ಬಿಜೆಪಿ ಯುವ ಮುಖಂಡ, ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ (Praveen Nettaru Murder) ಹಿನ್ನೆಲೆ ಬಿಜೆಪಿ ಇಂದು ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು (Janotsava Programme) ರದ್ದುಗೊಳಿಸಿದೆ. ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ, ರಾಜ್ಯ ಬಿಜೆಪಿ ಸರಕಾರಕ್ಕೆ(BJP Government) ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ʼಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ. ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜಾತಿ, ಧರ್ಮ, ಆಚಾರ, ವಿಚಾರ, ಆಹಾರ, ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ʼಮತಕ್ಕಾಗಿ ಕೋಮುಗಳʼ ಇರಿಯುವುದಾ ಸಾಧನೆನಾ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ ಎಂದು ಕಿಡಿಕಾರಿದ್ದಾರೆ.
ಕೃತಕ ಸಾಂತ್ವನ ಹೇಳಿದರೇನು ಪ್ರಯೋಜನ?
ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ ಎಂದ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: Praveen Murder: ಏಳು SDPI ಕಾರ್ಯಕರ್ತರು ವಶಕ್ಕೆ; ಆತ್ಮೀಯ ಗೆಳೆಯ ಪ್ರವಿಣ್ ಬಗ್ಗೆ ಆರೀಫ್ ಹೇಳಿದ್ದು ಹೀಗೆ
ಬಿಜೆಪಿ ಸರ್ಕಾರಕ್ಕೆ HDK ಎಚ್ಚರಿಕೆ
ಕೇಳುತ್ತಿವೆಯಾ? ಬಿಜೆಪಿಯ ʼಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
*40% ಕಮಿಷನ್
*ಕೋವಿಡ್ ಹೆಸರಿನಲ್ಲಿ ಕೊಳ್ಳೆ
*ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್ ಕೋಟಾ
*ಪಿಎಸ್ಐ ನೇಮಕದಲ್ಲಿ ಕಾಸಿನಾಟ
*ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ
ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು ಎಂದು ಪ್ರಶ್ನೆ ಮಾಡಿದ್ದಾರೆ.
ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Praveen Murder: ಮಧ್ಯರಾತ್ರಿ 12.15ಕ್ಕೆ ಸಿಎಂ ಸುದ್ದಿಗೋಷ್ಠಿ; PFI ಬ್ಯಾನ್ ಆಗುತ್ತಾ?
ಏಳು SDPI ಕಾರ್ಯಕರ್ತರು ವಶಕ್ಕೆ
ಪ್ರವೀಣ್ ನೆಟ್ಟಾರು ಕೊಲೆ (Praveen Nettaru Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು SDPI ಕಾರ್ಯಕರ್ತರನ್ನು (SDPI Activist) ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಶಂಕೆಯ ಹಿನ್ನಲೆಯಲ್ಲಿ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಕಾರ್ಯಕರ್ತರ ಮನೆಗೆ ಆಗಮಿಸಿದ ಪೊಲೀಸರು ಎಳು ಜನರನ್ನು ವಶಕ್ಕೆ ಪಡೆದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ