Bengaluru: ಫೈವ್ ಸ್ಟಾರ್ ಹೋಟೆಲ್ ಮೇಲೆ ದಾಳಿ, ಬೆಳ್ಳಂಬೆಳಗ್ಗೆ ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ

ಸ್ಯಾಟ್ ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿದೆ. ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದೆ. ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ಆಟೋ ಚಾಲಕನ ಕಾಲುಗಳು ಕಟ್ ಆಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಪೊಲೀಸ್ ದಾಳಿ

ಪೊಲೀಸ್ ದಾಳಿ

  • Share this:
ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಫೈವ್ ಸ್ಟಾರ್ ಹೋಟೆಲ್ (Five Star Hotel) ಮೇಲೆ ಹಲಸೂರು ಪೊಲೀಸರು ದಾಳಿ (Police Raide) ನಡೆಸಿದ್ದಾರೆ. ರಾಜಕೀಯ ನಾಯಕರ ಮಕ್ಕಳು ಸಹ ಪಾರ್ಟಿಯಲ್ಲಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಜಿಟಿ ಮಾಲ್ ಮುಂಭಾಗದಲ್ಲಿರುವ "THE PARK" 5 ಸ್ಟಾರ್ ಹೋಟೆಲ್ ಮೇಲೆ ದಾಳಿ ನಡೆದಿದ್ದು, ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಪಾರ್ಟಿ (Drugs Party) ನಡೆಸುತ್ತಿದ್ದ ಅನುಮಾನ ಹಿನ್ನೆಲೆ ದಾಳಿ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಲಸೂರು ಇನ್ ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದು, 50ಕ್ಕೂ ಹೆಚ್ಚು ಯವಕ ಮತ್ತು ಯುವತಿಯರನ್ನು ವಶಕ್ಕೆ ಪಡೆದು ಮೂರು ಟಿಟಿ ವಾಹನದಲ್ಲಿ ಮೆಡಿಕಲ್ ಪರೀಕ್ಷೆಗೆ (Medical Test) ರವಾನೆ ಮಾಡಲಾಗಿದೆ. ವರದಿ ಬಳಿಕ ಡ್ರಗ್ಸ್ ಸೇವನೆ ಮಾಡಿದ್ದಾರ ಇಲ್ವಾ ಎಂಬುದು ಬಯಲಿಗೆ ಬರಲಿದೆ.

ಬಿಬಿಎಂಪಿಯಿಂದ ನಗರದ ಮೇಲ್ಸೇತುವೆಗಳ ಸದೃಢತೆ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ರಸ್ತೆ & ಮೂಲಸೌಕರ್ಯ ವಿಭಾಗದಿಂದ ಚೀಫ್ ಕಮಿಷನರ್ ಗೆ ಮಧ್ಯಂತರ ವರದಿ ಸಲ್ಲಿಕೆ ಮಾಡಲಾಗಿದೆ. ನಗರದ 44 ಮೇಲ್ಸೇತುವೆಗಳ ಸದೃಢತೆ ಪರೀಕ್ಷೆ ನಡೆಸುವಂತೆ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದರು.

ಈ ಹಿನ್ನೆಲೆ ಎಲ್ಲಾ ಮೇಲ್ಸೇತುವೆಗಳ ಸದೃಢತೆ ಪರೀಕ್ಷೆ ಮಾಡಲು ಖಾಸಗಿ ಕಂಪನಿಗೆ ಗುತ್ತಿಗೆ ನೀಡಿತ್ತು. ಇನ್ಫ್ರಾ ಸಪೋರ್ಟ್ ಪ್ರೈ. ಲಿ. ಕಂಪೆನಿಗೆ ಸೇಫ್ಟಿ ಚೆಕ್ಕಿಂಗ್ ಕಾಂಟ್ರಾಕ್ಟ್ ನೀಡಿತ್ತು. ಇದೀಗ ಎಲ್ಲಾ ಫ್ಲೈ ಓವರ್ ಗಳ ಸದೃಢತೆ ಪರೀಕ್ಷೆ ಮಾಡಿ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಮಧ್ಯಂತರ ವರದಿ ಸಲ್ಲಿಕೆ ಮಾಡಿದ್ದಕ್ಕೆ ರಸ್ತೆ & ಮೂಲಸೌಕರ್ಯ ವಿಭಾಗದ ಚೀಫ್ ಇಂಜಿನಿಯರ್ ಮೇಲೆ ಕಮಿಷನರ್ ಗರಂ ಆಗಿದ್ದಾರೆ.

ಇದನ್ನೂ ಓದಿ:  MLC Election: ವಾಯುವ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ

ವಿವರವಾದ ವರದಿ ನೀಡುವಂತೆ ಸೂಚನೆ

ಮೇಲಿಂದ ಮೇಲಕ್ಕೆ ಕಣ್ಕಟ್ಟಿನ ಚೆಕ್ಕಿಂಗ್ ಮಾಡದೇ, ಸವಿಸ್ತಾರವಾಗಿ ವರದಿ ಸಲ್ಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ಚೀಫ್ ಇಂಜಿನಿಯರ್ ಪ್ರಹ್ಲಾದ್ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 44  ಮೇಲ್ಸೇತುವೆಗಳಿದ್ದು, ಈ ಪೈಕಿ ಬಹುತೇಕ ಫ್ಲೈ ಓವರ್ ಗಳ ಬಗ್ಗೆ ಪ್ರಶ್ನೆ ಇದೆ.

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ

ಸ್ಯಾಟ್ ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿದೆ. ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದೆ. ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ಆಟೋ ಚಾಲಕನ ಕಾಲುಗಳು ಕಟ್ ಆಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಸ್ಥಳೀಯರಿಂದ ಆಟೋ ಚಾಲಕನ ರಕ್ಷಣೆ

ಆಟೋ ಚಾಲಕನ ಸ್ಥಿತಿ ಬಹಳ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತದಿಂದ ಮೈಸೂರು ರಸ್ತೆ ಮೂರು ಕಿಲೋ ಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ. ಸದ್ಯ ಅಪಘಾತವಾದ ನಾಲ್ಕು ವಾಹನಗಳನ್ನು ಪೊಲೀಸರು ತೆರವು ಮಾಡುತ್ತಿದ್ದಾರೆ.

ಇದನ್ನೂ ಓದಿ:  CM Ibrahim: ಬಿಜೆಪಿಗೆ ಮತ ಹಾಕಿಸಿದ್ದೇ ಡಿಕೆಶಿ, ಸಿದ್ದು; ಯಡಿಯೂರಪ್ಪ ಜೊತೆ ನಡೆದಿದೆ ಡೀಲ್​- ಇಬ್ರಾಹಿಂ ಆರೋಪ

ಅತಿವೇಗವೇ ಅಪಘಾತಕ್ಕೆ ಕಾರಣ

ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲಾಗುತ್ತಿದೆ.  ಕ್ಯಾಂಟರ್ ನ ಅತಿವೇಗದಿಂದ ನಡದೆ ಸರಣಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೊದಲು ಟೆಂಪೋಗೆ ಡಿಕ್ಕಿ ಹೊಡೆದಿದೆ, ನಂತ್ರ ಆಟೋ ಕೊನೆಗೆ ಬಿಎಂಟಿಸಿ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
Published by:Mahmadrafik K
First published: