ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಬಂದೂಕು; ರೌಡಿಶೀಟರ್​ ವಿನೋದ್​ ಕಾಲಿಗೆ ಗುಂಡೇಟು

ಆರೋಪಿ ಬನ್ನೇರುಘಟ್ಟ ರಸ್ತೆಯ ಇಂಡಿಯನ್ ಕ್ರಿಶ್ಚಿಯನ್ ಸೆರಮನಿ ಬಳಿ ಇದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ದಾಳಿ ನಡೆಸಿದ್ದಾರೆ. ಅಲ್ಲದೆ ಆತನನ್ನು ಸರೆಂಡರ್ ಆಗುವಂತೆ ಹೇಳಿದ್ದಾರೆ. ಆದರೆ, ಪೊಲೀಸರ ಮಾತು ಕೇಳದ ಆರೋಪಿ ಅವರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಫೈರ್​ ಮಾಡಿ ನಂತರ ಬಂಧಿಸಿದ್ದಾರೆ.

MAshok Kumar | news18
Updated:May 18, 2019, 8:24 PM IST
ರಾಜಧಾನಿಯಲ್ಲಿ ಮತ್ತೆ ಸದ್ದು ಮಾಡಿದ ಪೊಲೀಸರ ಬಂದೂಕು; ರೌಡಿಶೀಟರ್​ ವಿನೋದ್​ ಕಾಲಿಗೆ ಗುಂಡೇಟು
ರೌಡಿ ಶೀಟರ್ ವಿನೋದ್.
MAshok Kumar | news18
Updated: May 18, 2019, 8:24 PM IST
ಬೆಂಗಳೂರು (ಮೇ.18) : ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದ್ದು, ಕುಖ್ಯಾತ ರೌಡಿ ವಿನೋದ್ ಅಲಿಯಾಸ್​ ಪಚ್ಚಿಯನ್ನು ಹಿಡಿಯುವ ಯತ್ನದಲ್ಲಿ ಪೊಲೀಸರು ಆತನ ಕಾಲಿಗೆ ಫೈರ್ ಮಾಡಿ ನಂತರ ಬಂಧಿಸಿದ್ದಾರೆ.

ವಿನೋದ್ ಅಲಿಯಾಸ್ ಪಚ್ಚಿ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಇದಲ್ಲದೆ ರಾಬರಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.

ಆರೋಪಿ ಬನ್ನೇರುಘಟ್ಟ ರಸ್ತೆಯ ಇಂಡಿಯನ್ ಕ್ರಿಶ್ಚಿಯನ್ ಸೆರಮನಿ ಬಳಿ ಇದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ದಾಳಿ ನಡೆಸಿದ್ದಾರೆ. ಅಲ್ಲದೆ ಆತನನ್ನು ಸರೆಂಡರ್ ಆಗುವಂತೆ ಹೇಳಿದ್ದಾರೆ. ಆದರೆ, ಪೊಲೀಸರ ಮಾತು ಕೇಳದ ಆರೋಪಿ ಅವರ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಫೈರ್​ ಮಾಡಿ ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ರೌಡಿ ಲಕ್ಷ್ಮಣ ಕೊಲೆ ಪ್ರಕರಣ: ಆರು ಆರೋಪಿಗಳ ಬಂಧನ, ಮಾ. 21ರವರೆಗೆ ಪೊಲೀಸ್​ ವಶಕ್ಕೆ

ಅಶೋಕ ನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಶಶಿಧರ್​ ಆರೋಪಿ ಕಾಲಿಗೆ ಫೈರ್ ಮಾಡಿದ್ದು, ನಂತರ ಹೆಚ್ಚುವರಿ ಚಿಕಿತ್ಸೆಗಾಗಿ ಆರೋಪಿ ವೊನೋದನನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಿಮ್ಮ ನೆಚ್ಚಿನ ನ್ಯೂಸ್​18 ಕನ್ನಡ ಸುದ್ದಿಗಳಿಗಾಗಿ ಶೇರ್​ಚಾಟ್ ಫಾಲೋ ಮಾಡಿ

First published:May 18, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...