ವಕೀಲ ಪ್ರಶಾಂತ್ ಭೂಷಣ್ ವಿರುದ್ಧ ಸುಪ್ರೀಂ ನಡೆ ಅತ್ಯಂತ ವಿಷಾಧಕರ; ಎಸ್‌.ಆರ್‌. ಹಿರೇಮಠ

ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿಯು ತುರ್ತು ಪರಿಸ್ಥಿತಿಯಲ್ಲಿನ ವರ್ತನೆಯಂತಿದೆ ಎಂಬ ಪ್ರಶಾಂತ ಭೂಷಣ್ ಹೇಳಿಕೆ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ರೋಶಗೊಂಡಿರುವುದು ದುರದೃಷ್ಟಕರ ಎಂದು ಎಸ್‌.ಆರ್‌. ಹಿರೇಮಠ ತಿಳಿಸಿದ್ದಾರೆ.

ಎಸ್‌.ಆರ್‌. ಹಿರೇಮಠ.

ಎಸ್‌.ಆರ್‌. ಹಿರೇಮಠ.

  • Share this:
ಹಾವೇರಿ (ಆಗಸ್ಟ್‌ 20); ಕೇವಲ ಎರಡು ಟ್ವೀಟ್‌ಗಳಿಗಾಗಿ ಪ್ರಸಿದ್ಧ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರನ್ನು ನ್ಯಾಯಾಲಯ ನಿಂದನೆ ಆರೋಪದಲ್ಲಿ ದೋಷಿ ಎಂದು ಸರ್ವೋಚ್ಚ ನ್ಯಾಯಾಲಯವು ಘೋಷಣೆ ಮಾಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು  ಸಾಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ವಿಷಾಧ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ ನ್ಯಾಯವಾದಿ ಪ್ರಶಾಂತ್‌ ಭೂಷಣ್ ಅವರನ್ನು ದೋಷಿ ಎಂದು ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ ಆದೇಶದ ವಿರುದ್ಧ ಇಂದು ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಸಮಿತಿ ಹಾಗೂ ಹಾನಗಲ್ ನ್ಯಾಯವಾದಿ ಸಂಘದಿಂದ ಹಾವೇರಿ ನಗರದ ಮೈಲಾರ ಮಹಾದೇವಪ್ಪ ವೃತ್ತದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿರುವ ಹೋರಾಟಗಾರ ಎಸ್.ಆರ್. ಹಿರೇಮಠ, "ಸರ್ವೋಚ್ಚ ನ್ಯಾಯಾಲಯದ ಸದರಿ ತಿರ್ಪು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ. ಪ್ರಶಾಂತ್ ಅವರು ಎರಡು ಟ್ವೀಟ್ ಮಾಡಿದ್ದು, ಈ ಟ್ವೀಟ್‌ಗಳು ಭಾರತೀಯ ಪ್ರಜಾಪ್ರಭುತ್ವದ ಮುಖ್ಯ ಸ್ತಂಬದ ಅಡಿಪಾಯಗಳನ್ನು ದುರ್ಬಲಗೊಳಿಸುವ ಪ್ರಯತ್ನ, ಹೀಗಾಗಿ ಈ ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ. ಆದರೆ, ಪ್ರಶಾಂತ್ ಭೂಷಣ್ ತುರ್ತು ಪರಿಸ್ಥಿತಿಗೆ ಸಮಾನವಾದ ಸ್ಥಿತಿಯನ್ನು ಸರ್ವೋಚ್ಚ ನ್ಯಾಯಾಲಯವು ತಂದಿರುವದು ಅಪಚಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

"ಪ್ರಸ್ತುತ ಸರ್ವೋಚ್ಚ ನ್ಯಾಯಾಲಯದ ಕಾರ್ಯವೈಖರಿಯು ತುರ್ತು ಪರಿಸ್ಥಿತಿಯಲ್ಲಿನ ವರ್ತನೆಯಂತಿದೆ ಎಂಬ ಪ್ರಶಾಂತ ಭೂಷಣ್ ಹೇಳಿಕೆ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ರೋಶಗೊಂಡಿರುವುದು ದುರದೃಷ್ಟಕರ. ಅವರ ಟ್ವಿಟ್ ಗಳನ್ನು ನಿರ್ಲಕ್ಷಿಸಬಹುದಿತ್ತು. ಅವರನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ ನೀಡುತ್ತಿರುವದರಿಂದ ನ್ಯಾಯಾಲಯವು ಗೌರವವನ್ನು ಕಳೆದುಕೊಳ್ಳುತ್ತಿದೆ .

ಇದನ್ನೂ ಓದಿ : ಡಿಜೆ ಹಳ್ಳಿ ಗಲಭೆಯಲ್ಲಿ ಎಸ್‌ಡಿಪಿಐ ವಿರುದ್ಧ ಸೂಕ್ತ ಸಾಕ್ಷ್ಯ ದೊರೆತರೆ ನಿಷೇಧ ಖಚಿತ; ಸಚಿವ ಮಾಧುಸ್ವಾಮಿ ಹೇಳಿಕೆ

ಹೀಗಾಗಿ ಸುಪ್ರೀಂ ಕೋರ್ಟ್ ಈ ಟ್ವಿಟ್‌ಗಳನ್ನು ನಿರ್ಲಕ್ಷಿಸಬೇಕು ಮತ್ತು ಪ್ರಶಾಂತ್ ಭೂಷಣ್ ಅವರನ್ನು ದೋಷಿ ಎಂದು ನೀಡಲಾಗಿರುವ ತೀರ್ಪನ್ನು ಹಿಂಪಡಿಯಬೇಕೆಂದು" ಎಸ್‌.ಆರ್‌. ಹಿರೇಮಠ ಒತ್ತಾಯಿಸಿದ್ದಾರೆ.

ಈ ಸಂಧರ್ಭದಲ್ಲಿ ಹಾನಗಲ್ ವಕೀಲರ ಸಂಘದ ಅಧ್ಯಕ್ಷ ಕೊತಂಬರಿ, ವಕೀಲರಾದ ವಿನಾಯಕ, ಬಿಸಿಯೂಟ ತಯಾರಕರ ಸಂಘದ ರಾಜ್ಯಾಧ್ಯಕ್ಷ ಮರಿಯಮ್ಮನವರು ಹಾಜರಿದ್ದರು.
Published by:MAshok Kumar
First published: