HOME » NEWS » State » PRESIDENT RAM NATH KOVIND WILL INAUGURATES SUNNYSIDE MILITARY STATUE AT KODAGU TODAY LG

ಇಂದು ಕೊಡವರ ನಾಡಲ್ಲಿ ರಾಷ್ಟ್ರಪತಿ: ಜನರಲ್ ಕೆ.ಎಸ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಕ್ಷಣಗಣನೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತೆರಳುವ ಮಾರ್ಗಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ. ಮಧ್ಯಾಹ್ನ 3 ಗಂಟೆಗೆ ತಿಮ್ಮಯ್ಯ ಮ್ಯೂಸಿಎಂಗೆ ಆಗಮಿಸಲಿರುವ ರಾಮನಾಥ್ ಕೋವಿಂದ್ 45 ನಿಮಿಷಗಳ ಕಾಲ ಮ್ಯೂಸಿಯಂನಲ್ಲೇ ಇರಲಿದ್ದಾರೆ. ಬಳಿಕ ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.

news18-kannada
Updated:February 6, 2021, 10:02 AM IST
ಇಂದು ಕೊಡವರ ನಾಡಲ್ಲಿ ರಾಷ್ಟ್ರಪತಿ: ಜನರಲ್ ಕೆ.ಎಸ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಕ್ಷಣಗಣನೆ
ರಾಷ್ಟ್ರಪತಿ ರಾಮನಾಥ ಕೋವಿಂದ್
  • Share this:
ಕೊಡಗು(ಫೆ.06): ಸೇನೆಯ ಎರಡನೇ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತ್ತಿಸಿಕೊಂಡಿದ್ದ ಕೊಡಗಿನ ಕೆ.ಎಸ್ ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂ ಅನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಉದ್ಘಾಟಿಸಲಿದ್ದು, ರಾಷ್ಟ್ರಪತಿ ಆಗಮನಕ್ಕೆ ಕೊಡಗು ಸಜ್ಜುಗೊಂಡಿದೆ. ಮ್ಯೂಸಿಯಂ ಈಗಾಗಲೇ ಸಂಪೂರ್ಣ ಸಿದ್ಧಗೊಂಡಿದ್ದರೆ, ಯುದ್ಧಟ್ಯಾಂಕರ್, ಸೂಪರ್ ಸಾನಿಕ್ ಯುದ್ಧವಿಮಾನ ಮುಂದಾವುಗಳನ್ನು ಅಂತಿಮವಾಗಿ ಸಿದ್ಧಗೊಳಿಸಲಾಗಿದೆ. ಇಡೀ ಮ್ಯೂಸಿಯಂ ಸಿಂಗಾರಗೊಂಡಿದ್ದು, ಅದರ ವೈಮಾನಿಕ ದೃಶ್ಯವನ್ನು ನೀವೂ ಕಣ್ತುಂಬಿಕೊಳ್ಳಬಹುದು.

ಯುದ್ಧಸ್ಮಾರಕ ಮತ್ತು ಮ್ಯೂಸಿಯಂ ಒಳಗೆ ಹಾಗೂ ಹೊರಗೆ ಸಂಪೂರ್ಣ ಸೈನಿಕರು ಮತ್ತು ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮ್ಯೂಸಿಯಂ ಒಳಗೆ ಈಗಾಗಲೇ ಡಾಗ್ ಸ್ಕ್ವಾಡ್ ಕೂಡ ಪರಿಶೀಲನೆ ನಡೆಸಿದ್ದು, ಮ್ಯೂಸಿಯಂ ಮತ್ತು ಯುದ್ಧ ಸ್ಮಾರಕ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸಿಂಗ್ ಮಾಡಲಾಗಿದೆ. ಸಂಪೂರ್ಣ ಪೊಲೀಸ್ ಮತ್ತು ಸೈನಿಕರ ಹಿಡಿತದಲ್ಲಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಮಡಿಕೇರಿಯ ಎಫ್‍ಎಂಸಿ ಕಾಲೇಜು ಮೈದಾನದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಗೆ ಬರಲಿರುವ, ರಾಮನಾಥ್ ಕೋವಿಂದ್ ಅವರು ಅಲ್ಲಿಂದ ಆರ್ಮಿ ಕ್ಯಾಂಟಿನ್, ಎಲ್‍ಐಸಿ ರಸ್ತೆ ರಾಜಾಸೀಟ್ ರಸ್ತೆ ಮತ್ತು ಈಸ್ಟ್ ಎಂಡ್ ಹೊಟೇಲ್ ರಸ್ತೆ ಮೂಲಕ ಸುದರ್ಶನ್ ಗೆಸ್ಟ್ ಹೌಸ್ ಗೆ ತೆರಳಲಿದ್ದಾರೆ.

Chakka Jam: ದೆಹಲಿ ಹೋರಾಟ ಬೆಂಬಲಿಸಿ ರಾಜ್ಯದಲ್ಲೂ ಪ್ರತಿಭಟನೆ; ಇಂದು ಎಲ್ಲೆಲ್ಲಿ ರಸ್ತೆ ತಡೆ?

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತೆರಳುವ ಮಾರ್ಗಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ. ಮಧ್ಯಾಹ್ನ 3 ಗಂಟೆಗೆ ತಿಮ್ಮಯ್ಯ ಮ್ಯೂಸಿಎಂಗೆ ಆಗಮಿಸಲಿರುವ ರಾಮನಾಥ್ ಕೋವಿಂದ್ 45 ನಿಮಿಷಗಳ ಕಾಲ ಮ್ಯೂಸಿಯಂನಲ್ಲೇ ಇರಲಿದ್ದಾರೆ. ಬಳಿಕ ಅಲ್ಲಿಂದ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ.

ಸೇನಾ ನಾಯಕರಾಗಿದ್ದ ಜನರಲ್ ಕೆ.ಎಸ್ ತಿಮ್ಮಯ್ಯ ಅವರ ಸನ್ನಿಸೈಡ್ ಮ್ಯೂಸಿಯಂ ಉದ್ಘಾಟನೆಗೆ ಮಡಿಕೇರಿಗೆ ಆಗಮಿಸುತ್ತಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಸ್ವಕುಟುಂಬ ಸಮೇತರಾಗಿ ಇಂದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈಗಾಗಲೇ ತಲಕಾವೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದು, ತಲಕಾವೇರಿಯ ಹೆಬ್ಬಾಗಿಲಿನಲ್ಲೇ ಸೇನೆ ಬಿಡಾರಗಳನ್ನು ಹಾಕಿ ಹೈಅಲರ್ಟ್ ಆಗಿದೆ. ತಲಕಾವೇರಿಯ ಎಲ್ಲಡೆ ರೆಡ್ ಕಾರ್ಪೆಟ್ ಹಾಕಿ ಸಿದ್ದಗೊಳಿಸಲಾಗಿದೆ.
Youtube Video

ಬಾಗಮಂಡಲ ಸಮೀಪದ ಚೆಟ್ಟಿಮಾನಿಯಲ್ಲಿ ಸಿದ್ಧಗೊಂಡಿರುವ ಹೆಲಿಪ್ಯಾಡ್ ನಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ರಾಮನಾಥ್ ಕೋವಿಂದ್ ಅವರು ಇಳಿಯಲಿದ್ದಾರೆ. ಬಳಿಕ ಕಾರಿನ ಮೂಲಕ ತಲಕಾವೇರಿಗೆ ತೆರಳಿಲಿದ್ದು, 12 : 30 ರವರೆಗೆ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಹೀಗಾಗಿ ನಾಳೆ ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಬಾಗಮಂಡಲದಿಂದ ತಲಕಾವೇರಿವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಪೊಲೀಸ್, ಸೇನಾಧಿಕಾರಿಗಳು ಅಗ್ನಿಶಾಮಕ ದಳ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ರೂಟ್ ಮಾರ್ಚ್ ಮಾಡಿ ಪೂರ್ವ ತಯಾರಿ ನಡೆಸಿದ್ದಾರೆ.
Published by: Latha CG
First published: February 6, 2021, 10:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories