ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಸಾಧ್ಯತೆ?; ಕುತೂಹಲ ಮೂಡಿಸಿದೆ ಕೇಂದ್ರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ

ರಾಜ್ಯಪಾಲರು ಶುಕ್ರವಾರ ಕೇಂದ್ರಕ್ಕೆ ನೀಡಿರುವ ವದರಿಯ ಅನ್ವಯ ಶನಿವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯ ರಾಜಕೀಯ ವಿದ್ಯಾಮಾನಗಳು, ರಾಜ್ಯಪಾಲರ ಶಿಫಾರಸು ಹಾಗೂ ರಾಜ್ಯದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರುವ ಕುರಿತು ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

MAshok Kumar | news18
Updated:July 19, 2019, 6:12 PM IST
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಸಾಧ್ಯತೆ?; ಕುತೂಹಲ ಮೂಡಿಸಿದೆ ಕೇಂದ್ರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ
ಸಾಂದರ್ಭಿಕ ಚಿತ್ರ.
MAshok Kumar | news18
Updated: July 19, 2019, 6:12 PM IST
ನವ ದೆಹಲಿ (ಜುಲೈ.19); ರಾಜ್ಯ ರಾಜಕೀಯ ಪ್ರಸ್ತುತ ನಾಟಕೀಯ ತಿರುವು ಪಡೆಯುತ್ತಿದ್ದು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾಳೆ ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯಲಿರುವ ಕೇಂದ್ರ ರಾಜಕೀಯ ವ್ಯವಹಾರಗಳ ಸಂಫುಟ ಸಮಿತಿ ಸಭೆ ಕುತೂಹಲ ಮೂಡಿಸಿದೆ. ಅಲ್ಲದೆ ಈ ಸಭೆಯಲ್ಲಿ ರಾಜ್ಯದ ಮೇಲೆ ರಾಷ್ಟ್ರಪತಿ ಅಳ್ವಿಕೆ ಹೇರುವ ಕುರಿತ ತೀರ್ಮಾನ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆಗಳೂ ಕಾಣಿಸುತ್ತಿವೆ.

ಗುರುವಾರ ಸಿಎಂ ಕುಮಾರಸ್ವಾಮಿ ಅವರಿಗೆ ಆದೇಶಿಸಿದ್ದ ರಾಜ್ಯಪಾಲ ವಜುಭಾಯ್ ವಾಲಾ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಬಹುಮತ ಸಾಬೀತುಪಡಿಸಲು ಸೂಚಿಸಿದ್ದರು. ಆದರೆ, ಮೈತ್ರಿ ಸರ್ಕಾರ ರಾಜ್ಯಪಾಲರ ಈ ಆದೇಶವನ್ನು ಉಲ್ಲಂಘಿಸಿದೆ. ಹಾಗಾಗಿ ರಾಜ್ಯಪಾಲ ವಜುಭಾಯ್ ವಾಲಾ ಈ ಕುರಿತು ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಸಂಜೆ 6ಕ್ಕೆ ಬಹುಮತ ಸಾಬೀತು ಬಹುತೇಕ ಡೌಟು?; ಅನುಮಾನ ಮೂಡಿಸಿದೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್!

ಈ ವರದಿಯಲ್ಲಿ”ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ ಎಂಬ ವಿಚಾರ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೀಗಾಗಿ, ಬಹುಮತಯಾಚನೆಗೆ ಆದೇಶಿಸಿದ್ದರೂ ಸರ್ಕಾರ ಅದನ್ನು ಉಲ್ಲಂಘಿಸಿದೆ. ಇದರಿಂದ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಿದ್ದು, ಕೇಂದ್ರ ಮಧ್ಯಪ್ರವೇಶಿಸಬೇಕು” ಎಂದು ವರದಿ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯಪಾಲರ ಈ ವರದಿಯನ್ನು ಆಧರಿಸಿ ಶನಿವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ಹಾಗೂ ರಾಜ್ಯಪಾಲರ ಶಿಫಾರಸುಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ ರಾಜ್ಯದ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರುವ ಕುರಿತು ಸಹ ಈ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಸರ್ಕಾರಕ್ಕೆ ಎರಡನೇ ಬಾರಿ ಡೆಡ್​ಲೈನ್ ಕೊಟ್ಟ ಗವರ್ನರ್; ಸಂಜೆ 6 ಗಂಟೆಯೊಳಗೆ ಆಗುತ್ತಾ ವಿಶ್ವಾಸ ಮತಯಾಚನೆ?

First published:July 19, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...