Dakshina Kannada ಪ್ರವೇಶಕ್ಕೆ ಮುತಾಲಿಕ್​ಗೆ ನಿರ್ಬಂಧ: ಆರಗ ಜ್ಞಾನೇಂದ್ರರನ್ನು ಕಿತ್ತು ಹಾಕಿ; ಸಿದ್ದು ಆಕ್ರೋಶ

ಮುತಾಲಿಕ್ ಹಿಂದಿನ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆ  ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿರುವುದನ್ನು ಪರಿಗಣಿಸಿ ಜಿಲ್ಲೆ ಪ್ರವೇಶ ನಿಷೇಧಿಸಬೇಕು ಎಂದು ಜಿಲ್ಲೆಯ ಪೊಲೀಸ್ ಅಧೀಕ್ಷಕರು ಮನವಿ ಮಾಡಿಕೊಂಡಿದ್ರು.

ಪ್ರಮೋದ್ ಮುತಾಲಿಕ್

ಪ್ರಮೋದ್ ಮುತಾಲಿಕ್

  • Share this:
ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (Srirama sena Founder Pramod Muthalik) ಅವರಿಗೆ ದಕ್ಷಿಣ ಕನ್ನಡ ಜಿಲ್ಲೆ (Dakshina Kannada) ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹಾಕಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. (DC Dr.Rajendra KV) ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಿಗೆ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳು ಹಾಗೂ ಪ್ರಮೋದ್ ಮುತಾಲಿಕ್ ಹಿಂದಿನ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆ  ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಿರುವುದನ್ನು ಪರಿಗಣಿಸಿ ಜಿಲ್ಲೆ ಪ್ರವೇಶ ನಿಷೇಧಿಸಬೇಕು ಎಂದು ಜಿಲ್ಲೆಯ ಪೊಲೀಸ್ ಅಧೀಕ್ಷಕರು ಮನವಿ ಮಾಡಿಕೊಂಡಿದ್ರು. ಮನವಿ ಪುರಸ್ಕರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಜಿಲ್ಲೆಯೊಳಗೆ ಕಳೆದ 10 ದಿನಗಳಲ್ಲಿ ಮೂರು ಕೊಲೆಗಳು ನಡೆದಿವೆ. ನಿನ್ನೆ ಮಂಗಳೂರಿನ (Mangaluru) ಸುರತ್ಕಲ್ ಬಳಿ ಅಪರಿಚಿತ ತಂಡ ಫಾಜೀಲ್ ಎಂಬಾತನ ಮೇಲೆ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಫಾಜೀಲ್ ಕೊಲೆಯ ಬೆನ್ನಲ್ಲೇ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಶುಕ್ರವಾರದ ನಮಾಜ್ ಬಳಿಕ ಫಾಜಿಲ್ ಅಂತ್ಯಕ್ರಿಯೆ ನಡೆಯಲಿದೆ.

ಇದು ಕೊಲೆಗಡುಕ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು  ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.

ಇದನ್ನೂ ಓದಿ:  Praveen Murder: ಹೇಡಿಗಳ ರೀತಿ ಒಬ್ಬನೇ ಇದ್ದಾಗ ಪ್ರವೀಣ್ ಹತ್ಯೆ, ಮುಸ್ಲಿಂ ಹಿರಿಯರು ಗೂಂಡಾಗಳಿಗೆ ತಿಳಿಹೇಳಿ ಎಂದ ಈಶ್ವರಪ್ಪ

ಆರಗ ಜ್ಞಾನೇಂದ್ರರನ್ನು ಕಿತ್ತು ಹಾಕಿ

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ.  ಮುಖ್ಯಮಂತ್ರಿಗಳು ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು.

Pramod Muthalik entry in Dakshina Kannada district banned mrq
ಪ್ರವೀಣ್ ನೆಟ್ಟಾರು


ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ.

ಅಮಾಯಕರಿಗೆ ಕಿರುಕುಳ ನೀಡುವುದು ಸಲ್ಲದು

ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು ಎಂದು ಆಗ್ರಹಿಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಘಟನೆ ಮಾಸುವ ಮುನ್ನವೇ ಸುರತ್ಕಲ್‌ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿದೆ.

ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ

ಕರಾವಳಿ ಭಾಗದಲ್ಲಿ ಒಂದೇ ವಾರದಲ್ಲಿ ನಡೆದ ಮೂರನೇ ಹತ್ಯೆಯಿದು.‌ ರಾಜ್ಯದಲ್ಲಿ ಸರ್ಕಾರ ಎನ್ನುವುದು ಸತ್ತಿದೆಯೆ? ಬದುಕಿದೆಯೆ? ಮುಖ್ಯಮಂತ್ರಿಗಳು ಮಂಗಳೂರು ಪ್ರವಾಸದಲ್ಲಿದ್ದಾಗಲೇ ಫಾಜಿಲ್ ಹತ್ಯೆ ನಡೆದಿರುವುದು ವ್ಯವಸ್ಥೆಯ ಅಣಕ.

Pramod Muthalik entry in Dakshina Kannada district banned mrq
ಕೊಲೆಯಾದ ಫಾಜಿಲ್


ಈ ಸರ್ಕಾರದಲ್ಲಿ ಇತ್ತ ಹಿಂದೂಗಳಿಗೂ ರಕ್ಷಣೆಯಿಲ್ಲ,ಅತ್ತ ಮುಸಲ್ಮಾನರಿಗೂ ರಕ್ಷಣೆಯಿಲ್ಲ. ಎಲ್ಲಿ, ಯಾವಾಗ,ಯಾರ ಕೊಲೆಯಾಗುತ್ತೋ ಎಂಬ ಭಯ ಜನರಲ್ಲಿ‌‌ ಮನೆ ಮಾಡಿದೆ. ಇಂತಹದ್ದೊಂದು‌‌ ವಿಷಮಕಾರಿ‌ ಸ್ಥಿತಿಯನ್ನು ರಾಜ್ಯದ ಜನ ಹಿಂದೆಂದೂ ಕಂಡಿರಲಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಈ ಅನಾಹುತಕಾರಿ ಘಟನೆಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆ.

ಇದನ್ನೂ ಓದಿ:  Murder: ಮಂಗಳೂರಲ್ಲಿ ಮತ್ತೊಂದು ಮರ್ಡರ್​; ವ್ಯಕ್ತಿಯ ಬರ್ಬರ ಹತ್ಯೆ

ಹತ್ಯೆಗಳ ಸತ್ಯಾಸತ್ಯೆತೆ ಬಗ್ಗೆ ಸರ್ಕಾರ ಪ್ರಾಮಾಣಿಕ ತ್ವರಿತ, ತನಿಖೆ ನಡೆಸಿ ಪತ್ತೆ ಹಚ್ಚಬೇಕು.ತಪ್ಪಿತಸ್ಥರನ್ನು ಹಿಡಿದಾಕಬೇಕು, ಶಾಂತಿ ಸ್ಥಾಪನೆಗೆ ಎಲ್ಲರ ಜೊತೆ ಮಾತನಾಡಬೇಕು, ಪ್ರಚೋದನೆಗೆ ಅವಕಾಶ ಕೊಡದಂತೆ ನೋಡಿಕೊಳ್ಳಬೇಕು. ಇಲ್ಲದೇ ಹೋದರೆ ಭಾವೈಕ್ಯತೆಯ‌ ನಾಡಾಗಿದ್ದ ಕರ್ನಾಟಕವನ್ನು ಕೊಲೆಗಡುಕರ ರಾಜ್ಯ ಮಾಡಿದ ಕುಖ್ಯಾತಿ ಈ ಸರ್ಕಾರದ್ದು ಎಂದು ಗಂಡೂರಾವ್ ಆತಂಕ ವ್ಯಕ್ತಪಡಿಸಿದ್ದಾರೆ.
Published by:Mahmadrafik K
First published: