New Year Celebration: ನೆರೆಯ ಚೀನಾದಲ್ಲಿ ಕೊರೊನಾ (Corona Virus) ಅಬ್ಬರಿಸುತ್ತಿರುವ ಹಿನ್ನೆಲೆ ಭಾರತ ಅಲರ್ಟ್ ಆಗಿದೆ. ಕೊರೊನಾ ಆತಂಕದ ಸಂದರ್ಭದಲ್ಲಿ ಕ್ರಿಸ್ಮಸ್ (Christmas) ಮತ್ತು ಹೊಸ ವರ್ಷಾಚರಣೆ ಕೊರೊನಾ ಹಬ್ಬಲು ಕಾರಣ ಆಗತ್ತಾ ಅನ್ನೋ ಆತಂಕ ಎದುರಾಗಿದೆ. ಈ ಎರಡೂ ಸಂದರ್ಭದಲ್ಲಿ ಜನರು ಒಂದೆಡೆ ಸೇರುತ್ತಾರೆ. ಇದರಿಂದ ಕೊರೊನಾ ತೀವ್ರತೆ ಪಡೆದುಕೊಳ್ಳುವ ಸಾಧ್ಯೆತಗಳಿವೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೊಸ ವರ್ಷವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಈಗಾಗಲೇ ರಾಜಧಾನಿಯ ಬ್ರಿಗೇಡ್ ರೋಡ್ ವಿದ್ಯುತ್ ದೀಪಾಲಂಕರಗಳಿಂದ ಕಂಗೊಳಿಸುತ್ತಿದೆ. ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ 32 ಸೂತ್ರದ ಕಡ್ಡಾಯ ಪಾಲನೆಯ ಸುತ್ತೋಲೆ ಹೊರಡಿಸಲಾಗಿದೆ.
ಹೊಸ ವರ್ಷದ ಭದ್ರತೆಯನ್ನ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಇಡೀ ನಗರದ ಹೊಣೆ ನೀಡಿದ್ದಾರೆ. ಈ ಸಂಬಂಧ 32 ಸೂತ್ರದ ಸುತ್ತೋಲೆ ನೀಡಲಾಗಿದೆ.
32 ಸೂತ್ರದ ಸುತ್ತೋಲೆ
1.ಬಂದೋಬಸ್ತ್ನ್ನು ಸೆಕ್ಟರ್ವೈಸ್, ಸೆಕ್ಟರ್ ಮೊಬೈಲ್ಗಳನ್ನು ಕರ್ತವ್ಯಕ್ಕೆ ನಿಯೋಜಿಸಿ, ನಿಗದಿತ ಸಮಯ ಹಾಗೂ ನಿಗದಿತ ರೂಟ್ ಕೊಟ್ಟು, ಸೆಕ್ಟರ್ ಪೆಟ್ರೋಲಿಂಗ್ನ್ನು ವ್ಯವಸ್ಥಿತವಾಗಿ ಮಾಡಲು ಸೂಚನೆ.
2.ಹೊಸ ವರ್ಷಾಚರಣೆಯನ್ನು ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಮುಂಗಡವಾಗಿ ಮಾಹಿತಿ ಸಂಗ್ರಹಿಸಿ ನಿಗಾ ವಹಿಸುವುದು.
3.ಮಾಲ್ಗಳಿಗೆ ಬರುವ ವ್ಯಕ್ತಿಗಳ ಬಗ್ಗೆ ತೀವ್ರನಿಗಾ.
4.ಮಾಲ್ಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರುವ ಪರಿಶೀಲನೆ, ಮಾಲ್ಗಳಿಗೆ ಆಗಮಿಸುವ ವಾಹನಗಳ ಕಡ್ಡಾಯ ಪರಿಶೀಲನೆ.
5.ತಮ್ಮ ಠಾಣಾ ವ್ಯಾಪ್ತಿಯಲ್ಲಿ ಇನ್ಸ್ಪಕ್ಟರ್ 31 ರ ರಾತ್ರಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ.
6.ಬಂದೋಬಸ್ತ್ಗೆ ನೇಮಕವಾದ ಸಿಬ್ಬಂದಿ ಮೇಲಾಧಿಕಾರಿಗಳ ಆದೇಶವಿಲ್ಲದೆ ಸ್ಥಳವನ್ನು ಬಿಡಬಾರದು.
7.ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣಾ ಪಾಯಿಂಟ್ ಕಡ್ಡಾಯ.
8.ಬಂದೋಸ್ತ್ಗೆ ನೇಮಕ ಮಾಡಿದ ಎಲ್ಲಾ ಅಧಿಕಾರಿಗಳು, ಸರ್ವಿಸ್ ರಿವಾಲ್ವಾರ್ ಹೊಂದಿರತಕ್ಕದ್ದು ಹಾಗೂ ಸಿಬ್ಬಂದಿ ಹೆಲ್ಮೆಟ್ ಮತ್ತು ಲಾಠಿಗಳನ್ನು ಹೊಂದಿರತಕ್ಕದ್ದು.
9.ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜರ್ಸಿ ಹಾಗೂ ರೈನ್ ಕೋಟ್ ಹೊಂದಿರತಕ್ಕದ್ದು.
10.ರಾತ್ರಿ ಸಮಯದಲ್ಲಿ ಮದ್ಯಪಾನ ಸೇವಿಸಿ ಬರುವರ ಸಂಖ್ಯೆ ಹೆಚ್ಚು ಬರುವರು ಹಿನ್ನೆಲೆ ಅಧಿಕಾರಿ ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತನೆ.
11.ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೆಚ್ಚಿನ ಜನಸಂದಣಿ ವೇಳೆ ಕಳ್ಳರ ಬಗ್ಗೆ ನಿಗಾ.
ಇದನ್ನೂ ಓದಿ: Corona Virus: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ? ಹೊಸ ವರ್ಷಾಚರಣೆಗೆ ಬ್ರೇಕ್ ಸಾಧ್ಯತೆ
12.ಹೆಣ್ಣು ಮಕ್ಕಳನ್ನು ಚುಡಾಯಿಸುವವರ ವಿರುದ್ಧ ಕೂಡಲೇ ಗಮನಹರಿಸಿ ಕಾನೂನಿನಡಿಯಲ್ಲಿ ಬಂಧನ.
13.ಕುಡಿದು ರಸ್ತೆಗಳ ಮೇಲೆ ಬಾಟಲಿಗಳನ್ನು ಒಡೆದು / ಎಸೆದು ದಾಂಧಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆಯೋದು.
14.ಮದ್ಯ ಮಾರಾಟ ಮಾಡುವ ಎಲ್ಲಾ ಸ್ಥಳಗಳ ಮಾಲೀಕರಿಗೆ ಕರ್ನಾಟಕ ಅಬಕಾರಿ ಕಾಯ್ದೆ ಅಡಿ ನೋಟಿಸ್ ಜಾರಿ.
15.ಜನರು ಸೇರುವ ರಸ್ತೆಗಳನ್ನು ಮತ್ತು ಪ್ರದೇಶಗಳನ್ನು ಗುರುತಿಸಿ ರಾತ್ರಿ ವೇಳೆಯಲ್ಲಿ ರೆಕಾರ್ಡ್ ಆಗುವಂತಹ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು.
16.ಎಲ್ಲಾ ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ಖಚಿತಪಡಿಸಿಕೊಳ್ಳುವುದು ಬೆಸ್ಕಾಂ ಅಧಿಕಾರಿಗಳ ಜತೆ ಸಂಪರ್ಕ.
17.ದಿನಾಂಕ: 31-12-2022 ರ ಸಂಜೆ 6-00 ಗಂಟೆಯಿಂದ ಮರುದಿನ ದಿನಾಂಕ: 01-01-2023 ರ 6-00 ಗಂಟೆವರೆಗೆ ಎಲ್ಲಿಯೂ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳುವುದು.
18.ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸ್ಥಳಕ್ಕನುಗುಣವಾಗಿ ಜನರ ಆಗಮನ ಮತ್ತು ನಿರ್ಗಮನವನ್ನು ನಿಯಂತ್ರಣ
19.ಅಬಕಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಂಪರ್ಕವನ್ನಿಟ್ಟುಕೊಂಡು ಪಬ್ಗಳು, & ರೆಸ್ಟೋರೆಂಟ್ಗಳು, ವೈನ್ಶಾಪ್ಗಳು ಇತ್ಯಾದಿ ಸ್ಥಳಗಳಲ್ಲಿ ಅನಧಿಕೃತವಾದ ಮಾರಾಟದ ಬಗ್ಗೆ ಜಂಟಿ ತಪಾಸಣೆ ಕೈಗೊಳ್ಳುವುದು.
20.ಹೊಸ ವರ್ಷಾಚರಣೆಯ ಸಂದರ್ಭವನ್ನು ಬಳಸಿಕೊಂಡು ದಾಂಧಲೆ ಮಾಡುವ ಕಿಡಿಗೇಡಿಗಳ ವಿರುದ್ಧ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು.
21.ಎಲ್ಲಾ ಠಾಣೆಯ ಅಧಿಕಾರಿಗಳ ವ್ಯಾಪ್ತಿಯಲ್ಲಿ ಚಟುವಟಿಕೆಯಲ್ಲಿರುವ ರೌಡಿಗಳು ಹಾಗೂ ಅವರ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವುದು.
22.ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ಕಬ್ಬನ್ ರೋಡ್ಗಳಲ್ಲಿ ವಾಹನ ನಿಲುಗಡೆಯನ್ನು ನಿಷೇದಿಸಿದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
23.ರಾತ್ರಿ ಸಮಯದಲ್ಲಿ ಸಾರ್ವಜನಿಕರು ಮದ್ಯಪಾನ ಸೇವಿಸಿ ಬರುವ ಸಂಭವವಿರುವುದರಿಂದ ಅಧಿಕಾರಿ ಮತ್ತು ಸಿಬ್ಬಂದಿಗಳು ಸೌಜನ್ಯದಿಂದ ವರ್ತನೆ.
24.ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗಳಲ್ಲಿ ಹೆಚ್ಚಿನ ಜನಸಂದಣಿ ವೇಳೆ ಕಳ್ಳರ ಬಗ್ಗೆ ನಿಗಾ,ಸಂಶಯಾಸ್ಪದ ವ್ಯಕ್ತಿಗಳ ಮೇಲೆ ತಪಾಸಣೆ.
25.ಸಂದರ್ಭದಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸುವವರ ವಿರುದ್ಧ ಕೂಡಲೇ ಗಮನಹರಿಸಿ ಕಾನೂನಿನಡಿಯಲ್ಲಿ ಬಂಧನಕ್ಕೆ ಒಳಗಾಗಿಸುವುದು.
26.ಪ್ರಮುಖ ಪ್ರೈಓವರ್ಗಳ ಮೇಲೆ ವಾಹನ ಸಂಚಾರವನ್ನು ನಿಷೇದಿಸಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು.
27.ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಅಧಿಕಾರಿಗಳು ತಮ್ಮ ವಾಹನಗಳಿಗೆ ಪಿ.ಎ. ಸಿಸ್ಟಮ್ ಅಳವಡಿಸಿಕೊಳ್ಳುವರು.
28.ಗಸ್ತು ಮತ್ತು ಪಾಯಿಂಟ್ಗಳಿಗೆ ನೇಮಕ ಮಾಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಸ್ಥಳಗಳಲ್ಲಿ ಏನಾದರೂ ವಿಶೇಷತೆ ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರುವಂತೆ ತಿಳುವಳಿಕೆ ನೀಡುವುದು.
29.ಠಾಣೆಯ ಎಲ್ಲಾ ಹೊಯ್ಸಳ ಮತ್ತು ಚೀತಾಗಳು ಠಾಣಾ ಸರಹದ್ದಿನಲ್ಲಿ ಚುರುಕಾದ ಗಸ್ತು ಕರ್ತವ್ಯವನ್ನು ನಿರ್ವಹಿಸುವುದು.
30.ಬಂದೋಬಸ್ತ್ ಕರ್ತವ್ಯಕ್ಕೆ ಅವಶ್ಯಕತೆ ಇರುವ ಹೋಂಗಾರ್ಡ್ಸ್, ಸಿವಿಲ್ ಡಿಫೆನ್ಸ್ ಅಧಿಕಾರಿಗಳು, ಅಗ್ನಿಶಾಮಕ ವಾಹನಗಳು, ಆಂಬುಲೆನ್ಸ್ ವಾಹನ ಕಡ್ಡಾಯ.
31.ಉಪ ಪೊಲೀಸ್ ಆಯುಕ್ತರುಗಳು,ಸಹಾಯಕ ಪೊಲೀಸ್ ಆಯುಕ್ತರುಗಳು ತಮ್ಮ ವಿಭಾಗದ ಮತ್ತು ಉಪ ವಿಭಾಗಗಳ ಸಂಪೂರ್ಣ ಬಂದೋಬಸ್ತ್ ಉಸ್ತುವಾರಿಯನ್ನು ನೋಡಿಕೊಳ್ಳುವುದು.
32.ಪಬ್ ಬಾರ್ ರೆಸ್ಟೋರೆಂಟ್ಗಳ ಬಳಿ ಏನೇ ಸಮಸ್ಯೆ ಆದ್ರೂ ಮಾಲೀಕರೇ ಹೊಣೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ