HOME » NEWS » State » PREPARING FOR PURCHASE OF SUPPORT PRICE FOR PADDY IN SHIMOGA SESR HRNS

ಶಿವಮೊಗ್ಗದಲ್ಲಿ ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಸಿದ್ಧತೆ; ನೋಂದಣಿ ಮಾಡಿದ ರೈತರಿಗೆ ಮಾತ್ರ ಅವಕಾಶ

ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

news18-kannada
Updated:November 7, 2020, 9:49 PM IST
ಶಿವಮೊಗ್ಗದಲ್ಲಿ ಬೆಂಬಲ ಬೆಲೆಯಡಿ ಭತ್ತ ಖರೀದಿಗೆ ಸಿದ್ಧತೆ; ನೋಂದಣಿ ಮಾಡಿದ ರೈತರಿಗೆ ಮಾತ್ರ ಅವಕಾಶ
ಭತ್ತ
  • Share this:
ಶಿವಮೊಗ್ಗ (ನ.7): ರಾಜ್ಯ ಸರ್ಕಾರ ರೈತರಿಂದ ಬೆಂಬಲ ಬೆಲೆಗೆ ಭತ್ತ ಖರೀದಿಗೆ  ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ  ರೈತರಿಂದ ಭತ್ತ ಖರೀದಿಗೆ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಳ್ಳುತ್ತಿವೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್​ಗೆ 1868  ರೂಪಾಯಿ ಹಾಗೂ ಭತ್ತ ಗ್ರೇಡ್-ಎ 1888 ರೂಪಾಯಿ ದರ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಸಾಮಾನ್ಯ ಭತ್ತ ಗರಿಷ್ಟ 40ಕ್ವಿಂಟಾಲ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಎಕರೆಗೆ ಗೆ 16ಕ್ವಿಂಟಾಲ್​ನಂತೆ ಭತ್ತ ಖರೀದಿ ಮಾಡಲಾಗುತ್ತದೆ.  ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಸಂಗ್ರಹಣಾ ಏಜೆನ್ಸಿಯಾಗಿ ಸರ್ಕಾರ ನೇಮಕ ಮಾಡಿದೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ಖರೀದಿಗೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಈ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದ ಜಿಲ್ಲಾಧಿಕಾರಿ ಶಿವಕುಮಾರ್, ಭತ್ತ ಮಾರಾಟ ಮಾಡಲು ಬಯಸುವ ರೈತರು ಕೃಷಿ ಇಲಾಖೆ ಸಿದ್ಧಪಡಿಸಿರುವ ಪ್ರೂಟ್ಸ್ ದತ್ತಾಂಶದಲ್ಲಿ ತಮ್ಮ ಹೆಸರು ನೋಂದಣಿ ಮಾಡಬೇಕು ಎಂದು ಹೇಳಿದರು.  ನೋಂದಣಿ ಪ್ರಕ್ರಿಯೆ ನವೆಂಬರ್ 30 ರಿಂದ ಡಿಸೆಂಬರ್ 30 ರವರೆಗೆ ನಡೆಯಲಿದೆ. ನೋಂದಣಿ ಆಗದ ರೈತರಿಂದ ಭತ್ತ ಖರೀದಿಗೆ ಅವಕಾಶವಿಲ್ಲ. ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ನೋಂದಾಯಿತ ರೈತರಿಂದ ಭತ್ತವನ್ನು ಖರೀದಿಸಿ ಮಿಲ್​ಗಳಲ್ಲಿ ಶೇಖರಿಸುವ ಹಾಗೂ ಪರಿವರ್ತಿಸುವ ಕಾರ್ಯ ಡಿಸೆಂಬರ್ 20 ರಿಂದ ಪ್ರಾರಂಭವಾಗಿ ಮುಂದಿನ ಮಾರ್ಚ್ 20 ರ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದನ್ನು ಓದಿ: ಬಂಜರು ಭೂಮಿ ಗೇಣಿಗೆ ಪಡೆದು ಬಂಗಾರದ ಬೆಳೆ ಬೆಳೆದ ರೈತ; ಕಾರವಾರದಲ್ಲೊಬ್ಬ ಮಾದರಿ ಕೃಷಿಕ

ಭತ್ತವನ್ನು ನಿಗದಿತ ಅಕ್ಕಿಗಿರಣಿಗಳ ಮೂಲಕ ನೇರವಾಗಿ ಪಡೆದುಕೊಳ್ಳಲು ಸರ್ಕಾರ ಸೂಚಿಸಿದೆ. ಜಿಲ್ಲೆಯಲ್ಲಿರುವ ಅಕ್ಕಿ ಗಿರಣಿಗಳ ಹಲ್ಲಿಂಗ್ ಸಾಮಥ್ರ್ಯ ಮತ್ತು ಭತ್ತ ಸಂಗ್ರಹಣೆ ಸಾಮಥ್ರ್ಯದ ವಿವರಗಳನ್ನು ಪಡೆದು ನವೆಂಬರ್ 25 ರ ಒಳಗಾಗಿ ನೋಂದಣಿ ಮಾಡಬೇಕು. ಭತ್ತ ಗುಣಮಟ್ಟ ಪರಿಶೀಲನೆಗೆ ಕೃಷಿ ಇಲಾಖೆ ಗ್ರೇಡರ್ಗಳನ್ನು ನಿಯೋಜಿಸಿ ಸೂಕ್ತ ತರಬೇತಿ ನೀಡಬೇಕು. ಭತ್ತ ಮಾರಾಟ ಮಾಡುವ ರೈತರಿಗೆ 3 ದಿನಗಳ ಒಳಗಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕು ಎಂದು  ಸ್ಪಷ್ಟಪಡಿಸಿದರು.

ರೈತರು ಭತ್ತವನ್ನು ತಮ್ಮ ಚೀಲಗಳಲ್ಲಿ ತಂದು ಅಕ್ಕಿ ಗಿರಣಿಗೆ ಸಲ್ಲಿಸಿದಾಗ ಪ್ರತಿ ಕ್ವಿಂಟಾಲ್ ಚೀಲಕ್ಕೆ ರೂ.6 ರಂತೆ ಏಜೆನ್ಸಿಗಳು ಪಾವತಿ ಮಾಡಬೇಕು. ರೈತರಿಂದ ಪಡೆದ ಭತ್ತದ ಮಾಹಿತಿಯನ್ನು ಗಿರಣಿ ಮಾಲಿಕರು ಆನ್​ಲೈನ್​ನಲ್ಲಿ ನಮೂದಿಸಬೇಕು. ಗುಣಮಟ್ಟ ಪರಿಶೀಲನಾ ಅಧಿಕಾರಿ ನೀಡಿರುವ ಒಪ್ಪಿಗೆ ಪತ್ರವನ್ನು ಸಹ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. ಭತ್ತ ಖರೀದಿ, ಹಣ ಪಾವತಿ, ಗುಣಮಟ್ಟ ಪರಿಶೀಲನೆ ಇತ್ಯಾದಿ ಕಾರ್ಯಗಳಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಇನ್ನು ಈ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 89,706 ಹೆಕ್ಟೇರ್ ವಿಸ್ತೀರ್ಣದಲ್ಲಿ ಭತ್ತ ಬೆಳೆಯಲಾಗಿಜದೆ. 3,66,412 ಟನ್ ಉತ್ಪಾದನೆ ನಿರೀಕ್ಷಿಸಲಾಗಿದೆ ಎಂದರು.
Published by: Seema R
First published: November 7, 2020, 9:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading