• Home
  • »
  • News
  • »
  • state
  • »
  • H D Kumaraswamy: ಇನ್ಸ್​ಪೆಕ್ಟರ್ ನಂದೀಶ್ ಸಾವು ಹೃದಯಾಘಾತವಲ್ಲ ಕೊಲೆ! ಉನ್ನತ ಮಟ್ಟದ ತನಿಖೆಗೆ ಎಚ್​ಡಿಕೆ ಆಗ್ರಹ

H D Kumaraswamy: ಇನ್ಸ್​ಪೆಕ್ಟರ್ ನಂದೀಶ್ ಸಾವು ಹೃದಯಾಘಾತವಲ್ಲ ಕೊಲೆ! ಉನ್ನತ ಮಟ್ಟದ ತನಿಖೆಗೆ ಎಚ್​ಡಿಕೆ ಆಗ್ರಹ

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಈ ಸರಕಾರ ನೇಮಕಾತಿ, ವರ್ಗಾವಣೆಗೆ ಲಕ್ಷಾಂತರ ಹಣ ಪಡೆಯುತ್ತಿದೆ. ಅದೇ ರೀತಿ ಒತ್ತಡ ತಂದು ನಂದೀಶ್ ಅವರಿಂದ ಹಣ ವಸೂಲಿ ಮಾಡಲಾಗಿದೆ. ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

  • Share this:

ಬೆಂಗಳೂರು: ಕೆ.ಆರ್. ಪುರಂ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ನಂದೀಶ್ (Inspector Nandish) ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಅನುಮಾನವಿದೆ ಹೀಗಾಗಿ ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆ ಆಗ್ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (HD Kumaraswamy) ಒತ್ತಾಯಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಕುಮಾರಸ್ವಾಮಿ, ಇದು ಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು ಬರೀ ಹೃದಯಾಘಾತ (Heart Attack) ಅಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ (Investigation) ಆಗಲೇಬೇಕು ಎಂದು ಆಗ್ರಹಿಸಿದರು.


ಈ ಸಾವಿಗೆ ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷ


ಈ ಸಾವಿಗೆ ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷ ಇರುವ ಅನುಮಾನವಿದೆ. ಅದರಲ್ಲೂ ಉತ್ತರ ಭಾರತ ಮೂಲದ ಹಿರಿಯ ಅಧಿಕಾರಿಗಳ ಉದ್ದತಟನ, ಕಿರುಕುಳ, ಸರ್ಕಾರದ ನಡವಳಿಕೆ, ಕಾಸಿಗಾಗಿ ಹುದ್ದೆ ಕೊಡುತ್ತಿರುವುದೇ ಕಾರಣ ಎಂದು  ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.


ಹೃದಯಾಘಾತಕ್ಕೆ ಬಲಿಯಾಗಲು ಕಾರಣವೇನು? 


ರಾಜ್ಯದಲ್ಲಿ ಒಂದು ದುರ್ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ತೀರಿಕೊಂಡರು. ಅಧಿಕಾರಿ ನಂದೀಶ್ ಅವರು  ಹೃದಯಾಘಾತಕ್ಕೆ ಬಲಿಯಾಗಲು ಕಾರಣ ಏನು ಅನ್ನೋದು ನನ್ನ ಪ್ರಶ್ನೆ. ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹೀಗೆ ಆಗಿದೆ ಅಂತ ಅವರ ಧರ್ಮಪತ್ನಿ ಅವರೇ ಹೇಳಿದ್ದಾರೆ. ಕೆಲಸ ಬೇಡ ಪತಿಯನ್ನು ತಂದುಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಸರಕಾರ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದರು.


police officer death case former cm h d kumaraswamy demands investigation pvn
ಇನ್ಸ್​ಪೆಕ್ಟರ್​ ನಂದೀಶ್​


ನಂದೀಶ್ ಸಸ್ಪೆಂಡ್​ ಆಗಿದ್ಯಾಕೆ?


ಕೆ.ಆರ್.ಪುರಂ ಭಾಗದಲ್ಲಿ ಯಾವುದೋ ಒಂದು ಪಬ್ ಇವರ ವ್ಯಾಪ್ತಿಯಲ್ಲಿ ಇತ್ತು. ಬೆಳಗಿನ ಜಾವದವರೆಗೆ ತೆರೆದಿತ್ತು, ಇದಕ್ಕೆ ಈ ಪೊಲೀಸ್ ಸಹಕಾರವಿತ್ತೆಂದು ನಂದೀಶ್ ಅವರನ್ನು ಸಸ್ಪೆಂಡ್ ಮಾಡಿದ್ದಾರಂತೆ. ಸರ್ಕಾರ ಮಧ್ಯರಾತ್ರಿ ಒಂದು ಗಂಟೆಯವರೆಗೆ ರೆಸ್ಟೋರೆಂಟ್ ತೆರೆಯುವ ಅವಕಾಶ ಕೊಟ್ಟಿದೆ. ಆ ಪಬ್ ಎಷ್ಟೊತ್ತು ತೆಗೆದಿತ್ತು, ಅಲ್ಲಿ ಯಾರಿದ್ದರು?  ರಾಜಕಾರಣಿ ಬೆಂಬಲಿಗರು ಎಷ್ಟು ಜನ ಅಲ್ಲಿ ಇದ್ದರು? ಪೊಲೀಸ್ ಅಧಿಕಾರಿಗಳು ಕೂಡ ಡಾನ್ಸ್ ಮಾಡಿದ್ದಾರೆ ಅಂತ ರಿಫೋರ್ಟ್ ಇದೆ. ಇದರ ಬಗ್ಗೆ ತನಿಖೆ ಮಾಡಬೇಕು ಎಂದು ಅವರು ಸರಕಾರವನ್ನು ಎಚ್​ಡಿಕೆ ಒತ್ತಾಯಿಸಿದ್ದಾರೆ.


ಇದನ್ನೂ ಓದಿ:  HD Kumaraswamy: ನಾವು ಸಹಕಾರ ನೀಡದಿದ್ರೆ ಹೆಣ್ಣೆದೆ ಸಿಎಂ ಆಗ್ತಿದ್ರು; ಅಶೋಕ್ ಗಂಡೆದೆ ಹೇಳಿಕೆಗೆ HDK ತಿರುಗೇಟು


ಸರ್ಕಾರದ ನಡವಳಿಕೆಯಿಂದಾದ ಕಗ್ಗೊಲೆ


ಇನ್ಸ್ ಪೆಕ್ಟರ್ ನಂದೀಶ್  ಹಿನ್ನೆಲೆಯನ್ನು ತಿಳಿದುಕೊಂಡಿದ್ದೇನೆ. ಹಿಂದುಳಿದ ವರ್ಗಕ್ಕೆ ಸೇರಿದ ವ್ಯಕ್ತಿ. ಸಸ್ಪೆಂಡ್ ರಿವೋಕ್ ಗಾಗಿ ಹಲವು ಮುಖಂಡರ ಮನೆಗೂ ಹೋಗಿದ್ದರಂತೆ. ಪೊಲೀಸ್ ಅಧಿಕಾರಿ ಬಳಿ 70-80 ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿ, ನಂತರ ಹೀಗೆ ಆದಾಗ ಅವರು ಎಲ್ಲಿ ಹಣ ವಸೂಲಿ ಮಾಡ್ಬೇಕು. ತಪ್ಪು ನಿಮ್ಮದೇ ಇಟ್ಟುಕೊಂಡರೆ ಹೇಗೆ? ಸರ್ಕಾರದ ನಡವಳಿಕೆಯಿಂದ ಆದ ಕಗ್ಗೊಲೆಯೇ ಇದು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


HD Kumaraswamy donates Rs 5 lakh to who died yesterday mrq


Ramanagara: ಬಂಡೆಮಠ ಶ್ರೀಗಳ ಆತ್ಮಹತ್ಯೆ ಕೇಸ್​ಗೆ ರೋಚಕ ಟ್ವಿಸ್ಟ್, ಹನಿಟ್ರ್ಯಾಪ್ ಟೀಂನಲ್ಲಿ ಮತ್ತೊಬ್ಬ ಸ್ವಾಮೀಜಿ?


ನಂದೀಶ್ ಅವರಿಂದ ಹಣ ವಸೂಲಿ


ಈ ಸರಕಾರ ನೇಮಕಾತಿ, ವರ್ಗಾವಣೆಗೆ ಲಕ್ಷಾಂತರ ಹಣ ಪಡೆದು ಕೊಳ್ಳೆ ಹೊಡೆಯುತ್ತಿದೆ. ಅದೇ ರೀತಿ ಒತ್ತಡ ತಂದು ನಂದೀಶ್ ಅವರಿಂದ ಹಣ ವಸೂಲಿ ಮಾಡಲಾಗಿದೆ. ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ ರಕ್ಷಣೆ ಇದೆ ಅಂತ ಹೀಗೆ ಮಾಡುತ್ತಿದ್ದಾರೆ.  ಹಲವಾರು ಪ್ರಕರಣಗಳಲ್ಲಿ ಐಎಎಸ್ ಸೇರಿ ಕೆಲ ಅಧಿಕಾರಿಗಳ ಮನೆಗಳಲ್ಲಿ ಕೋಟಿ ಕೋಟಿ ಹಣ ಸಿಗುತ್ತದೆ. ನಂತರ ನೋಡಿದರೆ ಅಂತಹ ಅಧಿಕಾರಿಗಳು ಆಯಕಟ್ಟಿನ ಜಾಗಕ್ಕೆ ಬರುತ್ತಾರೆ. ಇವರೇ ದಾಳಿ ಮಾಡ್ತಾರೆ. ಅಂತಹ ವ್ಯಕ್ತಿಗಳಿಗೆ ಒಳ್ಳೊಳ್ಳೆ ಪೋಸ್ಟಿಂಗ್ ಕೊಡ್ತಾರೆ ಎಂದು ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Published by:ಪಾವನ ಎಚ್ ಎಸ್
First published: