Air Show 2023: ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೆಂಗಳೂರು ಏರ್ ಶೋ ಉದ್ಘಾಟನೆ
Air Show 2023: ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಬೆಂಗಳೂರು ಏರ್ ಶೋ ಉದ್ಘಾಟನೆ
2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2023ರ ಫೆಬ್ರವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಏರ್ ಶೋ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2023ರ ಫೆಬ್ರವರಿ 13ರಿಂದ 17ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾಲಿನ್ಸ್ ಏರೋಸ್ಪೇಸ್ ಗ್ಲೋಬಲ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ನ್ನು ಉದ್ಘಾಟಿಸಿ ಮಾತನಾಡಿದ್ರು. ಪ್ರಧಾನಿ ಮೋದಿಯವರು ಏರ್ ಶೋಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ರು.
ರಾಜ್ಯದಲ್ಲಿರುವ ಏರೋಸ್ಪೇಸ್ ಸಂಶೋಧನಾ ಕೇಂದ್ರದ ಬಗ್ಗೆ, ವಿಮಾನಯಾನ, ವಿಮಾನ ಉತ್ಪಾದನಾ ರಂಗಗಳಲ್ಲಿನ ಅವಕಾಶಗಳು ಹಾಗೂ ಸಾಧ್ಯತೆಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದ್ರು
ಏರ್ ಶೋ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿದೊಡ್ಡ ಪ್ರದರ್ಶನ ಇದಾಗಿದ್ದು, ಏರ್ ಶೋ ಪ್ರದರ್ಶನ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗಳಿಕೆಲ್ಲೊಂದಾಗಿದೆ.
ಕೇಂದ್ರ ರಕ್ಷಣಾ ಸಚಿವಾಲಯದ ಭಾಗವಾದ ‘ಡಿಫೆನ್ಸ್ ಎಕ್ಸಿಬಿಷನ್ ಆರ್ಗನೈಜೇಷನ್ ವತಿಯಿಂದ ಈ ವೈಮಾನಿಕ ಪ್ರದರ್ಶನ ನಡೆಯಲಿದೆ.
ಇದರಲ್ಲಿ ಭಾರತೀಯ ಏರೋಸ್ಪೇಸ್ ಉದ್ಯಮದ ಹಲವಾರು ತಯಾರಕರು ಮತ್ತು ಸೇವಾ ಪೂರೈಕೆದಾರರು ಭವಿಷ್ಯದ ಗ್ರಾಹಕರನ್ನು ಭೇಟಿ ಮಾಡುತ್ತಾರೆ.
Published by:ಪಾವನ ಎಚ್ ಎಸ್
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ