Seema.RSeema.R
|
news18-kannada Updated:February 27, 2020, 12:49 PM IST
ಪ್ರಧಾನಿ ಮೋದಿ - ಬಿಎಸ್ವೈ
ಬೆಂಗಳೂರು (ಫೆ.27): ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬ. 78ನೇ ವಸಂತಕ್ಕೆ ಕಾಲಿರಿಸುತ್ತಿರುವ ಅವರಿಗೆ ಶುಭಾಶಯಗಳ ಮಹಾಪೂರ ಹರಿದುಬರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಅವರಿಗೆ ಶುಭ ಹಾರೈಸಿ, ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶ್ರಮಜೀವಿ. ರಾಜ್ಯದ ಅಭಿವೃದ್ಧಿಗೆ ಅದರಲ್ಲಿಯೂ ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಅವರಿಗೆ ದೇವರು ಇನ್ನಷ್ಟು ಆರೋಗ್ಯ ಮತ್ತು ಆಯಸ್ಸು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ.
ಕೇಂದ್ರ ಸಚಿವ ರಾಜನಾಥ್ ಸಿಂಗ್ ಕೂಡ ಅವರ ಹುಟ್ಟುಹಬ್ಬಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದು, ಕರ್ನಾಟಕದ ಅಭಿವೃದ್ಧಿಗಾಗಿ ಕಠಿಣ ಪರಿಶ್ರಮ ಪಡುತ್ತಿರುವ ಅವರಿಗೆ ದೀರ್ಘಾಯುಷ್ಯಿಯಾಗಿರಲಿ ಎಂದು ಹಾರೈಸಿದ್ದಾರೆ.
ರಾಜ್ಯ ನಾಯಕರು ಕೂಡ ಯಡಿಯೂರಪ್ಪಗೆ ಶುಭ ಕೋರಿ ಟ್ವೀಟ್ ಮಾಡಿದ್ದು, ರಾಜ್ಯ ಕಾರಣ ಕಂಡ ಅಪ್ರತಿಮ ರಾಜಕಾರಣ ನಮ್ಮ ಬಿಎಸ್ ಯಡಿಯೂರಪ್ಪ ಅವರು ಎಂದು ಶುಭಕೋರಿದ್ದಾರೆ.
ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಕೂಡ ಅವರಿಗೆ ಶುಭಾಶಯ ಕೋರಿದ್ದು, ಪತ್ರದ ಮೂಲಕ ಸಂದೇಶ ರವಾನೆ ಮಾಡಿದ್ದಾರೆ. ಇದೇ ವೇಳೆ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ಅಭಿನಂದನಾ ಸಮಾರಂಭಕ್ಕೆ ಕಾರಣಾಂತರಗಳಿಂದ ಭಾಗವಹಿಸಲಾಗುತ್ತಿಲ್ಲ ಎಂದು ಕೂಡ ತಿಳಿಸಿದ್ದಾರೆ.
ಪ್ರವಾಸೋದ್ಯಮ ಸಚಿವ ಸಿಟಿ ರವಿ ಕೂಡ ಬಿಎಸ್ ಯಡಿಯೂರಪ್ಪ ಜನ್ಮ ದಿನಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ.
First published:
February 27, 2020, 10:51 AM IST