PM Modi: ಮೋದಿ ಕಾರ್ಯಕ್ರಮದಲ್ಲಿ ನಳಿನ್ ಕಟೀಲ್ ವಿರುದ್ಧ ಆಕ್ರೋಶಕ್ಕೆ ಸಿದ್ಧತೆ!

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ಕ್ಕೆ ಕಡಲನಗರಿ ಮಂಗಳೂರಿಗೆ ಆಗಮಿಸ್ತಿದ್ದಾರೆ. ಇದರ ನಡುವೆ ಮೋದಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ಕೂಡ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

ಸೆ.2ಕ್ಕೆ ಮಂಗಳೂರಿಗೆ ಮೋದಿ

ಸೆ.2ಕ್ಕೆ ಮಂಗಳೂರಿಗೆ ಮೋದಿ

  • Share this:
ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2ಕ್ಕೆ ಕಡಲನಗರಿ ಮಂಗಳೂರಿಗೆ (Mangaluru) ಆಗಮಿಸ್ತಿದ್ದಾರೆ. ಈಗಾಗಲೇ ಸಿದ್ಧತೆಗಳು (Preparation) ಭರದಿಂದ ಸಾಗಿದೆ. ಮಂಗಳೂರು ನಗರ ಹೊರವಲಯದ ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ (Convention) ತಯಾರಿ ನಡೆಸಲಾಗ್ತಿದೆ. 25 ಎಕರೆ ಪ್ರದೇಶದಲ್ಲಿ ಜರ್ಮನ್ (Germen) ತಂತ್ರಜ್ಞಾನದ ಬೃಹತ್ ಪೆಂಡಾಲ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ಕೂಡ ನಡೆಯುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಚರ್ಚೆ ನಡೆಯುತ್ತಿದೆ. ಈ ಸಂಬಂಧ ಎಚ್ಚೆತ್ತ ಮಂಗಳೂರು ಪೊಲೀಸರು 2 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಳೀನ್ ಕಟೀಲ್ ಫೋಟೋವನ್ನು ಎಡಿಟ್!
ನಳೀನ್ ಕುಮಾರ್ ಕಟೀಲ್ ಫೋಟೋವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಲಾಗಿದೆ. ಕಾರ್ಯಕ್ರಮದಲ್ಲಿ ಗೊಂದಲ ಉಂಟುಮಾಡುವ ರೀತಿ ಪೋಸ್ಟ್ ಮಾಡಲಾಗಿದೆ. ಗೊಂದಲ ನಿರ್ಮಾಣ ಮಾಡಲು ವಾಟ್ಸಪ್ ಗ್ರೂಪ್ ಮಾಡಲಾಗಿದೆ. ಈ ಗ್ರೂಪ್ ಗಳನ್ನು ಸೋಷಿಯಲ್ ಮಿಡಿಯಾ ಸೆಲ್ ಮಾನಿಟರ್ ಮಾಡುತ್ತಿದೆ.

Preparation for outrage against Nalin kumar Kateel in prime minister Modi program
ನಳಿನ್​​ ಕುಮಾರ್​ ಕಟೀಲ್​​


ಮಂಗಳೂರಿನಲ್ಲಿ 2 ಕೇಸ್ ದಾಖಲು
ಸದ್ಯ ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಈ ಬಗ್ಗೆ ಎರಡು ಪ್ರಕರಣ ದಾಖಲು ಮಾಡಲಾಗಿದೆ. ಈ ಪೋಸ್ಟ್ ಅಪರಾಧ ಅಂತಾ ಆದ್ರೆ ಪ್ರಕರಣ ದಾಖಲು ಮಾಡುತ್ತೇವೆ. ಇಲ್ಲದಿದ್ದಲ್ಲಿ ಅವರಿದಿಂದ ಶೂರಿಟಿ ಬಾಂಡ್ ಪಡೆಯಲಿದ್ದೇವೆ ಅಂತಾ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪೋಕ್ಸೋ ವ್ಯೂಹದಲ್ಲಿ ಮುರುಘಾ ಶ್ರೀಗಳು; ಡಿಕೆ ಮೇಲೆ ರಾಹುಲ್ ಗಾಂಧಿ ಮುನಿಸು!

ಆಕ್ಷೇಪಾರ್ಹ ಪೋಸ್ಟ್ ಮಾಡಿದ್ರೆ ಕ್ರಮದ ಎಚ್ಚರಿಕೆ
ಈಗಾಗಲೇ ಪೋಸ್ಟ್ ಸಂಬಂಧ ಎರಡು ಪ್ರಕರಣ ದಾಖಲಿಸಿದ್ದೇವೆ. ಪೋಸ್ಟ್ ಮಾಡಿದವರನ್ನು ವಶಕ್ಕೆ ಪಡೆಯುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ ಅಂತಾ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದ್ದಾರೆ.

ಯು.ಟಿ.ಖಾದರ್ ಆರೋಪ
ಸೆಪ್ಟೆಂಬರ್ 2ರಂದು ನಡೆಯೋ ಮೋದಿ ಕಾರ್ಯಕ್ರಮಕ್ಕೆ ಬಲವಂತವಾಗಿ ಜನರಿಗೆ ಆಹ್ವಾನ ಕೊಡಲಾಗ್ತಿದೆ ಅಂತಾ ಮಂಗಳೂರಿನಲ್ಲಿ ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಪಿಡಿಒಗಳಿಗೆ ನೊಟೀಸ್ ಕಳುಹಿಸಲಾಗಿದೆ ಎಂದರು.

ಪ್ರತಿ ಗ್ರಾಮದಿಂದ 250 ಜನರನ್ನು ಕರೆತರಲು ಜಿಲ್ಲಾಡಳಿತ ಸೂಚನೆ ನೀಡಿದೆ ಅಂತಾ ಹೇಳಿದ್ರು. ಕಂದಾಯ ಇಲಾಖೆಯಿಂದ ವಿ.ಎ ಸೇರಿದಂತೆ ಎಲ್ಲಾ ಅಧಿಕಾರಿಗಳು ಬರಬೇಕು ಅಂತಾ ಸೂಚನೆ ನೀಡಲಾಗಿದೆ. ಪಂಚಾಯ್ತಿ ಕಾರ್ಯದರ್ಶಿ, ಲೈನ್ ಮ್ಯಾನ್, ನೀರು ಬಿಡುವವನಿಗೂ ನೋಟಿಸ್ ಹೋಗಿದೆ ಎಂದರು.

ಸಿಕ್ಕಸಿಕ್ಕವರಿಗೆ ನೋಟಿಸ್- ಖಾದರ್ ಕಿಡಿ
ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಎಲ್ಲಾ ಮಕ್ಕಳು ಕಾರ್ಯಕ್ರಮದಲ್ಲಿ ಬರಬೇಕು ಅಂತಾ ಸೂಚನೆ ನೀಡಲಾಗಿದೆ ಅಂತಾ ಕಿಡಿಕಾರಿದ್ರು. ಎಲ್ಲಾ ಬ್ಯಾಂಕ್​​ಗಳಿಗೆ ಸೂಚನೆ ನೀಡಿ, ಬ್ಯಾಂಕ್ ಸವಲತ್ತು ಪಡೆದವರನ್ನು ಕರೆತರಬೇಕೆಂದು ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ನೀಡಿದಾಗ ಕೆಳ ಅಧಿಕಾರಿಗಳು ಜನರನ್ನು ಕರೆತರಲೇಬೇಕು.

ಇಲ್ಲವಾದಲ್ಲಿ ಅಧಿಕಾರಿಗಳು ಅವರ ಮನೆಯವರನ್ನು ಆದರೂ ಕರೆತರಬೇಕು. ಒಂದು ವಾರದಿಂದ ಎಲ್ಲಾ ಅಧಿಕಾರಿಗಳು ಬ್ಯುಸಿ ಇದ್ದಾರೆ. ಸಿಕ್ಕಸಿಕ್ಕ ಮೀನುಗಾರರಿಗೂ ಕಿಸಾನ್ ಕಾರ್ಡ್ ನೀಡಿ ಕಾರ್ಯಕ್ರಮ ಕ್ಕೆ ಬರಲು ಸೂಚಿಸಿದ್ದಾರೆ. ಇಷ್ಟೆಲ್ಲಾ ಸೂಚನೆ ನೀಡಿದ ಬಳಿಕ ಜನಸಾಗರವೇ ಬರಲಿದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ವಾಗ್ದಾಳಿ; ಎರಡೇ ನಿಮಿಷಕ್ಕೆ ಟ್ವೀಟ್ ಡಿಲೀಟ್

ಪ್ರಧಾನಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆ
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಕೂಳೂರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ 25 ಎಕರೆ ಪ್ರದೇಶದಲ್ಲಿ ಜರ್ಮನ್ ತಂತ್ರಜ್ಞಾನದ ಬೃಹತ್ ಪೆಂಡಾಲ್ ಅಳವಡಿಕೆ ಕಾರ್ಯ ನಡೆಯುತ್ತಿದೆ. ಸಮಾವೇಶ ನಡೆಯುವ ಸ್ಥಳದಲ್ಲಿ ಸಾವಿರಾರು ಕಾರ್ಮಿಕರು ಕೆಲಸ ಮಾಡ್ತಿದ್ದಾರೆ. ಮೈದಾನದ ಸುತ್ತ ತಡೆ ಬೇಲಿ ಅಳವಡಿಕೆ ಮಾಡಲಾಗಿದೆ. ಸ್ಟೀಲ್ ಶೀಟ್ ಗಳ ಮೇಲೆ ಬಿಳಿ ಬಟ್ಟೆ ಹಾಕಿ ತಡೆಬೇಲಿ ನಿರ್ಮಿಸಲಾಗಿದೆ. ಸ್ಥಳಕ್ಕೆ ಎಸ್ ಪಿ ಜಿ ಅಧಿಕಾರಿಗಳು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲಿಸಿದರು.
Published by:Thara Kemmara
First published: