ರಂದು ಮೊದಲ ಹಂತದ ಮತದಾನಕ್ಕೂ ಮುನ್ನ ರಾಹುಲ್ ಗಾಂಧಿ ದಕ್ಷಿಣ ಕರ್ನಾಟಕದಲ್ಲಿ ಕನಿಷ್ಟ ನಾಲ್ಕು ಸಮಾವೇಶಗಳಲ್ಲಿ ಭಾಗವಹಿಸಲು ಯೋಜನೆ ರೂಪಿಸುತ್ತೇವೆ ಎಂದು ಹೇಳಿತ್ತು. ದಕ್ಷಿಣ ಕರ್ನಾಟಕದಲ್ಲಿ ಏಪ್ರಿಲ್​​​ 18ರಂದು ಮೊದಲ ಹಂತದ ಚುನಾವಣೆಯಲ್ಲಿ ಮಗ್ನವಾಗಿದ್ದರೆ, ಉತ್ತರ ಕರ್ನಾಟಕ ಈ ಇಬ್ಬರು ನಾಯಕರ ಪ್ರಚಾರಕ್ಕೆ ವೇದಿಕೆಯಾಗಲಿದೆ ಎಂದು ತಿಳಿದು ಬಂದಿದೆ.
Loading...

ರಾಜ್ಯದಲ್ಲಿ ಏಪ್ರಿಲ್ 18 ಮತ್ತು 23ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಕಣದಲ್ಲಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ಘೋಷಿಸಿದೆ.
------------
First published:April 13, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626