Praveen Nettaru: ರಾಜೀನಾಮೆ ನೀಡುವ ಬಿಜೆಪಿ ಪದಾಧಿಕಾರಿಗಳಿಗೆ ಅಭಿನಂದನೆ; ಬಿಜೆಪಿ ವಿರುದ್ಧ ಮುತಾಲಿಕ್ ಕಿಡಿ

ರಾಜ್ಯದಲ್ಲಿ PFI ಹಾಗೂ SDPI ಸಂಪೂರ್ಣ ಬ್ಯಾನ್ ಮಾಡಬೇಕು. ಈ ಹಿನ್ನೆಲೆಯಲ್ಲಿ ಆಗಸ್ಟ್ 5 ರಂದು ಬ್ರಹತ್ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯದಾದ್ಯಂತ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ.

ಪ್ರಮೋದ್ ಮುತಾಲಿಕ್

ಪ್ರಮೋದ್ ಮುತಾಲಿಕ್

  • Share this:
ಹುಬ್ಬಳ್ಳಿ – ಬಿಜೆಪಿ (BJP) ಅಧಿಕಾರ ನಡೆಸೋಕೆ ನಾಲಾಯಕ್ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಯನ್ನು ಖಂಡಿಸಿದ್ದಾರೆ. ಶುಕ್ರವಾರ ನಾನು ಅವರ ಮನೆಗೆ ಭೇಟಿ ನೀಡುತ್ತೇನೆ. ಈ ಘಟನೆಯಿಂದಾಗಿ ಬಿಜೆಪಿ ಕಾರ್ಯಕರ್ತರು (BJP Activist) ರಾಜೀನಾಮೆ ನೀಡುತ್ತಿದ್ದಾರೆ. ರಾಜೀನಾಮೆ ನೀಡುವ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಅಧಿಕಾರ ದಾಹ ಇರುವಂತಹ ಜನಪ್ರತಿನಿಧಿಗಳಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಮಾನ ಮರ್ಯಾದೆ ಇದ್ದಿದ್ರೆ ಪ್ರವೀಣ್ ಹತ್ಯೆಗೆ ನ್ಯಾಯ ಕೊಡಿಸುತ್ತಿದ್ದರು. ಅದನ್ನ ಬಿಟ್ಟು ಅಧಿಕಾರದ ದಾಹದಿಂದ ಜನಪ್ರತಿನಿಧಿಗಳು ಸುಮ್ಮನೆ ಕುಳಿತಿದ್ದಾರೆ ಎಂದು ಮುತಾಲಿಕ್ ಆಕ್ರೋಶ ಹೊರ ಹಾಕಿದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸುರಕ್ಷತೆ ಅಷ್ಟೇ ಅಲ್ಲದೆ ಎಲ್ಲ ವಿಷಯಗಳಲ್ಲೂ ವಿಫಲವಾಗಿದೆ. ಬಿಜೆಪಿ ಅಧಿಕಾರ ನಡೆಸೋಕೆ ನಾಲಾಯಕ್ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಕ್ಷೇತ್ರದಲ್ಲಿಯೇ ಕೊಲೆ

ಈವರೆಗೂ ನಡೆದ ಘಟನೆಗಳಲ್ಲಿ ಯಾವುದೇ ಲಾಠಿ ಚಾರ್ಜ್ ಮಾಡಲಿಲ್ಲ.  ಪ್ರವೀಣ್ ಹತ್ಯೆ ವಿಚಾರದಲ್ಲಿ ಲಾಠಿ ಚಾರ್ಜ್ ಮಾಡ್ತೀರಾ ? ಬಿಜೆಪಿ ರಾಜ್ಯಾಧ್ಯಕ್ಷರ ಕ್ಷೇತ್ರದಲ್ಲೇ ಕೊಲೆ ಆಗಿದೆ. ಬಿಜೆಪಿ ರಾಜ್ಯಾಧ್ಯಕ್ಷರು ರಾಜೀನಾಮೆ ನೀಡಬೇಕು. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೇ ಇಲ್ಲ ಎಂದು ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

ಪ್ರಮೋದ್ ಮುತಾಲಿಕ್


ಇದನ್ನೂ ಓದಿ:  Priyank Kharge: ಜನೋತ್ಸವ ರದ್ದಾಗಿದ್ದು ಜನಾಕ್ರೋಶಕ್ಕೆ ಹೆದರಿ; ಗೃಹ ಸಚಿವರಿಗೆ ಪ್ರಿಯಾಂಕ್ ಖರ್ಗೆ ಚಾಲೆಂಜ್!

PFI ಹಾಗೂ SDPI ಸಂಪೂರ್ಣ ಬ್ಯಾನ್ ಆಗಬೇಕು

ಸರ್ಕಾರ ಜನರ ಆಕ್ರೋಶ ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಪ್ರವೀಣ್ ಕುಟುಂಬದ ನೋವನ್ನ ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ PFI ಹಾಗೂ SDPI ಸಂಪೂರ್ಣ ಬ್ಯಾನ್ ಮಾಡಬೇಕು. ಈ ಹಿನ್ನೆಲೆಯಲ್ಲಿ ಆಗಸ್ಟ್ 5 ರಂದು ಬ್ರಹತ್ ಪ್ರತಿಭಟನೆ ನಡೆಸಲಿದ್ದೇವೆ. ರಾಜ್ಯದಾದ್ಯಂತ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ.

ಶೂಟೌಟ್ ಮಾಡಿ ಇಲ್ಲವೇ ಗಲ್ಲಿಗೇರಿಸಿ

ರಾಜ್ಯದಲ್ಲಿ ಸಮಾಜ ಕಂಟಕರಿದ್ದಾರೆ. ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿವೆ. ಯಾಕೆ ಈ ಸಂಘಟನೆಗಳನ್ನ ಬ್ಯಾನ್ ಮಾಡುತ್ತಿಲ್ಲ ? ಇಡೀ ದೇಶದಲ್ಲಿ 23 ರಾಜ್ಯಗಳಲ್ಲಿ ಪಿಎಫ್ ಐ, ಎಸ್ ಡಿಪಿಐ ಕಾರ್ಯ ನಿರ್ವಹಿಸುತ್ತಿವೆ. ಈ ಸಂಘಟನೆಗಳನ್ನ ಬ್ಯಾನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರಲಿ. ಯಾಕೆ ಈ ಕಂಟಕ ಸಂಘಟನೆಗಳನ್ನ ಬ್ಯಾನ್ ಮಾಡುತ್ತಿಲ್ಲ..? ದುಷ್ಟರನ್ನ ಶೂಟೌಟ್ ಮಾಡಿ ಇಲ್ಲವೇ ಗಲ್ಲಿಗೇರಿಸಿ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಮುತಾಲಿಕ್ ಹರಿಹಾಯ್ದರು.

ನಾಟಕ ಆಡೋದು ಬೇಡ

ಅಧಿಕಾರ ಇದ್ದಾಗ ಒಂದು ರೀತಿ ಇಲ್ಲದಿದ್ದಾಗ ಮತ್ತೊಂದು ರೀತಿ ನಾಟಕವಾಡೋದು ಬೇಡ. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮ‌ಕೈಗೊಳ್ಳಬೇಕು. ಆದರೆ ಕಠಿಣ ಕ್ರಮ ಎನ್ನುವ ಶಬ್ಧವನ್ನು ರೆಕಾರ್ಡ್ ಮಾಡಿಕೊಂಡು ಇಟ್ಟುಕೊಂಡು ಬಿಡೋ ಪರಿಸ್ಥಿತಿ ಬಿಜೆಪಿ ಸರ್ಕಾರದಲ್ಲಿದೆ. ಮುಂದೆ ಬೇರೆ ಕಾರ್ಯಕರ್ತ ಹತ್ಯೆಯಾದಾಗ ಅದನ್ನೇ ಪ್ಲೇ ಮಾಡಿ.

ಇದನ್ನೂ ಓದಿ:  Ashwath Narayan: ಮೃತ ಪ್ರವೀಣ್ ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು ನೀಡಿದ ಅಶ್ವತ್ಥ ನಾರಾಯಣ

ಇಂದಿನದು ಜನೋತ್ಸವ ಅಲ್ಲಾ ಮರಣೋತ್ಸವ. ಕಾರ್ಯಕ್ರಮ ರದ್ದು ಮಾಡಿ ಒಳ್ಳೆಯದು ಮಾಡಿದ್ದೀರಿ. ಇಲ್ಲಂದ್ರೆ ಇಂದಿನ ವೇದಿಕೆ ಮೇಲೆ ಚಪ್ಪಲಿಗಳ ರಾಶಿ ನೋಡುತ್ತಿದ್ದೀರಿ ಎಂದು ಮುಖ್ಯಮಂತ್ರಿಗಳ ವಿರುದ್ಧ ಪ್ರಮೋದ್ ಮುತಾಲಿಕ್ ಹರಿಹಾಯ್ದರು.

ಟೌನ್ ಹಾಲ್ ಮುಂಭಾಗ ಪ್ರತಿಭಟನೆ

ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ನಡೆಸಿದರು. ಟೌನ್ ಹಾಲ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
Published by:Mahmadrafik K
First published: