news18-kannada Updated:February 2, 2021, 10:18 PM IST
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ನವದೆಹಲಿ (ಫೆ. 2): ಕೇರಳ, ಅಸ್ಸಾಂ ಮತ್ತು ತಮಿಳುನಾಡು ವಿಧಾಸಭಾ ಚುನಾವಣೆ ಮೇಲೆ ಬಿಜೆಪಿ ಕಣ್ಣಿಟ್ಟಿದೆ. ಈಗಾಗಲೇ ತಮಿಳುನಾಡು ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಪಕ್ಷ ಮೂರು ರಾಜ್ಯಗಳಿಗೆ ಚುನಾವಣಾ ಉಸ್ತುವಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಕೇರಳ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಇದರ ಜೊತೆಗೆ ಡಿಸಿಎಂ ಅಶ್ವತ್ಥ ನಾರಾಯಣ ಅವರನ್ನು ಸಹ ಉಸ್ತುವಾರಿಯಾಗಿ ನೇಮಕ ಮಾಡಿದೆ. ಇದರ ಜೊತೆಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಥೋಮರ್ ಅವರನ್ನು ಅಸ್ಸಾಂ ಚುನಾವಣಾ ಉಸ್ತುವಾರಿಯಾಗಿ, ಜಿ ಕಿಶನ್ ರೆಡ್ಡಿ ಅವರನ್ನು ತಮಿಳುನಾಡು ಉಸ್ತುವಾರಿಯಾಗಿ ನೇಮಕ ಮಾಡಿ ಪಕ್ಷ ಪ್ರಕಟಣೆ ಹೊರಡಿಸಿದೆ.
ಪುದುಚೇರಿ ವಿಧಾನಸಭಾ ಚುನಾವಣಾ ಉಸ್ತುವಾರಿಯಾಗಿ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಿಸಿದೆ. ಅಸ್ಸಾಂನ ಸಹ ಉಸ್ತುವಾರಿಯಾಗಿ ವಿಕೆ ಸಿಂಗ್ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕೇರಳ , ಪುದುಚೇರಿಯಲ್ಲಿ ಇದೇ ಏಪ್ರಿಲ್-ಮೇ ನಲ್ಲಿ ವಿಧಾನಸಭಾ ಚುನಾವಣಾ ನಡೆಯುವ ಸಾಧ್ಯತೆ ಇದೆ. ಈ ಹಿನ್ನಲೆ ಬಿಜೆಪಿ ಸಿದ್ಧತೆ ನಡೆಸಿದೆ.
Published by:
Seema R
First published:
February 2, 2021, 10:18 PM IST