Praveen Nettar ಅಂತಿಮಯಾತ್ರೆ ವೇಳೆ ಕಟೀಲ್ ಅವರ ಕಾರು ಉರುಳಿಸಲು ಯತ್ನ, ಲಾಠಿ ಚಾರ್ಜ್

ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಜನಾಕ್ರೋಶವನ್ನು ಎದುರಿಸಬೇಕಾಯಿತು. ಕೋಪಗೊಂಡ ಯುವಕರು ಕಾರನ್ನು ಉರುಳಿಸುವ ಮಟ್ಟಕ್ಕೂ ಹೋದರು. ಹಿರಿಯ ನಾಯಕರ ಮಧ್ಯಪ್ರವೇಶದ ನಂತರ, ಜನರು ಕಾರಿನ ಟೈರ್‌ಗಳನ್ನು ಪಂಕ್ಚರ್ ಮಾಡಿ ಓಡಿಹೋದರು.

ಕಾರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು

ಕಾರಿಗೆ ಮುತ್ತಿಗೆ ಹಾಕಿರುವ ಕಾರ್ಯಕರ್ತರು

  • Share this:
ಮಂಗಳೂರು: ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್​​ (BJP worker Praveen Nettar) ಅವರ ಅಂತ್ಯಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು (BJP workers) , ಸಾರ್ವಜನಿಕರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡರು. ಆದರೆ ಭಾವೋದ್ವೇಗಕ್ಕೆ ಒಳಗಾದ  ಗುಂಪೊಂದು ಹಿಂಸಾಚಾರಕ್ಕೆ ತಿರುಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಕಾರನ್ನು ಉರುಳಿಸಲು ಯತ್ನಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್​ ಲಾಠಿ ಚಾರ್ಜ್​​ ಮಾಡಬೇಕಾಯಿತು. ನ್ಯಾಯಕ್ಕಾಗಿ ಆಗ್ರಹಿಸಿ ಹಿಂದೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಸುಮಾರು 30 ನಿಮಿಷಗಳ ಕಾಲ ಪಕ್ಷದ ಅಧ್ಯಕ್ಷರು ಹಾಗೂ ಸಚಿವರಾದ ಸುನೀಲ್ ಕುಮಾರ್, ಎಸ್ ಅಂಗಾರ, ಶಾಸಕ ಸಂಜೀವ ಮಠಂದೂರು ಅವರ ಸಂಚಾರವನ್ನು ಕಾರ್ಯಕರ್ತರು ನಿರ್ಬಂಧಿಸಿದರು ಎಂದು ತಿಳಿದುಬಂದಿದೆ. ಮಧ್ಯಾಹ್ನ 1 ಗಂಟೆಗೆ ಪಾರ್ಥೀವ ಶರೀರ ಬೆಳ್ಳಾರೆಗೆ ಆಗಮಿಸಿದ್ದು, ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಸಕಲ ವ್ಯವಸ್ಥೆ ಮಾಡಲಾಗಿತ್ತು. ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಉಪಸ್ಥಿತರಿದ್ದರು.

ಕಟೀಲ್‌ ಕಾರಿನ ಟೈರ್​​ಗಳು ಪಂಕ್ಚರ್​

ಬೆಳ್ಳಾರೆಯಲ್ಲಿ  ಬಿಜೆಪಿ ಯುವ ಮೋರ್ಚಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಅಗಲಿದ ಆತ್ಮಕ್ಕೆ ಅಂತಿಮ ನಮನ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದ ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಅಂತಿಮ ನಮನ ಸಲ್ಲಿಸಲು ಬೆಳ್ಳಾರೆಗೆ ಆಗಮಿಸಿದ್ದ ಆರ್‌ಎಸ್‌ಎಸ್‌ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಜನಾಕ್ರೋಶವನ್ನು ಎದುರಿಸಬೇಕಾಯಿತು. ಕೋಪಗೊಂಡ ಯುವಕರು ಕಾರನ್ನು ಉರುಳಿಸುವ ಮಟ್ಟಕ್ಕೂ ಹೋದರು. ಹಿರಿಯ ನಾಯಕರ ಮಧ್ಯಪ್ರವೇಶದ ನಂತರ, ಜನರು ಕಾರಿನ ಟೈರ್‌ಗಳನ್ನು ಪಂಕ್ಚರ್ ಮಾಡಿ ಓಡಿಹೋದರು.

ಇದನ್ನೂ ಓದಿ: NIA ಗೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ? ಶಾಸಕ ರೇಣುಕಾಚಾರ್ಯ ರಾಜೀನಾಮೆ? ಬೆಳ್ಳಾರೆಯಲ್ಲಿ ಸೆಕ್ಷನ್ 144 ಜಾರಿ

ಕಲ್ಲು ತೂರಾಟ, ಲಾಠಿ ಚಾರ್ಜ್​​

ಅಂತಿಮ ದರ್ಶನಕ್ಕೆ ಬೇಗನೆ ಆಗಮಿಸದ ಕಾರಣ ಮುಖಂಡರ ವಿರುದ್ಧ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಯಕರ್ತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು. ಸಂಸದರು ಹಾಗೂ ಸಚಿವರು ನೆರೆದಿದ್ದವರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಮುಖಂಡರ ಮಾತು ಕೇಳುವ ಸ್ಥಿತಿಯಲ್ಲಿ ಅವರು ಇರಲಿಲ್ಲ. ಕೊನೆಗೂ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಜನರನ್ನು ತೆರವುಗೊಳಿಸಿದರು. ಶವಯಾತ್ರೆ ಮುಂದೆ ಸಾಗುತ್ತಿದ್ದಂತೆ ನೆರೆದಿದ್ದ ಕೆಲವರು ಕಲ್ಲು ತೂರಾಟ ನಡೆಸಿದರು. ಜನಸಂದಣಿಯನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ ನಂತರ ಒಬ್ಬ ವ್ಯಕ್ತಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಜಿಲ್ಲೆಯಾದ್ಯಂತ ಭದ್ರತೆ

ಹತ್ಯೆಯ ನಂತರ ಕೋಮು ಸೂಕ್ಷ್ಮ ಜಿಲ್ಲೆಯಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಇತ್ತೀಚೆಗೆ ಅದೇ ಪ್ರದೇಶದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಯುವಕನೊಬ್ಬನ ಮತ್ತೊಂದು ಹತ್ಯೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂಬ ಅನುಮಾನ ಬಲಪಂಥೀಯ ಸಂಘಟನೆಗಳಿಂದ ಹುಟ್ಟಿಕೊಂಡಿದ್ದು, ಘಟನೆಯು ಕೋಮು ತಿರುವು ಪಡೆಯುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.

ಬಿಜೆಪಿ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ

ಪ್ರವೀಣ್​ ಹತ್ಯೆ ಖಂಡಿಸಿ, ಬಾಗಲಕೋಟೆ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಗಳಿಂದ ರಾಜೀನಾಮೆಗೆ ನಿಧಾ೯ರ ಮಾಡಿದ್ದಾರೆ. ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹೇಳಿದ್ದಾರೆ. ಜಿಲ್ಲೆಯ ಯುವ ಮೋರ್ಚಾದ 12 ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ರಾಜೀನಾಮೆಗೆ ಮುಂದಾಗಿದ್ದಾರೆ. ಪ್ರವೀಣ್ ಹತ್ಯೆ ಖಂಡಿಸಿ ಕೊಪ್ಪಳ ಯುವ ಮೋರ್ಚಾ ಕಾರ್ಯಕರ್ತರು ಸಹ ರಾಜೀನಾಮೆಗೆ ಮುಂದಾಗಿದ್ದಾರೆ. ಗ್ರಾಮೀಣ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೇಖರ್ ಪಾಟೀಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
Published by:Kavya V
First published: