ಎರಡು ದಿನಗಳ ಪ್ರವಾಸಕ್ಕಾಗಿ ಪತ್ನಿಸಮೇತ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಇಂದು ಸಂಜೆ ವಿಶೇಷ ವಿಮಾನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪತ್ನಿ ಸಮೇತರಾಗಿ ಆಗಮಿಸಿದರು. ರಾಷ್ಟ್ರಪತಿಗಳನ್ನು ರಾಜ್ಯಪಾಲ ವಿ.ಆರ್.ವಾಲಾ ಹಾಗೂ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಜಿಲ್ಲೆಯ ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

news18-kannada
Updated:October 10, 2019, 7:05 PM IST
ಎರಡು ದಿನಗಳ ಪ್ರವಾಸಕ್ಕಾಗಿ ಪತ್ನಿಸಮೇತ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದ ರಾಜ್ಯಪಾಲ ವಿ.ಆರ್.ವಾಲಾ
  • Share this:
ಮೈಸೂರು: ಎರಡು ದಿನಗಳ ಕಾಲ ಪ್ರವಾಸಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಾಂಸ್ಕೃತಿಕ ರಾಜಧಾನಿ ಮೈಸೂರಿಗೆ ಆಗಮಿಸಿದರು.

ಮೈಸೂರು ಅರಮನೆಯಲ್ಲಿ ನಡೆಯಲಿರುವ ಜಯ ಚಾಮರಾಜೇಂದ್ರ ಒಡೆಯರ್ ಜನ್ಮ ಶತಾಬ್ದಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ನಾಳೆ ಚಾಮುಂಡಿಬೆಟ್ಟ, ನಂಜನಗೂಡು ದೇವಾಲಯ ಹಾಗೂ ಜೆಎಸ್‌ಎಸ್ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಸಂಜೆ ವಿಶೇಷ ವಿಮಾನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪತ್ನಿ ಸಮೇತರಾಗಿ ಆಗಮಿಸಿದರು. ರಾಷ್ಟ್ರಪತಿಗಳನ್ನು ರಾಜ್ಯಪಾಲ ವಿ.ಆರ್.ವಾಲಾ ಹಾಗೂ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಜಿಲ್ಲೆಯ ಅಧಿಕಾರಿಗಳು ಹೂವಿನ ಹಾರ ಹಾಕುವ ಮೂಲಕ ಸ್ವಾಗತಿಸಿದರು.

First published:October 10, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading