ಎಷ್ಟು ಮಂದಿಗೆ ಡಿಸಿಎಂ ಹುದ್ದೆ ಎಂಬುದು ಇಂದು ಗೊತ್ತಾಗಲಿದೆ; ಸಿಎಂ ಬಿ.ಎಸ್ ಯಡಿಯೂರಪ್ಪ
ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಪ್ರಬಲ ಸಮುದಾಯದ ಶಾಸಕರೇ ಆರೇಳು ಮಂದಿ ಇದ್ದಾರೆ. ಇವರೆಲ್ಲಾ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.
news18 Updated:August 26, 2019, 9:43 AM IST

ಬಿಎಸ್ ಯಡಿಯೂರಪ್ಪ
- News18
- Last Updated: August 26, 2019, 9:43 AM IST
ಬೆಂಗಳೂರು(ಆಗಸ್ಟ್.25): ಇತ್ತೀಚೆಗೆ ಪ್ರಮಾಣ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಖಾತೆ ಹಂಚುವ ಪ್ರಕ್ರಿಯೆ ಸೋಮವಾರ ಮುಗಿಯಲಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಹಾಗೆಯೇ ಎಷ್ಟು ಮಂದಿಗೆ ಡಿಸಿಎಂ ನೀಡಬೇಕೆಂದು ಇಂದು ಗೊತ್ತಾಗಲಿದೆ. ಸೋಮವಾರ ಸಂಜೆ 4 ಗಂಟೆ ವೇಳೆ ಸಚಿವ ಸಂಪುಟ ಸಭೆ ನಡೆಯಲಿದೆ. ಹೈಕಮಾಂಡ್ ಸೂಚನೆ ಮೇರೆಗೆ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದೇವೆ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಶಾಸಕ ಲಕ್ಷ್ಮಣ ಸವದಿ ಬಗ್ಗೆ ಅಸಮಾಧಾನ ಇರುವುದು ನಿಜ. ನಮ್ಮ ಇತಿಮಿತಿಯೊಳಗೆ ಸಚಿವ ಸಂಪುಟ ವಿಸ್ತರಿಸಿದ್ದೇವೆ. ಕೆಲವು ಶಾಸಕರು ಸವದಿ ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ಧಾರೆ. ಹೈಕಮಾಂಡ್ ಆದೇಶದಂತೆ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಅಂತೆಯೇ ಮತ್ತೊಬ್ಬ ಬೆಳಗಾವಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿ ಯಾವುದೇ ಆಂತರಿಕ ಸಮಸ್ಯೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶವನ್ನು ಪಾಲಿಸೋದು ನಮ್ಮ ಕೆಲಸ. ಕಾಂಗ್ರೆಸ್ ಮತ್ತು ಜೆಡಿಎಸ್ನಲ್ಲಿ ಸಮಸ್ಯೆಯಿದೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಯಾರಿಗೆ ಸಚಿವ ಸ್ಥಾನ ಸಿಗುವುದಿಲ್ಲವೋ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದರು.ಇದನ್ನೂ ಓದಿ: ಭೀಕರ ಪ್ರವಾಹ: ಬೆಳಗಾವಿಗೆ ಕೇಂದ್ರ ಅಧ್ಯಯನ ತಂಡ ಭೇಟಿ; ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ
ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಪ್ರಬಲ ಸಮುದಾಯದ ಶಾಸಕರೇ ಆರೇಳು ಮಂದಿ ಇದ್ದಾರೆ. ಇವರೆಲ್ಲಾ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಹೀಗಾಗಿ ಮೂರ್ನಾಲ್ಕು ಡಿಸಿಎಂ ಸ್ಥಾನ ಸೃಷ್ಟಿಸಿಲು ಬಿಎಸ್ವೈ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ಆದರೆ, ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯದಲ್ಲಿಯೂ ಡಿಸಿಎಂ ಸ್ಥಾನ ನೀಡಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಏಕೆ ಎಂದು ರಾಷ್ಟ್ರೀಯಾಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ. ಹೀಗಾಗಿ ಬಿಎಸ್ವೈ ಸಂಕಷ್ಟಕ್ಕೆ ಸಿಲುಕಿದ್ದು, ಸೋಮವಾರ ಖಾತೆ ಹಂಚಿಕೆ ಮೂಲಕ ಎಲ್ಲ ಗೊಂದಲಕ್ಕೆ ತೆರೆ ಎಳೆಯುವ ನಿರೀಕ್ಷೆಯಿದೆ.
ಇದೇ ವೇಳೆ ವಿಶ್ವ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆದ್ದ ಪಿ.ವಿ ಸಿಂಧೂ ಅವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದರು.
ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ -----------------

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ
Loading...
Loading...