ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ನಿಧನ; ಸಿಎಂ ಸೇರಿದಂತೆ ಅನೇಕ ಗಣ್ಯರಿಂದ ಸಂತಾಪ

ಕನ್ನಡ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ. ಚಿಮೂ ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಶ್ರಮಿಸಿದ್ದರು- ಎಚ್​.ಡಿ. ಕುಮಾರಸ್ವಾಮಿ

news18-kannada
Updated:January 11, 2020, 8:53 AM IST
ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ನಿಧನ; ಸಿಎಂ ಸೇರಿದಂತೆ ಅನೇಕ ಗಣ್ಯರಿಂದ ಸಂತಾಪ
ಚಿದಾನಂದಮೂರ್ತಿ
  • Share this:
ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ ಇಂದು ಮುಂಜಾನೆ ನಿಧನರಾಗಿದ್ದಾರೆ. ಹಿರಿಯ ಸಾಹಿತಿ ಚಿಮೂ ನಿಧನಕ್ಕೆ ಸಿಎಂ ಬಿ.ಎಸ್​. ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಸಂತಾಪ:

ಸಿಎಂ ಬಿ.ಎಸ್​.ಯಡಿಯೂರಪ್ಪ ಡಾ.ಎಂ.ಚಿದಾನಂದಮೂರ್ತಿಯವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು ಎಂದು ದುಃಖಿಸಿದ್ದಾರೆ.ಸಚಿವ ವಿ.ಸೋಮಣ್ಣ ಚಿಮೂ ಅವರ ಅಂತಿಮ ದರ್ಶನ ಪಡೆದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಸಂಶೋಧಕರು ರಾಜ್ಯದ ಕನ್ನಡಿಗರ ಆರಾಧ್ಯ ದೈವವಾಗಿದ್ದರು.  ರಾಜ್ಯದ ಎಲ್ಲಾ ಕಡೆಗಳಲ್ಲಿ ಸಂಶೋಧನೆ ಮಾಡಿದ್ದರು. ತಮಗೆ ಸರಿ ಅನ್ನಿಸದ್ದನ್ನು ಮುಲಾಜಿಲ್ಲದೆ ಚಾಟೀ ಬೀಸುತ್ತಿದ್ದರು. ಕನ್ನಡದ ಅಭಿವೃದ್ಧಿಗೆ ಹೋರಾಟ ಮಾಡಿಕೊಂಡು ಬಂದಿದ್ದರು. ಅವರ ಅಗಲಿಕೆ ನಮಗರ ಭರಿಸಲಾಗದ ದುಃಖವಾಗಿದೆ. ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಹೀಗಾಗಿ ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಮಾಡಿಕೊಡುವಂತೆ ಸಿಎಂಗೆ ಮನವಿ ಮಾಡುತ್ತೇವೆ. ಅವರ ಕುಟುಂಬದ ನಿರ್ಧಾರದಂತೆ ನಾವು ವ್ಯವಸ್ಥೆ ಕಲ್ಪಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ," ಎಂದು ಹೇಳಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ:

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಡಾ. ಚಿದಾನಂದಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್​ ಮಾಡಿರುವ ಎಚ್​ಡಿಕೆ, ಕನ್ನಡ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ. ಚಿಮೂ ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಶ್ರಮಿಸಿದ್ದರು ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.ಸಾಹಿತಿ ಚಿದಾನಂದಮೂರ್ತಿ ನಿಧನಕ್ಕೆ ಸಚಿವ ಸುರೇಶ್​ಕುಮಾರ್ ಸಂತಾಪ ಸೂಚಿಸಿದ್ದಾರೆ. ಚಿಮೂ ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಹಂಪಿಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದರು. ಕನ್ನಡಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟಿದ್ದರು.  ಚಿದಾನಂದಮೂರ್ತಿ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.

Published by: Latha CG
First published: January 11, 2020, 8:51 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading