ಚೀನಾ ಗಡಿ ದಾಟಲು ಪ್ರಯತ್ನಿಸಿದರೆ ನಮ್ಮ ಸೈನಿಕರು ತಕ್ಕ ಉತ್ತರ ಕೊಡುತ್ತಾರೆ; ಪ್ರಮೋದ್ ಮುತಾಲಿಕ್

ಚೀನಾದ ಉದ್ಧಟತನದಿಂದ ನಮ್ಮ ದೇಶದ  20 ಯೋಧರು ಹುತಾತ್ಮರಾಗಿದ್ದಾರೆ. ಆದರೆ, 20ಕ್ಕೆ ಡಬಲ್ 43 ಜನರನ್ನು ಹೊಡೆದು ಚೀನಾಗೆ ನಮ್ಮ ಯೋಧರು ಉತ್ತರ ಕೊಟ್ಟಿದ್ದಾರೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಪ್ರಮೋದ್ ಮುತಾಲಿಕ್.

ಪ್ರಮೋದ್ ಮುತಾಲಿಕ್.

  • Share this:
ಧಾರವಾಡ (ಜೂ. 18): ಚೀನಾ ಏನಾದರೂ ಉದ್ಧಟತನ ತೋರಿಸಿದರೆ ಭಾರತದ ಸೈನಿಕರು ಬಿಡುವುದಿಲ್ಲ ಎಂದು  ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ಧಾರವಾಡದ ಕಾರ್ಗಿಲ್ ಸ್ಥೂಪದ ಬಳಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ  ಅವರು ಮಾತನಾಡಿದರು.

ಚೀನಾದ ಉದ್ಧಟತನದಿಂದ ನಮ್ಮ ದೇಶದ  20 ಯೋಧರು ಹುತಾತ್ಮರಾಗಿದ್ದಾರೆ. ಆದರೆ, 20ಕ್ಕೆ ಡಬಲ್ 43 ಜನರನ್ನು ಹೊಡೆದು ಚೀನಾಗೆ ನಮ್ಮ ಯೋಧರು ಉತ್ತರ ಕೊಟ್ಟಿದ್ದಾರೆ. ಇದು ಕಾಂಗ್ರೆಸ್, ನೆಹರು, ರಾಹುಲ್ ಸರ್ಕಾರ ಅಲ್ಲ, ನರೇಂದ್ರ ಮೋದಿಯ 56 ಇಂಚಿನ ಛಾತಿ ಇರುವ ಸರ್ಕಾರ. ಚೀನಾ ಗಡಿ ದಾಟಿ ಬರುವ ಪ್ರಯತ್ನ ಮಾಡಿದರೆ ನಮ್ಮ ಸೈನಿಕರು ತಕ್ಕ ಉತ್ತರ ಕೊಡುತ್ತಾರೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಇದನ್ನೂ ಓದಿ: 2nd PUC Exam: ಲಾಕ್​ಡೌನ್ ನಡುವೆಯೇ ಇಂದು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಭಾರತ ಸರ್ಕಾರ ಮತ್ತು ಸೇನೆ ಯುದ್ಧಕ್ಕೆ ಸನ್ನದ್ಧವಾಗಿದೆ ಎಂದು ಚೀನಾ ದೇಶಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ‌ ನೀಡಿದ್ದಾರೆ. ಸೋಮವಾರ ರಾತ್ರಿಯಿಂದ ಲಡಾಖ್​ನಲ್ಲಿರುವ ಗಾಲ್ವಾನ್ ಕಣಿವೆಯ ಬಳಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದರು. ನಾಲ್ವರ ಸ್ಥಿತಿ ಗಂಭೀರವಾಗಿದೆ.
First published: