ಭಾರತ್ ಬಂದ್​ಗೆ ಅಂಗನವಾಡಿ ಕಾರ್ಯಕರ್ತೆ ಸಾವು ; ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿ ಬಂದ್​​ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ ಎನ್ನುವ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

G Hareeshkumar | news18
Updated:January 8, 2019, 5:23 PM IST
ಭಾರತ್ ಬಂದ್​ಗೆ ಅಂಗನವಾಡಿ ಕಾರ್ಯಕರ್ತೆ ಸಾವು ; ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿ ಬಂದ್​​ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ ಎನ್ನುವ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
G Hareeshkumar | news18
Updated: January 8, 2019, 5:23 PM IST
ಬೆಂಗಳೂರು (ಜ.08 ) : ಮೋಟಾರು ವಾಹನ ತಿದ್ದುಪಡಿ ಮಸೂದೆ -2017 ಹಿಂಪಡೆಯಲು, ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ಕಾರ್ಮಿಕ ಸಂಘಟನೆಗಳು ಇಂದು ರಾಷ್ಟ್ರವ್ಯಾಪಿ ಬಂದ್​​ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿ ಬಂದ್​​ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ ಎನ್ನುವ  ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಉಳಿದಂತೆ ರಾಜ್ಯಾದ್ಯಂತ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ ಎನ್ನಲಾಗಿದೆ.

ಇದನ್ನೂ ಓದಿ : ಸೋತವರಿಗಾಗಿ ನಿಗಮ ಮಂಡಳಿ ಸ್ಥಾನ ತ್ಯಾಗಕ್ಕೆ ಮುಂದಾಗಿ; ಜೆಡಿಎಸ್​ ಶಾಸಕರಿಗೆ ದೇವೇಗೌಡರ ಮನವಿ

ಬೆಂಗಳೂರು ನಗರದಲ್ಲಿ ಕೆಎಸ್ಆರ್'ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿದ್ದರೆ, ಕಡಿಮೆ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್ ಸಂಚಾರ ನಡೆಸುತ್ತಿವೆ. ಕೆಲವೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿರುವುದಾಗಿ ವರದಿಗಳಾಗಿವೆ.

ಪೀಣ್ಯದಿಂದ ಮೆಜೆಸ್ಟಿಕ್'ಗೆ ಬರುತ್ತಿದ್ದ ಬಸ್'ಗೆ ಬೈಕ್ ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಬಸ್ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸುವಂತಾಗಿದೆ.

ಇನ್ನು ಕೊಡಗು, ಮಂಗಳೂರು, ಕೋಲಾರ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಬೆಳಗಾವಿ, ರಾಮನಗರ, ಶಿವಮೊಗ್ಗ, ಹುಬ್ಬಳ್ಳಿ, ಬಳ್ಳಾರಿ, ಕಲಬುರ್ಗಿ ಹಾಗೂ  ಹಾವೇರಿಯಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಸ್ ಗಳಿಲ್ಲದೆ ಜನರು ಪರದಾಡುವಂತರ ಪರಿಸ್ಥಿತಿ ಎದುರಾಗಿದೆ.  ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಸಿಪಿಎಂ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆಗಳು ನಡೆದಿವೆ. ಇದಲ್ಲದೆ,  ಕೇರಳ ರಾಜ್ಯದಲ್ಲಿ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
Loading...

First published:January 8, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ