DK Shivakumar Tweet: ಬಿಜೆಪಿ ಪಕ್ಷಕ್ಕೆ ಸೇರುವಂತೆ ಒತ್ತಡ; ಒಪ್ಪದಿದ್ದಕ್ಕೆ ನನ್ನ ಮೇಲೆ ಬೀಳ್ತಿವೆ ಕೇಸ್

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ ಎಂದು ಡಿ.ಕೆ ಶಿವಕುಮಾರ್​ ಟ್ವೀಟ್​ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

  • Share this:
ಬೆಂಗಳೂರು (ಮೇ 26): ಡಿಕೆ ಶಿವಕುಮಾರ್ (D.K Shivakumar) ವಿರುದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED Officer) ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ವಿಚಾರಕ್ಕೆ ಡಿಕೆ ಬ್ರದರ್ಸ್​ ಕೆಂಡಾಮಂಡಲರಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವ್ರು ಟ್ವೀಟ್ (Tweet)​ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ ಎಂದು ಟ್ಟೀಟ್​ ಮಾಡಿದ್ದಾರೆ. ಇದೆಲ್ಲಾ ಬಿಜೆಪಿ ಷಡ್ಯಂತರ ಎಂದು ಡಿ.ಕೆ ಶಿವಕುಮಾರ್​ ಕಿಡಿಕಾರಿದ್ದಾರೆ. 

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ

BJP ಪಕ್ಷಕ್ಕೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಅದಕ್ಕೆ ಒಪ್ಪದಿದ್ದಕ್ಕೆ ಸಂಚು ರೂಪಿಸಲಾಗಿದೆ. ಸರ್ಕಾರಿ ಸಂಸ್ಥೆಗಳು ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿವೆ. ನನ್ನನ್ನು ಹೆದರಿಸುವುದು ಅಷ್ಟು ಸುಲಭವಲ್ಲ. ಬಿಜೆಪಿಯ 40% ಕಮಿಷನ್ ಸರ್ಕಾರದಿಂದ ನಾಡಿನ ಜನ ಬೇಸತ್ತಿದ್ದಾರೆ. ಈ ರಾಜಕೀಯ ಸೇಡಿಗೆ ಸರಿಯಾದ ಉತ್ತರ ಸಿಗಲಿದೆ.



ಡಿಕೆ ಶಿವಕುಮಾರ್  ಮತ್ತೆ ಸಂಕಷ್ಟ

ಕೆಪಿಸಿಸಿ ಅಧ್ಯಕ್ಷ  ಡಿಕೆ ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹಣ ಅಕ್ರಮ ವಹಿವಾಟು ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ  2019ರಲ್ಲಿ ದಾಖಲಿಸಿದ್ದ ಪ್ರಕರಣ  ಸಂಬಂಧ ದೆಹಲಿಯ ಇಡಿ ಅಧಿಕಾರಿಗಳು  ದೋಷಾರೋಪ ಪಟ್ಟಿ (Charge Sheet) ಸಲ್ಲಿಸಿದ್ದಾರೆ. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು (IT Officers) ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್‌ಎ ಕಾಯ್ದೆ (PMLA Act) ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು.

ಚಾರ್ಜ್‌ ಶೀಟ್ ಸಲ್ಲಿಕೆ

ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ ಶೀಟ್ ಸಲ್ಲಿಕೆಯಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಹೊಸದಾಗಿ ಆರೋಪ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಕೂಡ ಕಾನೂನಿಗೆ ವಿರುದ್ಧವಾಗಿ ಆದಾಯ ತೆರಿಗೆ ಇಲಾಖೆಯವರು ಸಾಕಷ್ಟು ಆರೋಪಗಳನ್ನು ಸೃಷ್ಟಿ ಮಾಡಿದ್ದಾರೆ. ನನಗೆ ಪ್ರತಿ ಬರಲಿ, ಈ ದೇಶದಲ್ಲಿ ಕಾನೂನು, ನ್ಯಾಯ ನೀತಿ ಇದೆ, ಅವುಗಳ ಮೇಲೆ ನಂಬಿಕೆಯಿದೆ, ನಾನು ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ರಾಜಕೀಯಾಗಿ ನನ್ನ ವಿರುದ್ಧ ನಡೆಸಿದ ಷಡ್ಯಂತ್ರ ಎಂದಿದ್ದಾರೆ.

ಇದನ್ನೂ ಓದಿ: English ಕಲಿಯೋದು ಕಷ್ಟ ಅಂತ ವಿಷ ಕುಡಿದ ವಿದ್ಯಾರ್ಥಿ! ಈಗ ಬಾಲಕನ ಪರಿಸ್ಥಿತಿ ಹೇಗಿದೆ?

ಡಿಕೆ ಶಿವಕುಮಾರ್ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
ಡಿಕೆ ಶಿವಕುಮಾರ್ ವಿರುದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಒಡೆತನಕ್ಕೆ ಸೇರಿದ ಪ್ಲಾಟ್ ನಲ್ಲಿ 8.5 ಕೋಟಿ ರೂ. ಬೇನಾಮಿ ಹಣ ಪತ್ತೆಯಾದ ಬಗ್ಗೆ ಐಟಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ಇಡಿ ಅಧಿಕಾರಿಗಳು ಪಿಎಂಎಲ್ ಎ ಕಾಯ್ದೆ ಅಡಿ 2018 ರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಇದೀಗ ಕೋರ್ಟ್‌ಗೆ ಇಡಿ ಅಧಿಕಾರಿಗಳು ಚಾರ್ಜ್‌ ಶೀಟ್ ಸಲ್ಲಿಸಿದ್ದಾರೆ.
Published by:Pavana HS
First published: