ಆಡಿದ ಮಾತನ್ನು ಮಾಡಿ ತೋರಿಸಿದ ಡಿಸಿಎಂ ಲಕ್ಷ್ಮಣ ಸವದಿ

ಅಥಣಿಯಲ್ಲಿ 34 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ. ರಾಜ್ಯದಲ್ಲಿ 12 ರಿಂದ 13 ಸ್ಥಾನಗಳನ್ನು ಗೆಲ್ಲುತ್ತೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಆದ ಗತಿಯೇ ಈಗಲೂ ಕಾಂಗ್ರೆಸ್-ಜೆಡಿಎಸ್​ಗೆ ಆಗಲಿದೆ ಎಂದು ಡಿ. 5ರಂದೇ ಸವದಿ ಹೇಳಿದ್ದರು.

ಡಿಸಿಎಂ ಲಕ್ಷ್ಮಣ ಸವದಿ.

ಡಿಸಿಎಂ ಲಕ್ಷ್ಮಣ ಸವದಿ.

  • News18
  • Last Updated :
  • Share this:
ಅಥಣಿ(ಡಿ. 10): ಅಥಣಿ ಮತ್ತು ಕಾಗವಾಡ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದಷ್ಟೇ ಅಲ್ಲ, ಕನಿಷ್ಠ ಇಷ್ಟೇ ಅಂತರದಿಂದ ಗೆಲ್ಲುತ್ತೇವೆಂದು ಕೆಲ ದಿನಗಳ ಹಿಂದೆ ಲಕ್ಷ್ಮಣ ಸವದಿ ಆಡಿದ ಮಾತುಗಳು ನಿಜವಾಗಿವೆ. ಹಾಗೆಯೇ, ಚುನಾವಣಾ ಫಲಿತಾಂಶ ಬಂದ ಒಂದು ದಿನದ ಬಳಿಕ ಆ ಎರಡು ಕ್ಷೇತ್ರಗಳ ನೂತನ ಶಾಸಕರೊಂದಿಗೆ ವಿಧಾನಸೌಧಕ್ಕೆ ಹೋಗುತ್ತೇನೆಂದು ಆಡಿದ ಮಾತನ್ನು ಸವದಿ ಉಳಿಸಿಕೊಳ್ಳುತ್ತಿದ್ದಾರೆ.

ಡಿ. 5 ರಂದು ತಮ್ಮ ಸ್ವಗ್ರಾಮ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಬಿಕೆ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಮತಗಟ್ಟೆ ಸಂಖ್ಯೆ 204ರಲ್ಲಿ ತಮ್ಮ ಹಕ್ಕು ಚಲಾಯಿಸಿದ್ದ ಡಿಸಿಎಂ ಲಕ್ಷ್ಮಣ ಸವದಿ ಉಪಚುನಾವಣೆ ಬಗ್ಗೆ ನ್ಯೂಸ್18 ಕನ್ನಡ ಜೊತೆ ಒಂದಷ್ಟು ವಿಚಾರ ಹಂಚಿಕೊಂಡಿದ್ದರು.

ಇದನ್ನೂ ಓದಿ: 12 ಮಂದಿಗೆ ಮಂತ್ರಿಗಿರಿ ನಿಶ್ಚಿತ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ; ಗುರುವಾರ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ

ಅಥಣಿ ಮತ್ತು ಕಾಗವಾಡ ಎರಡೂ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸವಾಗಬೇಕು. ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಿದೆ. ಮುಳುಗಡೆ ಪ್ರದೇಶಗಳ ಸ್ಥಳಾಂತರ, ನ್ಯಾಯ ಸಮ್ಮತ ಪರಿಹಾರ ಸಿಗಬೇಕೆಂದರೆ ಆಡಳಿತ ಪಕ್ಷದಿಂದ ಸಾಧ್ಯ. ಅಲ್ಲದೇ, ಕಳೆದ 15-16 ವರ್ಷಗಳಲ್ಲಿ ತಾವು ಈ ಕ್ಸೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಮತದಾರರಿಗೆ ಗೊತ್ತಿದೆ. ಬಿಜೆಪಿಯಿಂದ ಮಾತ್ರ ಅಭಿವದ್ಧಿ ಸಾಧ್ಯ ಎಂಬುದು ಮತದಾರರಿಗೆ ಗೊತ್ತಿರುವುದರಿಂದ ಮತ್ತೆ ಇಲ್ಲಿ ಅಭಿವೃದ್ಧಿಯಾಗಬೇಕು ಎಂದು ಮತದಾರರು ಬಿಜೆಪಿ ಕೈ ಹಿಡಿಯಲಿದ್ದಾರೆ ಎಂದು ಅವರು ತಿಳಿಸಿದ್ದರು.

ಅಥಣಿಯಲ್ಲಿ 34 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಅಥಣಿ ಮತಕ್ಷೇತ್ರದಿಂದ 34 ಸಾವಿರ ಲೀಡ್ ಕೊಟ್ಟಿದ್ದೇವೆ. ಅದಕ್ಕಿಂತದಲೂ ಹೆಚ್ಚು ಮತಗಳ ಅಂತರದಿಂದ ಅಥಣಿಯಲ್ಲಿ ಗೆಲ್ಲುತ್ತೇವೆ. ರಾಜ್ಯದಲ್ಲಿ 12 ರಿಂದ 13 ಸ್ಥಾನಗಳನ್ನು ಗೆಲ್ಲುತ್ತೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಆದ ಗತಿಯೇ ಕಾಂಗ್ರೆಸ್-ಜೆಡಿಎಸ್​ಗೆ ಆಗಲಿದೆ. ಅವರಿಗೆ ಸಮಾಧಾನಕರ ಬಹುಮಾನ ಎಂಬಂತೆ ಒಂದೆರಡು ಸ್ಥಾನ ಬರಬಹುದು. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿದ ವಾಗ್ದಾನದಂತೆ ಅಥಣಿ ಮತ್ತು ಕಾಗವಾಡಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಮಹೇಶ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ ಡಿ. 9 ರಂದು ಗೆಲ್ಲಿಸಿಕೊಂಡು ಬರುತ್ತೇನೆ. ಡಿ. 10 ರಂದು ಇಬ್ಬರೂ ನೂತನ ಶಾಸಕರೊಂದಿಗೆ ವಿಧಾನಸೌಧಕ್ಕೆ ಹೋಗುತ್ತೇನೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಡಿ. 5 ರಂದೇ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿ ಭವಿಷ್ಯ ನುಡಿದಿದ್ದರು.

ಇದನ್ನೂ ಓದಿ: ಪಕ್ಷದೊಳಗಿನ ಹಿತಶತ್ರುಗಳ ವಿರುದ್ಧ ಹೋರಾಡಲು ನನ್ನಿಂದ ಅಸಾಧ್ಯ; ರಾಜೀನಾಮೆ ಹಿಂದಿನ ಕಾರಣ ತಿಳಿಸಿದ ಸಿದ್ದರಾಮಯ್ಯ

ಡಿ. 5 ರಂದು ಡಿಸಿಎಂ ಲಕ್ಷ್ಮಣ ಸವದಿ ನುಡಿದಿದ್ದ ಭವಿಷ್ಯ ಡಿ. 9 ರಂದು ನಿಜವಾಗಿದೆ. ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಅನರ್ಹ ಶಾಸಕ ಮಹೇಶ ಕುಮಟಳ್ಳಿ 39,989 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದೆ. ಅಷ್ಟೇ ಅಲ್ಲ, ಅಥಣಿಯಲ್ಲಿ ಮಹೇಶ ಕುಮಟಳ್ಳಿ ಮತ್ತು ಕಾಗವಾಡದಲ್ಲಿ ಶ್ರೀಮಂತ ಪಾಟೀಲ ಅವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ, ಈಗ ಈ ಇಬ್ಬರೂ ಬಿಜೆಪಿ ಶಾಸಕರನ್ನು ವಿಧಾನಸೌಧಕ್ಕೆ ಕರೆದುಕೊಂಡು ಹೋಗಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡುವ ಮೂಲಕವೂ ತಮ್ಮ ವಾಗ್ದಾನ ಈಡೇರಿಸಿರುವುದನ್ನು ಸಾಬೀತುಪಡಿಸಲಿದ್ದಾರೆ.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

ನಿಮ್ಮ ನ್ಯೂಸ್ 18 ಕನ್ನಡವನ್ನು ಶೇರ್​​ಚಾಟ್​ನಲ್ಲೂ ಹಿಂಬಾಲಿಸಿ

First published: