• Home
 • »
 • News
 • »
 • state
 • »
 • ಸಂಸದ ಪ್ರತಾಪ್ ಸಿಂಹ ಅವರ ವೈಯಕ್ತಿಕ ದಾಳಿಗೆ ತಲೆ ಕೆಡಿಸಿಕೊಳ್ಳಲ್ಲ, ನನ್ನ ಕೆಲಸ ನಾನು ಮಾಡುತ್ತಿದ್ದೇನೆ; ರೋಹಿಣಿ ಸಿಂಧೂರಿ

ಸಂಸದ ಪ್ರತಾಪ್ ಸಿಂಹ ಅವರ ವೈಯಕ್ತಿಕ ದಾಳಿಗೆ ತಲೆ ಕೆಡಿಸಿಕೊಳ್ಳಲ್ಲ, ನನ್ನ ಕೆಲಸ ನಾನು ಮಾಡುತ್ತಿದ್ದೇನೆ; ರೋಹಿಣಿ ಸಿಂಧೂರಿ

ಪ್ರತಾಪ್ ಸಿಂಹ-ರೋಹಿಣಿ ಸಿಂಧೂರಿ.

ಪ್ರತಾಪ್ ಸಿಂಹ-ರೋಹಿಣಿ ಸಿಂಧೂರಿ.

ಕೊರೋನಾ ಸಾಂಕ್ರಮಿಕವನ್ನು ನಮ್ಮನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಅತಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕು. ಆದರೆ, ಇಂತಹ ಸಂದರ್ಭದಲ್ಲಿಯೂ ನನ್ನ ಮೇಲೆ ಸುಳ್ಳುಗಳನ್ನು ಹೊರಿಸಲಾಗುತ್ತಿದೆ ಎಂದು ರೋಹಿಣಿ ಸಿಂಧೂರಿ ಆಕ್ರೋಶ ಹೊರಹಾಕಿದ್ದಾರೆ.

 • Share this:

  ಮೈಸೂರು (ಮೇ 31); ಸಂಸದ ಪ್ರತಾಪ್ ಸಿಂಹ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವೆ ಕಳೆದ ಹಲವು ದಿನಗಳಿಂದ ಮಾತಿನ ಚಕಮಕಿ ನಡೆಯುತ್ತಲೇ ಇದೆ. ಈ ಹಿಂದೆ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಎಡವಿದ್ದಾರೆ ಎಂದು ಕಿಡಿಕಾರಿದ್ದ ಸಂಸದ ಪ್ರತಾಪ್ ಸಿಂಹ, ಸ್ವಿಮಿಂಗ್​ ಫೂಲ್ ವಿಚಾರಕ್ಕೆ ಸಂಬಂಧಿಸಿ ದಂತೆ  ಭಾನುವಾರವೂ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಿಗೆ ಇಂದು ಸಂಸದ ಪ್ರತಾಪ್ ಸಿಂಹ ಟೀಕೆಗೆ ಪ್ರತ್ಯುತ್ತರ ನೀಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, "ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದು, ನಾನು ಮೈಸೂರಿಗೆ ಜಿಲ್ಲಾಧಿಕಾರಿಯಾಗಿ ಬಂದಾಗಿನಿಂದಲೂ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿ ದೆ. ನನ್ನ ಮೇಲೆ ಅನಗತ್ಯವಾಗಿ ವೈಯಕ್ತಿಕ ದಾಳಿ ಮಾಡಲಾಗುತ್ತಿದೆ ಎಂದು" ಆರೋಪಿಸಿದ್ದಾರೆ.


  ಪ್ರತಾಪ್‌ಸಿಂಹ ಅವರು ಜಿಲ್ಲಾಧಿಕಾರಿ ಸಿಂಧೂರಿ ಅವರು ಕರ್ತವ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಸಂಬಂಧಿಸಿದಂತೆ ಲೆಕ್ಕಪತ್ರ, ಅಂಕಿಅಂಶಗಳನ್ನು ಬಿಡುಗಡೆ ಮಾಡಿರುವ ಅವರು, ರಾಜ್ಯ ಸರ್ಕಾರದಿಂದ ವಿಪತ್ತು ಪರಿಹಾರ ನಿಧಿಯಡಿಯಲ್ಲಿ ಬಂದಿರುವ 41 ಕೋಟಿ ರೂ. ಅನುದಾನದಲ್ಲಿ ಯಾವುದಕ್ಕಾಗಿ ಎಷ್ಟೆಲ್ಲಾ ಖರ್ಚು ವೆಚ್ಚವಾಗಿದೆ ಎಂದು ವಿವರಿಸಿದ್ದಾರೆ.


  ರಾಜ್ಯದಲ್ಲಿಯೇ ಅತಿಹೆಚ್ಚು ಜನರಿಗೆ ಲಸಿಕೆ ಹಾಕಲಾಗಿರುವ ಜಿಲ್ಲೆ ಮೈಸೂರು. ಇತರ ಜಿಲ್ಲೆಗೆ ಹೋಲಿಸಿದರೆ ಮರಣ ಪ್ರಮಾಣ ಮೈಸೂರಿನಲ್ಲಿ ಕಡಿಮೆ ಇದೆ. ಟೆಸ್ಟಿಂಗ್‌ನಲ್ಲಿ ರಾಜ್ಯ ನೀಡಿದ ಗುರಿಯಲ್ಲಿ ಶೇ. 150ರ ಷ್ಟು ಪೂರೈಸಲಾಗಿದೆ. 2020 ರಲ್ಲೇ ಗಣಕೀಕೃತ ಬೆಡ್‌ ವ್ಯವಸ್ಥೆಯನ್ನು ಮೈಸೂರು ಜಿಲ್ಲೆ ಪ್ರಾರಂಭಿಸಿದ್ದರಿಂದ ಎರಡನೇ ಅಲೆ ಬಂದಾಗ ಸಾಕಷ್ಟು ನೆರವಾಯಿತು. ರಾಜ್ಯಕ್ಕೆ ಮಾದರಿಯಾಗುವಂತೆ ‘ಕೋವಿಡ್‌ ಮಿತ್ರ’ ತೆರೆಯಲಾಗಿದೆ. ಇದರಿಂದ 30 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸಲಹೆ ಸಹಕಾರ ದೊರೆತಿದೆ ಎಂದು ವಿವರಿಸಿದ್ದಾರೆ.


  ಇದನ್ನೂ ಓದಿ: Pratap Simha: ಮುಂದುವರೆದ ರೋಹಿಣಿ ಸಿಂಧೂರಿ-ಪ್ರತಾಪ್ ಸಿಂಹ ಜಟಾಪಟಿ; ನಿಮ್ಮಿಂದ ನಾವು ಪಾಠ ಕಲಿಯಬೇಕೆ? ಎಂದ ಸಂಸದ!


  ವಿಪತ್ತು ಪರಿಹಾರ ನಿಧಿಯಡಿ ಮಾಡಲಾಗಿರುವ ಎಲ್ಲಾ ಖರ್ಚುಗಳನ್ನು ಸಿಎಜಿ ಸರಿಯಾದ ಸಮಯದಲ್ಲಿ ಲೆಕ್ಕ ಪರಿಶೋಧನೆಗೆ ಒಳಪಡಿಸುತ್ತದೆ. ಎಲ್ಲವೂ ಸರಕಾರದ ಮಾರ್ಗಸೂಚಿಯಂತೆ ನಡೆದಿದೆ. ಆದರೆ, ನನ್ನ ವಿರುದ್ದ ಪುರಾವೆಗಳಿಲ್ಲ ಆರೋಪಗಳನ್ನು ಮಾಡಲಾಗುತ್ತಿದೆ. ಇದಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ನನ್ನ ಸಂಪೂರ್ಣ ಶಕ್ತಿಯನ್ನು ವ್ಯಯಿಸುತ್ತೇನೆ ಎಂದು ಹೇಳಿದ್ದಾರೆ.


  ಕೊರೋನಾ ಸಾಂಕ್ರಮಿಕವನ್ನು ನಮ್ಮನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ಅತಿ ಹೆಚ್ಚು ಶ್ರಮವಹಿಸಿ ಕೆಲಸ ಮಾಡಬೇಕು. ಆದರೆ, ಇಂತಹ ಸಂದರ್ಭದಲ್ಲಿಯೂ ನನ್ನ ಮೇಲೆ ಸುಳ್ಳುಗಳನ್ನು ಹೊರಿಸಲಾಗುತ್ತಿದೆ. ನನ್ನ ವಿರುದ್ದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.


  ಇದನ್ನೂ ಓದಿ: Corona 3rd Wave: ಮಹಾರಾಷ್ಟ್ರದ ಒಂದೇ ಜಿಲ್ಲೆಯ 8,000 ಮಕ್ಕಳಿಗೆ ಕೊರೋನಾ ಸೋಂಕು: ಮೂರನೇ ಅಲೆಗೆ ಸಿದ್ಧತೆ!


  ಇಂತಹ ಆರೋಪಗಳಿಂದಾಗಿ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸಿ, ಆತ್ಮವಿಶ್ವಾಸ ಕುಂದುವಂತೆ ಮಾಡಬಹುದು. ಜನರಿಗೆ ಜಿಲ್ಲಾಡಳಿತ ಭರವಸೆ ನೀಡುವ ಕೆಲಸ ಮಾಡಲಿದೆ. ಕೊರೊನಾ ನಿಯಂತ್ರಿಸಲು ಜಿಲ್ಲಾಡಳಿತವು 24 ಗಂಟೆ ಅವಿರತ ಶ್ರಮ ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

  Published by:MAshok Kumar
  First published: